ಹಿಮಾಚಲ | ಕೋಮು ಸಂಘರ್ಷ: ಹಲವು ಗ್ರಾಮಗಳಲ್ಲಿ 6 ದಿನ ನಿಷೇಧಾಜ್ಞೆ

Date:

ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಪೌಂಟಾ ಸಾಹಿಬ್ ಪ್ರದೇಶದ ಗ್ರಾಮಗಳಲ್ಲಿ ಕಳೆದ ವಾರ ಕೋಮು ಸಂಘರ್ಷ ನಡೆದಿದೆ. ಗಲಾಟೆಯಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ನಿಷೇಧಾಜ್ಞೆ ಹೇರಲಾಗಿದೆ. ಗ್ರಾಮಗಳಲ್ಲಿ ಪರಿಸ್ಥಿತಿ ಇನ್ನೂ ಶಾಂತವಾಗದ ಕಾರಣ, ನಿಷೇಧಾಜ್ಞೆಯನ್ನು ಇನ್ನೂ ಆರು ದಿನ (ಜೂನ್ 26ರವರೆಗೆ) ವಿಸ್ತರಿಸಿ ಅಲ್ಲಿನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

- Advertisement -

ಜೂನ್ 13ರಂದು ಹಿಂದು-ಮುಸ್ಲಿಂ ಸಮುದಾಯ ಅಂತರ್ಧಮೀಯ ಪ್ರೇಮಿಗಳು ಊರು ತೊರೆದು ಹೋಗಿದ್ದಾರೆ. ಘಟನೆಯಿಂದಾಗಿ, ಅಂದು ಹಿಂದು-ಮುಸ್ಲಿಂ ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ. ಈಗಲೂ, ಗಲಭೆ ನಡೆಯಬಹುದಾದ ವಾತವಾರಣವೇ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

“ಗ್ರಾಮಗಳಲ್ಲಿ ಭುಗಿಲೆದ್ದಿರುವ ಕೋಮು ಉದ್ವಿಗ್ನತೆ ಮತ್ತು ಅಸ್ಥಿರ ಕಾನೂನು-ಸುವ್ಯವಸ್ಥೆಯ ಕಾರಣದಿಂದಾಗಿ, ಪೋಂಟಾ ಉಪವಿಭಾಗದ ಮಜ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕಿರಾತ್‌ಪುರ, ಮಾಲಿಯನ್, ಫತೇಪುರ್, ಮಿಸ್ಸರ್‌ವಾಲಾ ಹಾಗೂ ಮಜ್ರಾ – ಐದು ಗ್ರಾಮಗಳಲ್ಲಿ ಜೂನ್ 13ರಿಂದ ನಿಷೇಧಾಜ್ಞೆ ಜಾರಿಯಲ್ಲಿದೆ. ಜೂನ್ 26 ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ” ಎಂದು ಸಿರ್ಮೌರ್ ಜಿಲ್ಲಾಧಿಕಾರಿ ಪ್ರಿಯಾಂಕಾ ವರ್ಮಾ ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಟಿವಿಯಲ್ಲಲ್ಲ, ಮನೆಯ ಹೊರಗೆ ಯುದ್ಧ ನಡೆಯುತ್ತಿದೆ: ಇರಾನ್-ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರು

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS)-2023ರ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಲಾಗಿದೆ. ಕಾಯ್ದೆಯ ಅಡಿಯಲ್ಲಿ ನಿಷೇಧಾಜ್ಞೆ ಇರುವ ಗ್ರಾಮಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮಾರಕ ಆಯುಧಗಳನ್ನು ರವಾನಿಸುವುದು, ಸಾರ್ವಜನಿಕ ರ್‍ಯಾಲಿ, ಮೆರವಣಿಗೆ ಅಥವಾ ಉಪವಾಸ ಸತ್ಯಾಗ್ರಹ, ಬೆಂಕಿ ಹೊತ್ತಿಸುವುಂತಹ ವಸ್ತುಗಳನ್ನು ಸಾಗಿಸುವುದು, ಕಲ್ಲು ತೂರಾಟ ಅಥವಾ ಯಾವುದೇ ಆಕ್ಷೇಪಾರ್ಹ ವಸ್ತುಗಳನ್ನು ಸಾಗಿಸುವುದು ಹಾಗೂ ಪ್ರಚೋದನಕಾರಿ ಭಾಷಣಗಳು ಅಥವಾ ಕೋಮು ಅಥವಾ ರಾಜ್ಯ ವಿರೋಧಿ ಹೇಳಿಕೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಈವರೆಗೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಬಿಜೆಪಿ ರಾಜ್ಯ ಮುಖ್ಯಸ್ಥ ರಾಜೀವ್ ಬಿಂದಾಲ್ ಮತ್ತು ಪೋಂಟಾದ ಬಿಜೆಪಿ ಶಾಸಕ ಸುಖ್‌ರಾಮ್ ಚೌಧರಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಇಬ್ಬರಿಗೂ ಮಧ್ಯಂತರ ಜಾಮೀನು ತೊರೆತಿದ್ದು, ಬಂಧನದಿಂದ ಪಾರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...

ಮಧ್ಯಪ್ರದೇಶ | ಭೀಕರ ಅಪಘಾತ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ, 14 ಮಂದಿ ಸಾವು

ಭಕ್ತರ ಮೇಲೆ ಲಾರಿ ಹರಿದು 14ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿ, 28ಕ್ಕೂ...