ಶಾಲೆಯಲ್ಲಿ ಹಿಜಾಬ್ ನಿಷೇಧ; ಅಲಹಾಬಾದ್ ಹೈಕೋರ್ಟ್ ತೀರ್ಪು ಪೂರ್ವನಿದರ್ಶನವಲ್ಲ: ಸುಪ್ರೀಂ ಸ್ಪಷ್ಟನೆ

Date:

ಶಾಲೆಯಲ್ಲಿ ಹಿಜಾಬ್ ಧರಿಸುವ ಹಕ್ಕನ್ನು ನಿರಾಕರಿಸಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಯಾವುದೇ ಕಾರಣಕ್ಕೂ ‘ಪೂರ್ವನಿದರ್ಶನ’ ಎಂದು ಪರಿಗಣಿಸಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

- Advertisement -

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ಈ ಕುರಿತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣವನ್ನು ಕರ್ನಾಟಕ ಹಿಜಾಬ್ ನಿಷೇಧ ಪ್ರಕರಣದ ಬಾಕಿ ಇರುವ ಮೇಲ್ಮನವಿಗಳೊಂದಿಗೆ ವಿಚಾರಣೆಗೆ ಸೇರಿಸಲು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ ಒಂದೇ ವರ್ಷದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ 500 ವ್ಯಕ್ತಿಗಳ ಸಂಪತ್ತು ಸುಮಾರು 2.2 ಟ್ರಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಇನ್ನೊಂದು ಕಡೆ,...

ಪ್ರಯಾಗ್‌ರಾಜ್‌ನ ಅತ್ತರ್‌ಸುಯಿಯಾದಲ್ಲಿರುವ ಟ್ಯಾಗೋರ್ ಪಬ್ಲಿಕ್ ಶಾಲೆಯಲ್ಲಿ 11ನೇ ತರಗತಿಗೆ ಪ್ರವೇಶ ಪಡೆಯಲು ಬಯಸಿದ್ದ ಸುಕೈನಾ ರಿಜ್ವಿ ಎಂಬ ವಿದ್ಯಾರ್ಥಿನಿಯು ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಿದ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿಯನ್ನು ಆಗಸ್ಟ್ 21ರಂದು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ಇಂದ್ರಜೀತ್ ಶುಕ್ಲಾ ಪೀಠವು ವಜಾಗೊಳಿಸಿತ್ತು.

ಇದನ್ನೂ ಓದಿ: ಹಿಜಾಬ್‌ ಜೊತೆ ಜನಿವಾರಕ್ಕೂ ಅವಕಾಶ : ಬಿಜೆಪಿಯವರ ವಿರೋಧವೇಕೆ?

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಈ ಪೀಠವು ತೀರ್ಪು ನೀಡಿತ್ತು. ಅಲ್ಲದೆ, ಶಾಲೆಗಳು ನಿಗದಿಪಡಿಸಿದ ಸಮವಸ್ತ್ರ ನಿಯಮಗಳಲ್ಲಿ ವಿದ್ಯಾರ್ಥಿಗಳು ಹೆಚ್ಚುವರಿ ವಸ್ತ್ರಗಳನ್ನು ಸೇರಿಸಲು ಒತ್ತಾಯಿಸುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಅಲಹಾಬಾದ್ ಹೈಕೋರ್ಟ್‌ನ ಈ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಮಹಿಳೆಯರ ಸಂಘಟನೆಯಾದ ‘ಮುಸ್ಲಿಂ ವುಮೆನ್ಸ್ ಸ್ಟಡಿ ಸರ್ಕಲ್’ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ತೀರ್ಪು ಸಂವಿಧಾನಬದ್ಧ ಹಕ್ಕುಗಳನ್ನು ಮೊಟಕುಗೊಳಿಸುತ್ತದೆ ಮತ್ತು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

ಅಲ್ಲದೆ, ‘ಅತ್ಯಗತ್ಯ ಧಾರ್ಮಿಕ ಆಚರಣೆ’ ಸಿದ್ಧಾಂತದ ಸಿಂಧುತ್ವವೇ ಸದ್ಯ ಶಬರಿಮಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಒಂಬತ್ತು ನ್ಯಾಯಮೂರ್ತಿಗಳ ಸಂವಿಧಾನ ಪೀಠದ ಮುಂದೆ ವಿಚಾರಣೆಗೆ ಬಾಕಿ ಇರುವಾಗ ಹೈಕೋರ್ಟ್ ಈ ತೀರ್ಪು ನೀಡಿರುವುದು ಸರಿಯಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪು ನೀಡುವಾಗ 2022ರ ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠದ ತೀರ್ಪನ್ನು ಉಲ್ಲೇಖಿಸಿತ್ತು. ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದಿದ್ದ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮೇಲ್ಮನವಿಗಳ ಕುರಿತು 2022ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಭಿನ್ನ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದ್ದು, ಅದು ಇನ್ನೂ ವಿಚಾರಣೆಗೆ ಬಾಕಿ ಇದೆ.

ಈಗ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಯನ್ನೂ ಅದೇ ಪಟ್ಟಿಗೆ ಸೇರಿಸಿರುವ ಸುಪ್ರೀಂ ಕೋರ್ಟ್, ಅಂತಿಮ ತೀರ್ಪು ಬರುವವರೆಗೆ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಬೇರೆ ಪ್ರಕರಣಗಳಿಗೆ ಆಧಾರವಾಗಿ ಬಳಸಬಾರದು ಎಂದು ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಸೀನಾ ಮರಳುವಿಕೆಯ ಘೋಷಣೆ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ ಹೆದ್ದೆರೆಗಳು

ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್‌ನಲ್ಲಿ ತೀವ್ರ ಹಿಂಸಾಚಾರ ನಡೆದಿತ್ತು. ಈ ವಿದ್ಯಾರ್ಥಿ ದಂಗೆಯ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ ಎಸ್‌ಪಿ–ಕಾಂಗ್ರೆಸ್ ಮೈತ್ರಿ ಉತ್ಸಾಹ?

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ...

ದಾವಣಗೆರೆ | ಶಾಲೆಗಳ ಖಾಸಗೀಕರಣ ವಿರೋಧಿಸಿ ಎಸ್‌ಎಫ್‌ಐ ಪ್ರತಿಭಟನೆ

ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರವನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)...