ದೆಹಲಿಯಲ್ಲಿ ಘೋರ ಕ್ರೌರ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಶವ ತಿಂದ ಬೀದಿ ನಾಯಿಗಳು

Date:

ಹದಿನೇಳು ವರ್ಷದ ಅಪ್ರಾಪ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು, ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ವಾಯವ್ಯ ದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ.

- Advertisement -

​ಕೊಲೆಯಾದ ಹಲವು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದು, ಶವದ ಕೆಲ ಭಾಗಗಳನ್ನು ಬೀದಿ ನಾಯಿಗಳು ತಿಂದಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಂ ಅಲಿಯಾಸ್ ಸುಧಾಮ ಎಂಬುವವನು ಹಾಗೂ 16 ಮತ್ತು 17 ವರ್ಷದ ಮೂವರು ಬಾಲಾಪರಾಧಿಗಳು ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಸೆಪ್ಟೆಂಬರ್ 13ರಂದು ಮುಂಜಾನೆ ಸ್ವರೂಪ್ ನಗರದ ಕುಶಕ್ ರಸ್ತೆ ಬಳಿಯ ಕೃಷಿ ಜಮೀನೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಶವವು ಎಷ್ಟರಮಟ್ಟಿಗೆ ಕೊಳೆತು ಹೋಗಿತ್ತೆಂದರೆ, ಆರಂಭದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರಿಗೂ (Forensic Team) ಮೃತದೇಹದ ಲಿಂಗ ಪತ್ತೆಹಚ್ಚುವುದು ಕಷ್ಟಕರವಾಗಿತ್ತು. ಬಳಿಕ ಮೃತದೇಹ ಬಾಲಕಿಯದ್ದೆಂದು ಖಚಿತಪಡಿಸಿಕೊಳ್ಳಲಾಗಿತ್ತು. ಮೃತಳ ಕೈಯೊಂದು ಶವದಿಂದ ಬೇರ್ಪಟ್ಟು ಹೊಲದಲ್ಲಿ ಬಿದ್ದಿರುವುದು ಹಾಗೂ ದೇಹದ ಕೆಲವು ಭಾಗಗಳನ್ನು ನಾಯಿಗಳು ತಿಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿತ್ತು.

​ಮೃತ ಬಾಲಕಿಯು ಆಗಾಗ ಮನೆಯಿಂದ ಹೊರಹೋಗಿ ಕೆಲವು ದಿನಗಳ ಬಳಿಕ ವಾಪಸಾಗುವ ಅಭ್ಯಾಸ ಹೊಂದಿದ್ದಳು. ಹೀಗಾಗಿ, ಆಕೆ ಕಾಣೆಯಾಗಿರುವ ಬಗ್ಗೆ ಪೋಷಕರು ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಬಾಲಕಿ ಹಾಗೂ ಆರೋಪಿಗಳು ಮೊದಲೇ ಪರಿಚಿತರಾಗಿದ್ದರು. ಘಟನೆಯ ದಿನ ಆರೋಪಿಗಳು ಟೆಂಪೋವೊಂದರಲ್ಲಿ ಕುಳಿತು ಮದ್ಯಪಾನ ಮಾಡಿದ್ದರು. ಬಳಿಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದು ಶವವನ್ನು ಹೊಲದಲ್ಲಿ ಎಸೆದು ಹೋಗಿದ್ದರು ಎಂಬುದು ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆಯ ಭಾಗವಾಗಿ 50ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಈ ವೇಳೆ, ಟೆಂಪೋವೊಂದು ಅನುಮಾನಾಸ್ಪದವಾಗಿ ಸಂಚರಿಸುತ್ತಿರುವುದು ಕಂಡುಬಂದಿತ್ತು. ಕತ್ತಲೆ ಮತ್ತು ಮಂಜಿನ ಕಾರಣದಿಂದಾಗಿ ಆರಂಭದಲ್ಲಿ ವಾಹನದ ನೋಂದಣಿ ಸಂಖ್ಯೆ ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಕೊನೆಗೂ ಟೆಂಪೋವನ್ನು ಪತ್ತೆಹಚ್ಚಿದ ಪೊಲೀಸರು, ಖಡ್ಡಾ ಕಾಲೊನಿಯಲ್ಲಿ ವಾಹನವನ್ನು ವಶಕ್ಕೆ ಪಡೆದು, ಅದರ ಚಾಲಕನನ್ನು ತೀವ್ರ ವಿಚಾರಣೆಗೊಳಪಡಿಸಿದ್ದರು. ಆತನ ನೀಡಿದ ಮಾಹಿತಿಯ ಆಧಾರದ ಮೇಲೆ ಶಿವಂ ಹಾಗೂ ಇತರೆ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ.

​ಕೊಲೆಗೆ ಬಳಸಲಾದ ಎರಡು ಚಾಕುಗಳು ಹಾಗೂ ಕೃತ್ಯ ಎಸಗುವಾಗ ಆರೋಪಿಗಳು ಧರಿಸಿದ್ದ ರಕ್ತಸಿಕ್ತ ಬಟ್ಟೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ‘ಭಾರತೀಯ ನ್ಯಾಯ ಸಂಹಿತೆ’ (BNS) ಹಾಗೂ ‘ಪೋಕ್ಸೊ’ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಕೃತ್ಯದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...

ಉರ್ದು, ಮರಾಠಿ ಶಿಕ್ಷಕರ ಪೂರ್ಣ ನೇಮಕಾತಿಗೆ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಆಗ್ರಹ

ಉರ್ದು ಸೇರಿದಂತೆ ಭಾಷಾ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ನೀಡಿದ್ದ...

ಬೀದರ್‌ | ಶಿಷ್ಟಾಚಾರ ಉಲ್ಲಂಘನೆ : ಡಿಎಚ್‌ಒ ಸೇರಿ ಇಬ್ಬರು ಅಧಿಕಾರಿಗಳು ಅಮಾನತು

ಬಸವಕಲ್ಯಾಣ ತಾಲೂಕಿನ ಉಪವಿಭಾಗ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದಲ್ಲಿ...

ಬಸವಕಲ್ಯಾಣ | ತ್ಯಾಗ, ಬಲಿದಾನದಿಂದಲೇ ವಿಮೋಚನೆ ಪ್ರಾಪ್ತಿ: ರವೀಂದ್ರ ಗಾಯಕವಾಡ

ಸಾವಿರಾರು ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ...