ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಝಂಡುತಾ ಪ್ರದೇಶದಲ್ಲಿ ಮಂಗಳವಾರ(ಅಕ್ಟೋಬರ್ 7) ಭೀಕರ ಭೂಕುಸಿತ ಉಂಟಾಗಿದ್ದು, ಬಸ್ ಒಂದರಲ್ಲಿದ್ದ 12 ಮಂದಿ ಸಾವನ್ನಪ್ಪಿದ್ದಾರೆ. ಹಾಗೆಯೇ ಹಲವು ಮಂದಿ ಸಾವನ್ನಪ್ಪಿದ್ದಾರೆ.
ಬಸ್‌ನಲ್ಲಿ ಸುಮಾರು 30 ಮಂದಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ 12 ಮಂದಿ ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; 15 ಕಿ.ಮೀ ಸಾಲುಗಟ್ಟಿ ನಿಂತ ವಾಹನಗಳು
ಪರ್ವತ ಪ್ರದೇಶವಾದ ಹಿಮಾಚಲ ಪ್ರದೇಶದಲ್ಲಿ ಆಗಾಗ ನೈಸರ್ಗಿಕ ವಿಕೋಪ, ಭಾರೀ ಮಳೆ, ಭೂಕುಸಿತ ಉಂಟಾಗುತ್ತಿದ್ದು ಸಾಕಷ್ಟು ಸಾವು-ನೋವುಗಳು ಸಂಭವಿಸಿದೆ.
ಸದ್ಯ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ.
