ಶಾಲೆಗಳಲ್ಲಿ ಹಿಜಾಬ್ ಹಾಕುವಂತಿಲ್ಲ, ಜಾತ್ಯತೀತತೆ ಎಂದರೆ ಸಮವಸ್ತ್ರ ಪಾಲನೆ: ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಪರ, ವಿರೋಧ

Date:

ಶಿಕ್ಷಣ ಸಂಸ್ಥೆಗಳಲ್ಲಿ ಜಾತ್ಯತೀತ ವಾತಾವರಣ ಮತ್ತು ಸಮಾನತೆಯನ್ನು ಕಾಯ್ದುಕೊಳ್ಳಲು ಸಮವಸ್ತ್ರ (ಡ್ರೆಸ್‌ಕೋಡ್) ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಶಾಲೆಗೆ ಬರುವುದನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಈ ತೀರ್ಪಿನ ಪರ, ವಿರೋಧ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

- Advertisement -

ಶಾಲೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು ಈ ನಿರ್ಧಾರಕ್ಕೆ ಬಂದಿದೆ. ಶಾಲಾ ಆಡಳಿತ ಮಂಡಳಿಯು ನಿಗದಿಪಡಿಸಿರುವ ಸಮವಸ್ತ್ರ ನಿಯಮಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಕಡ್ಡಾಯವಾಗಿ ಪಾಲಿಸಬೇಕು. ಶಾಲೆಯ ಆವರಣದಲ್ಲಿ ಯಾವುದೇ ಧಾರ್ಮಿಕ ಗುರುತುಗಳಿಗಿಂತ ಸಂಸ್ಥೆಯ ನಿಯಮ ಮತ್ತು ಜಾತ್ಯತೀತತೆಯೇ ಮುಖ್ಯವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: ಜನಿವಾರ ಮತ್ತು ಹಿಜಾಬ್‌: ಯಾರದ್ದು ಪಕ್ಷಪಾತ?

ಶಾಲೆಯು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಾನತೆಯನ್ನು ತರಲು ಸಮವಸ್ತ್ರ ಸಂಹಿತೆಯನ್ನು ಜಾರಿಗೆ ತರುತ್ತದೆ. ಪ್ರತಿಯೊಬ್ಬರಿಗೂ ತಮ್ಮ ಧಾರ್ಮಿಕ ನಂಬಿಕೆಗಳನ್ನು ಆಚರಿಸುವ ಹಕ್ಕು ಇದೆಯಾದರೂ, ಶಿಕ್ಷಣ ಸಂಸ್ಥೆಗಳ ಶಿಸ್ತು ಮತ್ತು ಸಮವಸ್ತ್ರದ ನಿಯಮಗಳನ್ನು ಮೀರಲು ಧಾರ್ಮಿಕ ಆಚರಣೆಗಳನ್ನು ಕಾರಣವಾಗಿ ನೀಡಲಾಗುವುದಿಲ್ಲ ಎಂದು ಪೀಠವು ತಿಳಿಸಿದೆ.

“ಸಮವಸ್ತ್ರವು ವಿದ್ಯಾರ್ಥಿಗಳಲ್ಲಿ ಜಾತಿ, ಧರ್ಮ ಮತ್ತು ಆರ್ಥಿಕ ತಾರತಮ್ಯವನ್ನು ಹೋಗಲಾಡಿಸಿ ಸಮಾನತೆಯ ಭಾವನೆಯನ್ನು ಮೂಡಿಸುತ್ತದೆ. ಶಿಕ್ಷಣ ಸಂಸ್ಥೆಗಳಲ್ಲಿ ನಿಜವಾದ ‘ಜಾತ್ಯತೀತತೆ’ ನೆಲೆಸಬೇಕಾದರೆ ಎಲ್ಲರೂ ಒಂದೇ ರೀತಿಯ ಸಮವಸ್ತ್ರವನ್ನು ಧರಿಸುವುದು ಅತ್ಯಗತ್ಯ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಮೂಲಕ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಹೈಕೋರ್ಟ್ ತೀರ್ಪಿಗೆ ಪರ-ವಿರೋಧ ಚರ್ಚೆ

ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಯಮ ಮತ್ತು ಹಿಜಾಬ್ ಸಂಬಂಧಿಸಿದಂತೆ ಕಾನೂನು, ಸಾಮಾಜಿಕ ಮತ್ತು ಸ್ತ್ರೀವಾದಿ ವಲಯಗಳಲ್ಲಿ ವಿಭಿನ್ನ ಆಯಾಮಗಳ ಚರ್ಚೆ ನಡೆಯುತ್ತಿದೆ. ಸಮವಸ್ತ್ರವು ಜಾತಿ, ಧರ್ಮ, ಆರ್ಥಿಕ ತಾರತಮ್ಯವನ್ನು ಮರೆಸಿ ಎಲ್ಲರೂ ಒಂದೇ ಎಂಬ ಭಾವನೆ ಬೆಳೆಸುತ್ತದೆ ಎಂದು ಪರ ಇರುವವರು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ ಜೊತೆ ಜನಿವಾರಕ್ಕೂ ಅವಕಾಶ : ಬಿಜೆಪಿಯವರ ವಿರೋಧವೇಕೆ?

ಹಿಜಾಬ್ ಮೇಲಿನ ನಿಷೇಧವು ಅಂತಿಮವಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಕಂಠಕವಾಗುತ್ತದೆ. ಸುಪ್ರೀಂ ಕೋರ್ಟ್‌ನ ಪೀಠದಲ್ಲಿದ್ದ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ತಮ್ಮ ಭಿನ್ನಾಭಿಪ್ರಾಯದ ತೀರ್ಪಿನಲ್ಲಿ “ಹಿಜಾಬ್ ಧರಿಸುವ ಕಾರಣಕ್ಕೆ ಹೆಣ್ಣುಮಕ್ಕಳ ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವುದು ಸರಿಯೇ?” ಎಂದು ಪ್ರಶ್ನಿಸಿದ್ದರು. ಈ ಆಯಾಮದಲ್ಲೂ ಚರ್ಚೆಗಳು ನಡೆಯುತ್ತಿದೆ. ಅದಕ್ಕೂ ಮುಖ್ಯವಾಗಿ ಸಂವಿಧಾನದ ವಿಧಿ 19(1)(a) (ಅಭಿವ್ಯಕ್ತಿ ಸ್ವಾತಂತ್ರ್ಯ) ಮತ್ತು ವಿಧಿ 21 (ವೈಯಕ್ತಿಕ ಗೌರವ ಮತ್ತು ಗಾಸ್ಯತೆ) ಅಡಿಯಲ್ಲಿ ಒಬ್ಬ ವ್ಯಕ್ತಿ ಏನು ಧರಿಸಬೇಕು ಎಂಬುದು ಅವರ ವೈಯಕ್ತಿಕ ಆಯ್ಕೆಯಾಗಿರುತ್ತದೆ.

ಸ್ತ್ರೀವಾದಿಗಳಲ್ಲಿ ಈ ವಿಚಾರದಲ್ಲಿ ಎರಡು ಮುಖ್ಯ ದೃಷ್ಟಿಕೋನಗಳಿವೆ. ಹೆಚ್ಚಿನ ಉದಾರವಾದಿ ಮತ್ತು ಭಾರತೀಯ ಸ್ತ್ರೀವಾದಿಗಳ ಪ್ರಕಾರ, ಹಿಜಾಬ್ ಧರಿಸುವುದು ಅಥವಾ ಬಿಡುವುದು ಮಹಿಳೆಯ ವೈಯಕ್ತಿಕ ಆಯ್ಕೆ ಆಗಿರಬೇಕು. ಪಿತೃಪ್ರಧಾನ ವ್ಯವಸ್ಥೆ ಅಥವಾ ಸರ್ಕಾರ — ಯಾರೇ ಆಗಲಿ ಮಹಿಳೆಯರ ಉಡುಪನ್ನು ನಿಯಂತ್ರಿಸುವುದು ಹೆಣ್ಣಿನ ಸ್ವಾತಂತ್ರ್ಯದ ಮೇಲಿನ ಹಸ್ತಕ್ಷೇಪ.

ಇನ್ನೊಂದು ವರ್ಗದ ಸ್ತ್ರೀವಾದಿಗಳ ವಾದದಂತೆ, ಹಿಜಾಬ್ ಅಥವಾ ಪರ್ದಾ ಪದ್ಧತಿಯು ಮೂಲತಃ ಪಿತೃಪ್ರಧಾನ ವ್ಯವಸ್ಥೆಯ ಕುರುಹು. ಶಾಲೆಗಳು ಧಾರ್ಮಿಕ ನಿಯಮಗಳು ಮತ್ತು ಸಮಾಜದ ಪಿತೃಪ್ರಧಾನ ಒತ್ತಡಗಳಿಂದ ಮುಕ್ತವಾಗಿರಬೇಕು. ಹೆಣ್ಣುಮಕ್ಕಳು ಬಾಲ್ಯದಿಂದಲೇ ಧಾರ್ಮಿಕ ಕಟ್ಟುಪಾಡುಗಳಿಂದ ಹೊರಬಂದು ಸಮಾನತೆಯ ವಾತಾವರಣದಲ್ಲಿ ಬೆಳೆಯಲು ಸಮವಸ್ತ್ರ ಸಂಹಿತೆ ನೆರವಾಗುತ್ತದೆ. ಹೀಗೆ ಹಲವು ಆಯಾಮಗಳಲ್ಲಿ ಚರ್ಚೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...