ರಾಷ್ಟ್ರಗೀತೆ ಮತ್ತು ಠಾಗೋರ್ ಬಗ್ಗೆ ಹಿಂದುತ್ವವಾದಿ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆ

Date:

ಹಿಂದುತ್ವದ ಅಮಲಿನಲ್ಲಿರುವ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಲೇ ಸುದ್ದಿಯಾಗುತ್ತಿದ್ದಾರೆ. ಇತ್ತೀಚೆಗೆ ಪ್ರವಾದಿ ಮೊಹಮದ್‌ ಬಗ್ಗೆ ಅವಹೇಳನಾಕಾರಿ ಕೇಳಿ ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದ್ದ ರಾಮಗಿರಿ ಮಹಾರಾಜ್, ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತದ ರಾಷ್ಟ್ರಗೀತೆ ಮತ್ತು ಕವಿ ರವೀಂದ್ರನಾಥ ಠಾಗೋರ್ ಅವರ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ.

- Advertisement -

ಮಹಾರಾಷ್ಟ್ರದ ಸಂಭಾಜಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಾಮಗಿರಿ ಮಹಾರಾಜ್, “ಜನ, ಗಣ, ಮನ ಬದಲು ವಂದೇ ಮಾತರಂ ನಮ್ಮ ರಾಷ್ಟ್ರಗೀತೆ ಆಗಬೇಕು. ಭವಿಷ್ಯದಲ್ಲಿ ವಂದೇ ಮಾತರಂಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಹೋರಾಟ ಮಾಡಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

“ನಾವು ರಾಷ್ಟ್ರಗೀತೆಯನ್ನು ಕೇಳುತ್ತೇವೆ. ಆದರೆ, ನಮ್ಮ ರಾಷ್ಟ್ರಗೀತೆಯ ಇತಿಹಾಸ ಎಷ್ಟು ಜನರಿಗೆ ತಿಳಿದಿದೆ ಎಂಬುದು ಗೊತ್ತಿಲ್ಲ. ಆದರೆ ಇಂದು ನಾನು ಸತ್ಯ ಹೇಳುತ್ತಿದ್ದೇನೆ, ರವೀಂದ್ರನಾಥ ಠಾಗೋರ್ ಅವರು 1911ರಲ್ಲಿ ಕೋಲ್ಕತ್ತಾದಲ್ಲಿ ಜಾರ್ಜ್ ವಿ ಅವರನ್ನು ಬೆಂಬಲಿಸಿ ಈ ಹಾಡನ್ನು ಹಾಡಿದ್ದರು. ಅಂದು ಭಾರತವು ಸ್ವತಂತ್ರ ರಾಷ್ಟ್ರವಾಗಿರಲಿಲ್ಲ” ಎಂದು ಠಾಗೋರ್ ಅವರನ್ನು ನಿಂದಿಸಿ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

“ಜಾರ್ಜ್ ವಿ ಯಾರು? ಆತ ಬ್ರಿಟಿಷ್ ದೊರೆ. ಆತ ಭಾರತೀಯರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದ. ಆತನನ್ನು ಬೆಂಬಲಿಸಿ ಹಾಡಿದ್ದ ‘ಜನ, ಗಣ, ಮನ’ ಭಾರತದ ಜನರಿಗಾಗಿ ಬರೆದದ್ದಲ್ಲ. ಆದ್ದರಿಂದ, ವಂದೇ ಮಾತರಂ ನಮ್ಮ ರಾಷ್ಟ್ರಗೀತೆಯಾಗಬೇಕು. ಅದಕ್ಕಾಗಿ, ನಾವು ಹೋರಾಟ ಮಾಡಬೇಕು” ಎಂದು ಹೇಳಿದ್ದು, ವಿವಾದ ಸೃಷ್ಟಿಸಿದ್ದಾರೆ.

ಅಂದಹಾಗೆ, ‘ಜನ ಗಣ ಮನ’ ಗೀತೆಯನ್ನು ರವೀಂದ್ರನಾಥ ಠಾಗೋರ್ ಬರೆದದ್ದು 1911ರ ಡಿಸೆಂಬರ್ 11ರಂದು. ಈ ಗೀತೆಗೆ ಅವರು ಇಟ್ಟಿದ್ದ ಹೆಸರು ‘ಭಾರತೊ ಭಾಗ್ಯೊ ಬಿಧಾತ’. ಈ ಗೀತೆಯನ್ನು ಠಾಗೋರರು ಮೊದಲು ಹಾಡಿದ್ದು, 1911ರ ಡಿಸೆಂಬರ್ 27ರಂದು ಕೋಲ್ಕತಾದಲ್ಲಿ ನಡೆದ ಕಾಂಗ್ರೆಸ್ ಸಮ್ಮೇಳನದಲ್ಲಿ. ಈ ಗೀತೆಗೆ ಸಮ್ಮೇಳನದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಆ ನಂತರ, 1919ರ ಫೆಬ್ರವರಿ 28ರಂದು ಠಾಗೋರ್‌ ಅವರು ಬೆಸೆಂಟ್ ಥಿಯೊಸೊಫಿಕಲ್ ಕಾಲೇಜಿನಲ್ಲಿ ಹಾಡಿದ್ದರು. ಈ ಹಾಡು ಹಲವಾರು ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿತ್ತು. ಭಾರತ ಸ್ವಾತಂತ್ರ್ಯಗೊಂಡ ನಂತರ, ಈ ಗೀತೆಯನ್ನು ಭಾರತದ ಸಂವಿಧಾನ ರಚನಾಸಭೆಯು 1950 ಜನವರಿ 24ರಂದು ರಾಷ್ಟ್ರಗೀತೆಯೆಂದು ಘೋಷಿಸಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...