ನಲುಗಿದ ಹಿಮಾಚಲ: ಭೂಕುಸಿತ, ಪ್ರವಾಹಕ್ಕೆ 259 ಬಲಿ; ರೂ. 1,200 ಕೋಟಿಗೂ ಅಧಿಕ ನಷ್ಟ

Date:

ಹಿಮಾಚಲ ಪ್ರದೇಶದಲ್ಲಿ ಕಳೆದ 64 ದಿನಗಳಲ್ಲಿ ಮಾನ್ಸೂನ್ ಭೀಕರ ವಿಪತ್ತನ್ನುಂಟುಮಾಡಿದೆ. ಜೂನ್ 30ರಿಂದ ಸೆಪ್ಟೆಂಬರ್ 1ರವರೆಗಿನ ಅವಧಿಯಲ್ಲಿ ಭೂಕುಸಿತ, ಪ್ರವಾಹಕ್ಕೆ ಸಿಲುಕಿ ರಾಜ್ಯದ ಒಟ್ಟು 259 ಮಂದಿ ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ತಿಂಗಳ ಅವಧಿಯೊಳಗೆ ಪ್ರಕೃತಿ ವಿಕೋಪದಿಂದ ಸಂಭವಿಸಿದ ಹಾನಿಯಿಂದಾಗಿ, ರೂ. 1,200 ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ದತ್ತಾಂಶ ತಿಳಿಸುತ್ತಿದೆ.

ಇದರಲ್ಲಿ 106 ಮಂದಿ ನೇರವಾಗಿ ಮಳೆ ಮತ್ತು ವಿಪತ್ತು ಸಂಬಂಧಿತ ಘಟನೆಗಳಿಂದ ಸತ್ತಿದ್ದಾರೆ. ಇವುಗಳಲ್ಲಿ 18 ಜನರು ಭೂಕುಸಿತದಲ್ಲಿ ಮತ್ತು 13 ಜನರು ಮುಳುಗಿ ಸಾವನ್ನಪ್ಪಿದ್ದಾರೆ. ಉಳಿದ 153 ಮಂದಿ ರಸ್ತೆ ಅಪಘಾತಗಳಲ್ಲಿ ಸತ್ತಿದ್ದಾರೆ. ಎತ್ತರದ ಬುಡಕಟ್ಟು ಜಿಲ್ಲೆಯಾದ ಲಾಹೌಲ್ ಮತ್ತು ಸ್ಪಿತಿಯಲ್ಲಿ ಮಾನ್ಸೂನ್ ಸಂಬಂಧಿತ ವಿಪತ್ತುಗಳಿಂದ 15 ಮಂದಿ ಸಾವನ್ನಪ್ಪಿದ್ದಾರೆ.

- Advertisement -
images 57

ಮಳೆಯಿಂದ ಸಾರ್ವಜನಿಕ ಮತ್ತು ಖಾಸಗಿ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದ್ದು, ಒಟ್ಟು ನಷ್ಟ ₹1,202.64 ಕೋಟಿ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಸಾರವಜನಿಕ ಸೇವಾ ವಲಯಗಳಿಗೆ ₹914 ಕೋಟಿಗಿಂತ ಹೆಚ್ಚು ನಷ್ಟವಾಗಿದ್ದು, ಜಲ ಶಕ್ತಿ ವಿಭಾಗಕ್ಕೆ ₹258 ಕೋಟಿಗಿಂತ ಹೆಚ್ಚು ನಷ್ಟವಾಗಿದೆ. ವಿಪತ್ತಿನಿಂದ 460 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ ಮತ್ತು 460 ಪ್ರಾಣಿಗಳು ಜೀವಂತ ಸಮಾಧಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...
AP23226329585557 1692005330

ಇತ್ತೀಚಿನ ಅತೀವೃಷ್ಟಿಯಿಂದ ಸಂಪರ್ಕ ವ್ಯವಸ್ಥೆ ತೀವ್ರವಾಗಿ ಬಾಧಿತವಾಗಿದ್ದು, ಪ್ರಸ್ತುತ ರಾಜ್ಯದಲ್ಲಿ 150 ರಸ್ತೆಗಳು ಸಂಪೂರ್ಣ ಕಡಿತಗೊಂಡಿವೆ. ಮಂಡಿ ಜಿಲ್ಲೆಯಲ್ಲಿ ಅತಿ ಹೆಚ್ಚು 78 ರಸ್ತೆಗಳು ಹಾನಿಗೊಳಗಾದರೆ, ಶಿಮ್ಲಾದಲ್ಲಿ 30 ರಸ್ತೆಗಳು ನಿರ್ನಾಮಗೊಂಡಿವೆ. ವಿದ್ಯುತ್ ಸರಬರಾಜಿಗೂ ತೊಂದರೆಯಾಗಿದ್ದು, 374 ವಿತರಣಾ ಟ್ರಾನ್ಸ್‌ಫಾರ್ಮರ್‌ಗಳು (DTRs) ಕಾರ್ಯನಿರ್ವಹಿಸುತ್ತಿಲ್ಲ. ಮಂಡಿಯಲ್ಲಿ 128, ಶಿಮ್ಲಾದಲ್ಲಿ 84 ಮತ್ತು ಕುಲ್ಲುವಿನಲ್ಲಿ 81 ಟ್ರಾನ್ಸ್‌ಫಾರ್ಮರ್‌ಗಳು ಕೆಟ್ಟುಹೋಗಿದ್ದು, ಇತ್ತ ನೀರು ಸರಬರಾಜು ಜಾಲವೂ ಹಾನಿಗೊಳಗಾಗಿದೆ. 40 ನೀರು ಸರಬರಾಜು ಯೋಜನೆಗಳು ಪ್ರಸ್ತುತ ಬಾಧಿತವಾಗಿವೆ. ಹಮೀರ್‌ಪುರ್‌ನಲ್ಲಿ 23 ಮತ್ತು ಶಿಮ್ಲಾದಲ್ಲಿ 17 ಯೋಜನೆಗಳು ತೊಂದರೆಯಲ್ಲಿವೆ.

images 58

ರಾಜ್ಯ ಸರ್ಕಾರದ ಇಲಾಖೆಗಳು ಮತ್ತು ಕ್ಷೇತ್ರ ಸಂಸ್ಥೆಗಳು ಬಾಧಿತ ಜಿಲ್ಲೆಗಳಲ್ಲಿ ಪುನಃಸ್ಥಾಪನೆ ಕಾರ್ಯಾಚರಣೆ ನಡೆಸುತ್ತಿವೆ. ಮುಚ್ಚಿದ ರಸ್ತೆಗಳನ್ನು ಸಂಪರ್ಕಕ್ಕೆ ಸಿದ್ಧಗೊಳಿಸಲು, ವಿದ್ಯುತ್ ಮತ್ತು ನೀರು ಸರಬರಾಜನ್ನು ತಹಬದಿಗೆ ತರಲು ಪ್ರಯತ್ನಗಳು ನಡೆಯುತ್ತಿವೆ. ಮಳೆ ಇನ್ನೂ ಮುಂದುವರಿಯುತ್ತಿರುವುದರಿಂದ ಜನಜೀವನ ತಾಪತ್ರಯಕ್ಕೆ ಒಳಗಾಗಿದ್ದು, ಕೇವಲ ಎರಡು ತಿಂಗಳಲ್ಲಿ ಲೆಕ್ಕವಿರದಷ್ಟು ಬದುಕುಗಳು ವಿಕೋಪಕ್ಕೆ ಸಿಲುಕಿ ನಲುಗಿವೆ. ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿರುವುದು ಹಿಮಾಚಲ ಪ್ರದೇಶದ ಮುಂದಿರುವ ಬಿಕ್ಕಟ್ಟಿನ ಚಿತ್ರಣವನ್ನು ಸೂಚಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...