ಮಣಿಪುರದಲ್ಲಿ ಭೀಕರ ದಾಳಿ: ಮನೆಯೊಳಗೆ ನುಗ್ಗಿ ದಂಪತಿಯ ಹತ್ಯೆ; ಮಗುವಿನ ಪ್ರಾಣ ಉಳಿಸಲು ವೈದ್ಯರ ಹೋರಾಟ

Date:

ಮಣಿಪುರದ ತಮೆಂಗ್ಲಾಂಗ್ ಜಿಲ್ಲೆಯಲ್ಲಿ ಅಪರಿಚಿತ ಶಸ್ತ್ರಸಜ್ಜಿತ ಬಂದೂಕುಧಾರಿಗಳು ನಡೆಸಿದ ಭೀಕರ ಗುಂಡಿನ ದಾಳಿಯಲ್ಲಿ ದಂಪತಿ ಪ್ರಾಣ ಕಳೆದುಕೊಂಡಿದ್ದು, ಅವರ 6 ವರ್ಷದ ಮಗ ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

- Advertisement -

ಸೆಪ್ಟೆಂಬರ್ 13ರಂದು ಮುಂಜಾನೆ ಸುಮಾರು 4:00ರಿಂದ 5:30ರ ಅವಧಿಯಲ್ಲಿ ತಮೆಂಗ್ಲಾಂಗ್ ಜಿಲ್ಲೆಯ ಟೊಲ್ಲೆನ್ ಗ್ರಾಮದಲ್ಲಿರುವ ಮನೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಇದನ್ನೂ ಓದಿ: ಮಣಿಪುರ ಹಿಂಸಾಚಾರ ಆರಂಭವಾಗಿ ಎರಡು ವರ್ಷ; ಭದ್ರತೆ ಹೆಚ್ಚಳ

ಈ ದಾಳಿಯಲ್ಲಿ ಲಹಿಂಗ್‌ಜಾಂಗಾಯ್ ಸಿಂಗ್ಸಿಟ್ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರ ಪತಿ ಸೆನೆಹ್ ಸಿಂಗ್ಸಿಟ್ ಅವರನ್ನು ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಈ ರಕ್ತಸಿಕ್ತ ದಾಳಿಯಲ್ಲಿ ದಂಪತಿಯ 6 ವರ್ಷದ ಮಗನಿಗೆ ತೀವ್ರ ಸ್ವರೂಪದ ಗುಂಡೇಟಾಗಿದೆ. ಮಗುವಿನ ಬೆನ್ನಿನ ಕೆಳಭಾಗ ಹಾಗೂ ಕೈಗೆ ಗುಂಡು ತಾಗಿದ್ದು, ಆತನನ್ನು ತಕ್ಷಣವೇ ಅಸ್ಸಾಂನ ಸಿಲ್ಚಾರ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಪ್ರಸ್ತುತ ಮಗುವಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಗುವಿನ ಪ್ರಾಣ ಉಳಿಸಲು ವೈದ್ಯರು ನಿರಂತರ ಶ್ರಮಿಸುತ್ತಿದ್ದಾರೆ.

ಕುಕಿ ಸಮುದಾಯವು 1990ರ ದಶಕದ ಹಿಂಸಾಚಾರದ ನೆನಪಿಗಾಗಿ ಪ್ರತಿವರ್ಷ ಸೆಪ್ಟೆಂಬರ್ 13 ರಂದು ಆಚರಿಸುವ ‘ಕಪ್ಪು ದಿನ’ದಂದೇ ಈ ದಾಳಿ ನಡೆದಿದೆ. ಈ ಭೀಕರ ಘಟನೆಯನ್ನು ಮಣಿಪುರ ಮುಖ್ಯಮಂತ್ರಿ ವೈ. ಖೇಮ್‌ಚಂದ್ ಸಿಂಗ್ ಹಾಗೂ ಸ್ಥಳೀಯ ನಾಗರಿಕ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಪ್ರಸ್ತುತ ಪ್ರದೇಶದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...

ಬೀದರ್‌ | ಶಿಕ್ಷಕರು ಬದುಕಿನ ಭವಿಷ್ಯ ರೂಪಿಸಿದ ಶಿಲ್ಪಿಗಳು: ಪತ್ರಕರ್ತ ಗೌರೀಶ ಅಕ್ಕಿ

ಶಿಕ್ಷಕರು ನಮಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ, ಬದುಕಿನ ಭವಿಷ್ಯವನ್ನು ರೂಪಿಸಿದ...

ವಿಜಯಪುರ | ಯುವಜನರು ಜವಾಬ್ದಾರಿಯುತ ನೀತಿ ನಿರೂಪಕರಾಗಲಿ: ಡಿಸಿ ಆನಂದ ಕೆ

ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ...