ಯುಪಿಯಲ್ಲಿ ಮುಂದುವರೆದ ಮರ್ಯಾದೆಗೇಡು ಹತ್ಯೆ; ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಲೆ

Date:

ಪ್ರೀತಿಸಿ ಮದುವೆಯಾದನೆಂಬ ಕಾರಣಕ್ಕೆ ದಲಿತ ಯುವಕನನ್ನು ಪತ್ನಿಯ ಕುಟುಂಬದವರು ಕೊಲೆ ಮಾಡಿರುವ ಆರೋಪ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ಕೇಳಿಬಂದಿದೆ. 23 ವರ್ಷದ ಅಕ್ಷಯ್ ಎಂಬ ಯುವಕನನ್ನು ಇಟ್ಟಿಗೆಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಪತ್ನಿಯ ಅಣ್ಣ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಅಕ್ಷಯ್, 20 ವರ್ಷದ ರಿಧಿಮಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಸುಮಾರು ಒಂದು ವರ್ಷದ ಹಿಂದೆ ಇಬ್ಬರೂ ಕುಟುಂಬದ ವಿರೋಧದ ನಡುವೆ ಮನೆ ತೊರೆದು ವಿವಾಹವಾಗಿದ್ದರು. ಬಳಿಕ ನೋಯ್ಡಾದಲ್ಲಿ ಕೆಲಸ ಮಾಡಿಕೊಂಡು ಅಲ್ಲಿಯೇ ನೆಲೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಮುಜಾಫರ್‌ನಗರ ಜಿಲ್ಲೆಯ ಬಿಹಾರಿಪುರ ಗ್ರಾಮದ ನಿವಾಸಿಯಾಗಿದ್ದ ಅಕ್ಷಯ್, ಸೋಮವಾರ ಬೆಳಗ್ಗೆ ತಮ್ಮ ಊರಿಗೆ ಮರಳಿದ್ದರು. ಅದೇ ದಿನ ಸಂಜೆ ಖತೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜನಸತ್ ರಸ್ತೆಯ ಬಳಿ ಸ್ನೇಹಿತ ಆಕಾಶ್ ಜೊತೆ ಬೈಕ್‌ನಲ್ಲಿ ತೆರಳಿದ್ದಾಗ ಅವರ ಮೇಲೆ ದಾಳಿ ನಡೆದಿದೆ. ಇಬ್ಬರೂ ರಸ್ತೆ ಬದಿಯ ಅಂಗಡಿಯೊಂದರ ಬಳಿ ಮಾತನಾಡುತ್ತಿದ್ದಾಗ ಬೈಕ್‌ನಲ್ಲಿ ಬಂದ ಮೂವರು ಮುಸುಕುಧಾರಿಗಳು ಅಕ್ಷಯ್ ಅವರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ದುಷ್ಕರ್ಮಿಗಳ ಪೈಕಿ ಒಬ್ಬ ಇಟ್ಟಿಗೆಯಿಂದ ಅಕ್ಷಯ್‌ಗೆ ಹೊಡೆದು ಕೆಳಗೆ ಬೀಳಿಸಿದ್ದಾನೆ. ಬಳಿಕ ಮೂವರೂ ಸೇರಿ ಅವರ ತಲೆಗೆ ಪದೇಪದೇ ಇಟ್ಟಿಗೆಯಿಂದ ಹೊಡೆದಿದ್ದಾರೆ ಎನ್ನಲಾಗಿದೆ.

ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ಅವರನ್ನು ಚಿಕಿತ್ಸೆಗಾಗಿ ಮೀರತ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮಾಹಿತಿಯ ಪ್ರಕಾರ, ಅಕ್ಷಯ್ ಅವರು ತಮ್ಮ ಚಿಕ್ಕಪ್ಪನ ಮನೆಗೆ ಭೇಟಿ ನೀಡುತ್ತಿದ್ದ ಸಂದರ್ಭದಲ್ಲಿ ಸರಾಯ್ ಗ್ರಾಮದ ರಿಧಿಮಾ ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಆದರೆ, ರಿಧಿಮಾ ಅವರ ಕುಟುಂಬ ಈ ಸಂಬಂಧಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಅಕ್ಷಯ್ ಅವರ ಕುಟುಂಬವೂ ಸಂಬಂಧವನ್ನು ಮುರಿದುಕೊಳ್ಳುವಂತೆ ಒತ್ತಾಯಿಸಿತ್ತು ಎನ್ನಲಾಗಿದೆ. ಆದರೆ, ಸುಮಾರು ಒಂದೂವರೆ ವರ್ಷದ ಹಿಂದೆ ಇಬ್ಬರೂ ಮನೆಬಿಟ್ಟು ತೆರಳಿದ್ದರು. ಈ ಸಂಬಂಧ ರಿಧಿಮಾ ಅವರ ಕುಟುಂಬ ಅಕ್ಷಯ್ ವಿರುದ್ಧ ಅಪಹರಣದ ದೂರು ದಾಖಲಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಇಬ್ಬರೂ ನ್ಯಾಯಾಲಯದಲ್ಲಿ ವಿವಾಹವಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಖತೌಲಿ ಪೊಲೀಸ್ ಠಾಣೆಯ ಠಾಣಾಧಿಕಾರಿ ದಿನೇಶ್ ಬಾಘೇಲ್ ಅವರ ಪ್ರಕಾರ, ಅಕ್ಷಯ್ ಹತ್ಯೆ ಪೂರ್ವಯೋಜಿತವಾಗಿರುವ ಶಂಕೆಯಿದೆ. ಈ ಕೃತ್ಯದ ಹಿಂದೆ ಹಲವು ಮಂದಿ ಸೇರಿ ಸಂಚು ರೂಪಿಸಿರುವ ಸಾಧ್ಯತೆಯಿದ್ದು, ತನಿಖೆ ಮುಂದುವರಿದಿದೆ. ದಾಳಿಯ ಸಮಯದಲ್ಲಿ ಅಕ್ಷಯ್ ಜೊತೆಗಿದ್ದ ಆಕಾಶ್‌ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಅಕ್ಷಯ್ ಚಲನವಲನಗಳ ಬಗ್ಗೆ ಮಾಹಿತಿ ನೀಡಿರುವ ಶಂಕೆ ಆತನ ಮೇಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಲ್ಲಿ ರಿಧಿಮಾ ಅವರ ಅಣ್ಣ ಕೂಡ ಸೇರಿದ್ದಾನೆ.

ಆರು ಸಹೋದರಿಯರ ಏಕೈಕ ಸಹೋದರನಾಗಿದ್ದ ಅಕ್ಷಯ್ ಅವರ ಅಂತ್ಯಕ್ರಿಯೆಯನ್ನು ಬುಧವಾರ ನೆರವೇರಿಸಲಾಗಿದೆ. ಯುವಕನ ಹತ್ಯೆಯಿಂದ ಆಕ್ರೋಶಗೊಂಡ ಬಿಹಾರಿಪುರ ಗ್ರಾಮದ ನಿವಾಸಿಗಳು ನಗರ ಪೊಲೀಸ್ ವರಿಷ್ಠಾಧಿಕಾರಿ ಅಮೃತ್ ಜೈನ್ ಅವರನ್ನು ಭೇಟಿಯಾಗಿ, ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮುಜಾಫರ್‌ನಗರ ಪೊಲೀಸ್ ವರಿಷ್ಠಾಧಿಕಾರಿ ಸೂರಜ್ ಕುಮಾರ್ ರೈ ಮಾತನಾಡಿ, ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ | ಸಹೋದರಿಯನ್ನು ಕೊಂದ ಯುವಕ; ತಂದೆಯಿಂದ ಪುತ್ರನ ಸಮರ್ಥನೆ!

ಇದೇ ವರ್ಷ ಕಳೆದ ಆಗಸ್ಟ್‌ನಲ್ಲಿ 26 ವರ್ಷದ ಶಿವನಾಥ್ ಯಾದವ್ ಅವರನ್ನು ಪತ್ನಿಯ ಇಬ್ಬರು ಚಿಕ್ಕಪ್ಪಂದಿರು ಹಲ್ಲೆ ನಡೆಸಿ ಕೊಂದಿದ್ದಾರೆ ಎಂದು ವರದಿಯಾಗಿತ್ತು. ಶಿವನಾಥ್ ಮತ್ತು ಅರ್ಚನಾ ಪ್ರೀತಿಸಿ ಮದುವೆಯಾಗಿದ್ದರು. ನ್ಯಾಯಾಲಯದಲ್ಲಿ ಅರ್ಚನಾ ಪತಿಯೊಂದಿಗೆ ಇರಲು ಇಚ್ಛೆ ವ್ಯಕ್ತಪಡಿಸಿದ ಬಳಿಕ, ದಂಪತಿಯನ್ನು ಅಡ್ಡಗಟ್ಟಿ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಜುಲೈನಲ್ಲಿ 20 ವರ್ಷದ ಕಾನೂನು ವಿದ್ಯಾರ್ಥಿನಿ ಹಿಮಾಂಶಿ ಅವರನ್ನು ಪ್ರೇಮಸಂಬಂಧವನ್ನು ಕೊನೆಗೊಳಿಸಲು ನಿರಾಕರಿಸಿದ ಕಾರಣಕ್ಕೆ ಕುಟುಂಬದವರೇ ಕೊಂದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ, ಇಬ್ಬರು ಸಹೋದರರು ಹಾಗೂ ಇಬ್ಬರು ಮಾವಂದಿರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು. ಮೇ ನಲ್ಲಿ 18 ವರ್ಷದ ಕ್ರಾಂತಿ ಎಂಬ ಯುವತಿ ತನ್ನ ಪ್ರಿಯಕರನೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದ ವಿಚಾರವಾಗಿ ಕುಟುಂಬದವರು ಆಕೆಯ ಮೇಲೆ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ವರದಿಯಾಗಿತ್ತು. ಯುವತಿಯ ತಂದೆ ಮತ್ತು ಇಬ್ಬರು ಸಹೋದರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಸಾಂವಿಧಾನಬದ್ಧವಾದ ವ್ಯಕ್ತಿ ಸ್ವಾತಂತ್ರ್ಯ ಮತ್ತು ನ್ಯಾಯಾಲಯದ ಮೂಲಕ ಕಾನೂನುಬದ್ಧವಾಗಿ ವಿವಾಹವಾಗಿದ್ದರೂ, ಯುವಕನ ಜಾತಿ ಕಾರಣಕ್ಕೆ ನಡೆದ ಈ ಭೀಕರ ಹತ್ಯೆ ಎಐ ಯುಗದಲ್ಲೂ ಜಾತಿ ಪೆಡಂಭೂತ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ಸಾಕ್ಷಿ. ಉತ್ತರ ಪ್ರದೇಶದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಸ್ವಯಂ-ಆಯ್ಕೆಯ ಪ್ರೀತಿ ಮತ್ತು ವಿವಾಹಗಳ ವಿರುದ್ಧ ಸ್ವಂತ ಕುಟುಂಬಸ್ಥರೇ ಮಾಡಿರುವ ಸರಣಿ ಹಿಂಸಾತ್ಮಕ ಕೃತ್ಯಗಳು ಹೆಚ್ಚುತ್ತಿರುವುದು ತೀವ್ರ ಕಳವಳಕಾರಿ. ಪ್ರೇಮಿಗಳು ಅಥವಾ ವಿವಾಹಿತ ದಂಪತಿಗಳಿಗೆ ಕಾನೂನು ರಕ್ಷಣೆ ನೀಡುವುದರ ಜೊತೆಗೆ, ಇಂತಹ ಘೋರ ಅಪರಾಧಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಹಾಗೂ ತ್ವರಿತ ಕಾನೂನು ಕ್ರಮ ಜರುಗಿಸುವುದು ಇಂದಿನ ತುರ್ತು ಅಗತ್ಯ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ವಿರುದ್ಧದ ನ.1ರ ರ‍್ಯಾಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಬೆಂಬಲಿಸಲಿರುವ ಸಿಜೆಪಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ವಿರೋಧಿಸಿ 'ಇಂಡಿಯಾ' (I.N.D.I.A.)...

ದಾವಣಗೆರೆ | ಖಾಸಗಿ ಸಂಸ್ಥೆಗಳ ಉದ್ಯೋಗ ಮಾಹಿತಿ ನೀಡಿ: ಜಿಲ್ಲಾ ಉದ್ಯೋಗಾಧಿಕಾರಿ

ಉದ್ಯೋಗ ವಿನಿಮಯ ಕೇಂದ್ರಗಳ ಖಾಲಿ ಹುದ್ದೆಗಳ ಕಡ್ಡಾಯ ಅಧಿಸೂಚನೆ ಅಧಿನಿಯಮ –...

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ,...