ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಚೆನ್ನೈಯಲ್ಲಿ ಹಿಂದೂ ಮಹಾಸಭಾ ನಾಯಕರ ಬಂಧನ

Date:

ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಹಿಂದೂ ಮಹಾಸಭಾ ನಾಯಕ ಶ್ರೀಕಂದನ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.

- Advertisement -

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈ ಪ್ರಕರಣದಲ್ಲಿ ಸಂತ್ರಸ್ತೆಯ ಅತ್ತೆ ನಿರ್ಮಲಾ ಅವರೂ ಕೂಡ ಭಾಗಿಯಾಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ನಿರ್ಮಲಾ ಅವರನ್ನು ಎರಡನೇ ಆರೋಪಿಯಾಗಿಸಲಾಗಿದೆ. ಶ್ರೀಕಂದನ್ ಮತ್ತು ನಿರ್ಮಲಾ ಪರಸ್ಪರ ಆಪ್ತರಾಗಿದ್ದರು, 2023ರಲ್ಲಿ ಸಂತ್ರಸ್ತೆ ತನ್ನ ಅತ್ತೆಯ ಮನೆಗೆ ಭೇಟಿ ನೀಡಿದಾಗ ಈ ಘಟನೆ ಸಂಭವಿಸಿದೆ. ಅತ್ತೆ ನಿರ್ಮಲಾ ಈ ಘಟನೆಯನ್ನು ತಿಳಿದಿದ್ದರೂ ತಡೆಯದೆ ಅನುಮತಿಸಿದ್ದಕ್ಕಾಗಿ ಅವರನ್ನೂ ಆರೋಪಿಯಾಗಿ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಘಟನೆ 2023ರಲ್ಲಿ ನಡೆದಿದ್ದರೂ, ದೂರು ಕೆಲವೇ ದಿನಗಳ ಹಿಂದೆ ಪೊಲೀಸರಿಗೆ ಸಲ್ಲಿಕೆಯಾಗಿದೆ. ಶ್ರೀಕಂದನ್ ಮತ್ತು ನಿರ್ಮಲಾ ಇಬ್ಬರನ್ನೂ ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ಉದ್ಯಮಿಗೆ ಲೈಂಗಿಕ ಕಿರುಕುಳ-ಹತ್ಯೆ ಆರೋಪ; ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ!

ಶ್ರೀಕಂದನ್ ಹಿಂದೆಯೂ ಹಲವು ಅಪರಾಧ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿದ್ದು, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ, ಬೆದರಿಕೆ ಹಾಗೂ ವಂಚನೆ ಆರೋಪಗಳನ್ನು ಎದುರಿಸಿದ್ದಾನೆ. 2020ರಲ್ಲಿ ಕಿಲ್ಪಾಕ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕಿರುಕುಳ ನೀಡಿದ್ದಕ್ಕಾಗಿ ಶ್ರೀಕಂದನ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದರ ಜೊತೆಗೆ, ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಿಂಗ್ ಜನರೇಶನ್ ಪ್ರೇಯರ್ ಹಾಲ್‌ನ ಪಾಸ್ಟರ್ ಜಾನ್ ಜೆಬರಾಜ್ ವಿರುದ್ಧವೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 17 ಮತ್ತು 14 ವರ್ಷದ ಇಬ್ಬರು ಬಾಲಕಿಯರು 2024 ಮೇ 21ರಂದು ತಮ್ಮ ಮೇಲೆ ಪಾಸ್ಟರ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ದೂರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರ ಕುಟುಂಬವು ಸುಮಾರು ಹನ್ನೊಂದು ತಿಂಗಳ ನಂತರ ದೂರು ನೀಡಿದೆ. ಈ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...