ಹೆಚ್ಚು ವರದಕ್ಷಿಣೆ ನೀಡಿಲ್ಲವೆಂದು ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿದ ಅತ್ತೆ-ಮಾವ

Date:

ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್​ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್​ಐವಿ ಸೋಂಕಿತ ಸೂಜಿ ಚುಚ್ಚಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ನಡೆದಿದೆ.

- Advertisement -

30 ವರ್ಷದ ಮಹಿಳೆಗೆ ಸಂಬಂಧಿಸಿದ ಈ ಘಟನೆಯ ಬಗ್ಗೆ ದೂರು ದಾಖಲಿಸುವಂತೆ ಸಹರಾನ್​ಪುರ ನ್ಯಾಯಾಲಯವು ಉತ್ತರ ಪ್ರದೇಶದ ಪೊಲೀಸರಿಗೆ ಆದೇಶಿಸಿದೆ. ಮಹಿಳೆ ಸಹರಾನ್​ಪುರ ನಿವಾಸಿ, ಆಕೆಯ ಪತಿ, ಅತ್ತೆ ಸೇರಿ ಒಟ್ಟು ನಾಲ್ಕು ಜನರ ವಿರುದ್ಧ ಐಪಿಸಿ 307, 498ಎ, 323, 328, 406 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಗಳ ಪ್ರಕಾರ, ಈ ಘಟನೆ ಮೇ 2024 ರಲ್ಲಿ ಹರಿದ್ವಾರದಲ್ಲಿರುವ ಮಹಿಳೆಯ ಅತ್ತೆಯ ಮನೆಯಲ್ಲಿ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಂತ್ರಸ್ತೆಯ ತಂದೆ ಮಾತನಾಡಿ, 2023ರಲ್ಲಿ ತಮ್ಮ ಮಗಳ ಮದುವೆ ಮಾಡಿಕೊಟ್ಟಿದ್ದೆವು. ಮದುವೆಗೆ 45 ಲಕ್ಷ ರೂ. ಖರ್ಚು ಮಾಡಿದ್ದೆವು. ವರನ ಕುಟುಂಬಕ್ಕೆ 15 ಲಕ್ಷ ರೂ. ನಗದು ಹಾಗೂ ಸಬ್​-ಕಾಂಪ್ಯಾಕ್ಟ್​ ಎಸ್​ಯುವಿ ನೀಡಿದ್ದೇವೆ. ಆದರೆ ಅವರು ಹೆಚ್ಚುವರಿಯಾಗಿ 10 ಲಕ್ಷ ರೂಪಾಯಿ ನಗದು ಮತ್ತು ದೊಡ್ಡ ಎಸ್​ಯುವಿ ಕೇಳಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಮದುವೆಯಾದ ತಕ್ಷಣ ಆಕೆಗೆ ಅತ್ತೆ-ಮಾವ ಕಿರುಕುಳ ನೀಡಲು ಆರಂಭಿಸಿ ಮಗಳನ್ನು ಅವಮಾನಿಸಿದರು. ಮಗನಿಗೆ ಬೇರೆ ಮದುವೆ ಮಾಡುವುದಾಗಿ ಬದರಿಕೆ ಹಾಕಿದರು. ದಿನದಿಂದ ದಿನಕ್ಕೆ ಆಕೆಗೆ ದೈಹಿಕ ಹಾಗೂ ಮಾನಸಿಕ ಚಿತ್ರಹಿಂಸೆ ನೀಡುವುದು ಹೆಚ್ಚಾಯಿತು.

2024ರ ಮೇನಲ್ಲಿ ಆಕೆಯ ಅತ್ತೆ ಮಾವ ಬಲವಂತವಾಗಿ ಆಕೆಗೆ ಎಚ್​ಐವಿ ಸೋಂಕಿತ ಸೂಚಿಯನ್ನು ಚುಚ್ಚಿದ್ದರು. ಇದರಿಂದಾಗಿ ಆಕೆಯ ಆರೋಗ್ಯ ಶೀಘ್ರವಾಗಿ ಹದಗೆಟ್ಟಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ಆಕೆ ಎಚ್​ಐವಿ ಪಾಸಿಟಿವ್ ಆಗಿರುವುದು ತಿಳಿದುಬಂದಿದೆ ಎಂದು ಕುಟುಂಬದವರು ದೂರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...