ಮಹಾರಾಷ್ಟ್ರ | ಬಕ್ರೀದ್‌ಗಾಗಿ ಕುರಿ ಕಟ್ಟಿದ್ದ ಮುಸ್ಲಿಮರ ಶೆಡ್ಡಿಗೆ ‘ಹಂದಿ’ ಬಿಡಲು ಯತ್ನಿಸಿ ಹಿಂದುತ್ವವಾದಿಗಳ ದಾಂಧಲೆ

Date:

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ರೋಡ್‌ ಪಟ್ಟಣದಲ್ಲಿ ವಸತಿ ಸಂಕೀರ್ಣವೊಂದರಲ್ಲಿ ಬಕ್ರೀದ್ ಹಬ್ಬಕ್ಕಾಗಿ ತಾತ್ಕಾಲಿಕ ಶೆಡ್ ನಿರ್ಮಿಸಿ, ಕುರಿಗಳನ್ನು ಕಟ್ಟಿ ಹಾಕಲಾಗಿತ್ತು. ಅದನ್ನು ವಿರೋಧಿಸಿದ್ದ ಕೆಲವರು ಗಲಾಟೆ ಎಬ್ಬಿಸಿದ್ದರು. ಈ ಗಲಾಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಹಿಂದುತ್ವವಾದಿ ಸಂಘಟನೆಗಳು ಕೈಜೋಡಿಸಿದ್ದು, ವಸತಿ ಸಂಕೀರ್ಣದೊಳಗೆ ಹಂದಿಯನ್ನು ನುಗ್ಗಿಸಲು ಯತ್ನಿಸಿ, ದಾಂಧಲೆ ನಡೆಸಿದ್ದಾರೆ. ಘಟನೆಯಿಂದಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

- Advertisement -

ಗಲಾಟೆಯಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, “ಮೇ 26 ರಂದು ಮಧ್ಯರಾತ್ರಿ ಸುಮಾರು 12:50ರ ಮುಸ್ಲಿಮರು ಸಮುದಾಯದ ಕೆಲವರು ಮತ್ತು ವಿಶ್ವ ಹಿಂದು ಪರಿಷತ್‌ನ ಸದಸ್ಯರ ನಡುವೆ ಗಲಾಟೆ ನಡೆದಿದೆ. ಹಿಂಸಾಚಾರ ನಡೆದು, ಕೆಲವರು ಗಾಯಗೊಂಡಿದ್ದಾರೆ. ಬಳಿಕ, ವಿಎಚ್‌ಪಿ ಸದಸ್ಯರು ವಸತಿ ಸಂಕೀರ್ಣದ ಗೇಟ್‌ ಬಳಿ, ಪ್ರತಿಭಟನೆ ಮುಂದುವರೆಸಿದ್ದು, ಹನುಮಾನ್ ಚಾಲೀಸಾವನ್ನು ಪಠಿಸಿದ್ದಾರೆ. ಹಬ್ಬಕ್ಕಾಗಿ ಕುರಿಗಳನ್ಉ ಇರಿಸಲಾಗಿದ್ದ ವಸತಿ ಸಂಕೀರ್ಣದ ಆವರಣದೊಳಗೆ ಹಂದಿಯೊಂದನ್ನು ತರಲು ಯತ್ನಿಸುತ್ತಿದ್ದಾರೆ. ಅವರನ್ನು ಪೊಲೀಸರು ತಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಆ ಹಂದಿಯನ್ನು ಅಲ್ಲಿ ‘ವರಾಹ ಪೂಜೆ’ ಮಾಡಲು ತರಲಾಗುತ್ತಿದೆ ಎಂದು ಪ್ರತಿಭಟನಾಕಾರರು ಸಮರ್ಥಿಸಿಕೊಂಡಿದ್ದಾರೆ. ವಿಎಚ್‌ಪಿ ಕಾರ್ಯಕರ್ತರು ಹೇಳುತ್ತಿರುವುದು ಸುಳ್ಳು ಎಂದು ಅರಿತ ಪೊಲೀಸರು, ಅದಕ್ಕೆ ಅವಕಾಶ ನೀಡಲಿಲ್ಲ.

ಘಟನೆಯು ರಾಜಕೀಯ ಆಯಾಮವನ್ನೂ ಪಡೆದುಕೊಂಡಿದ್ದು, ಬೊರಿವಲಿ ಕ್ಷೇತ್ರದ ಬಿಜೆಪಿ ಶಾಸಕ ಸಂಜಯ್ ಉಪಾಧ್ಯಾಯ ಅವರು ವಸತಿ ಸಂಕೀರ್ಣಗಳಿಗೆ ಹಂದಿಗಳನ್ನು ತರುವುದನ್ನು ಬೆಂಬಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ವಸತಿ ಸಂಕೀರ್ಣದಲ್ಲಿ ಕೇವಲ ಒಂದು ಮುಸ್ಲಿಂ ಕುಟುಂಬವಿದ್ದರೂ ಅವರು ಆರು ಕುರಿಗಳನ್ನು ತಂದಿದ್ದಾರೆ. ಇಡೀ ವಸತಿ ಸಂಕೀರ್ಣ ಅವರ ವಿರುದ್ಧವಾಗಿದೆ. ಮೀರಾ ರೋಡ್‌ನಲ್ಲೂ ಇಂತಹದೇ ಘಟನೆಗಳು ನಡೆಯುತ್ತಿದ್ದು, ಒಂದು ವೇಳೆ ಅಲ್ಪಸಂಖ್ಯಾತ ಸಮುದಾಯವು ಸಂವಿಧಾನವನ್ನು ಪಾಲಿಸದೆ ಷರಿಯಾವನ್ನು ಅನುಸರಿಸಿದರೆ, ನಾವು ಕುರಿಗಳಿಗೆ ಹಂದಿಗಳ ಮೂಲಕವೇ ಉತ್ತರಿಸುತ್ತೇವೆ” ಎಂದು ಹೇಳಿದ್ದಾರೆ.

ಮತ್ತೊಂದೆಡೆ, ಶಿವಸೇನೆಯ ಸಚಿವ, ಸ್ಥಳೀಯ ಶಾಸಕ ಪ್ರತಾಪ್ ಸರ್ನಾಯಕ್ ಅವರು ಸಂಯಮದಿಂದ ಇರುವಂತೆ ಮನವಿ ಮಾಡಿದ್ದಾರೆ. “ವಸತಿ ಸಂಕೀರ್ಣಗಳಲ್ಲಿ ವಾಸಿಸುವ ಎಲ್ಲ ಸಮುದಾಯಗಳ ಭಾವನೆಗಳನ್ನು ಜನರು ಗೌರವಿಸಬೇಕು. ಹೊರಗಿನವರು ಬಂದು ಜನರನ್ನು ಪ್ರಚೋದಿಸಲು ಪ್ರಯತ್ನಿಸಬಾರದು” ಎಂದು ಖಂಡಿಸಿದ್ದಾರೆ.

ಸಮಾಜವಾದಿ ಪಕ್ಷದ ಅಬು ಅಜ್ಮಿ ಅವರು ಮಾತನಾಡಿ, “ಯಾವುದೇ ಕಾನೂನುಬಾಹಿರ ಕುರ್ಬಾನಿಗೆ (ಬಲಿ) ಅವಕಾಶ ನೀಡಬಾರದು. ಅನುಮತಿ ಇರುವ ಕಡೆಗಳಲ್ಲಿ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಮುಚ್ಚಿದ ಜಾಗಗಳಲ್ಲೇ ಬಲಿ ಪ್ರಕ್ರಿಯೆಯನ್ನು ನಡೆಸುವಂತೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...