ಗುಜರಾತ್ ವಿಮಾನ ದುರಂತ | ವೈದ್ಯರು ಸೇರಿ ಒಂಬತ್ತು ಮಂದಿ ಸಾವು; ಹಾಸ್ಟೆಲ್ ತೆರವು

Date:

ಗುಜರಾತ್ ವಿಮಾನ ದುರಂತದಲ್ಲಿ ಹಾಸ್ಟೆಲ್‌ನಲ್ಲಿ ಊಟ ಮಾಡುತ್ತಿದ್ದ ಒಂಬತ್ತು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಾಸ್ಟೆಲ್ ತೆರವುಗೊಳಿಸಲಾಗಿದೆ. ಗುರುವಾರ ಮಧ್ಯಾಹ್ನ ಬಿಜೆ ವೈದ್ಯಕೀಯ ಕಾಲೇಜಿನ ಮೆಸ್ ಕಟ್ಟಡಕ್ಕೆ ಏರ್ ಇಂಡಿಯಾ ವಿಮಾನ ಅಪ್ಪಳಿಸಿದ್ದು ಐವರು ವೈದ್ಯರು ಮತ್ತು ಅವರ ಕುಟುಂಬದ ನಾಲ್ವರು ಸದಸ್ಯರು ಸಾವನ್ನಪ್ಪಿದ್ದಾರೆ.

- Advertisement -

ಈ ವಿಮಾನ ದುರಂತದ ವೇಳೆ ಅಡುಗೆಯವರು ಸೇರಿದಂತೆ 60ಕ್ಕೂ ಹೆಚ್ಚು ವೈದ್ಯರು ಮತ್ತು ಮೆಸ್ ಸಿಬ್ಬಂದಿ ಒಳಗೆ ಇದ್ದರು ಎನ್ನಲಾಗಿದೆ. ಊಟದ ಸಮಯವಾಗಿದ್ದ ಕಾರಣ ಅನೇಕ ವೈದ್ಯರು ಊಟಕ್ಕಾಗಿ ಮೆಸ್‌ಗೆ ಬಂದಿದ್ದರು. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಐವರು ಗಂಭೀರವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಊಟ ಮಾಡುತ್ತಿದ್ದಾಗಲೇ ಹಾಸ್ಟೆಲ್‌ ಮೇಲೆ ಬಿದ್ದ ವಿಮಾನ; 7 ವೈದ್ಯಕೀಯ ವಿದ್ಯಾರ್ಥಿಗಳ ಸಾವು

ಇನ್ನು ದುರಂತದಲ್ಲಿ ಮೃತಪಟ್ಟವರಲ್ಲಿ ಸಿವಿಲ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ. ಪ್ರದೀಪ್ ಸೋಲಂಕಿ ಅವರ ಗರ್ಭಿಣಿ ಪತ್ನಿ ಕೂಡ ಸೇರಿದ್ದಾರೆ. ವಿದ್ಯಾರ್ಥಿ ಡಾ. ನೀಲಕಂಠ್ ಅವರು ತಮ್ಮನ್ನು ಭೇಟಿಯಾಗಲು ಬಂದಿದ್ದ ತಾಯಿ, ಚಿಕ್ಕಪ್ಪ ಮತ್ತು ಚಿಕ್ಕಮ್ಮನನ್ನು ಕಳೆದುಕೊಂಡಿದ್ದಾರೆ.

ಒಟ್ಟಾಗಿ ನಾಲ್ಕು ಕಟ್ಟಡಗಳ ಮೇಲೆ ಈ ವಿಮಾನ ಪತನ ಪರಿಣಾಮ ಬೀರಿದೆ. ಇವೆಲ್ಲವುದರ ನಡುವೆ ಇದೀಗ ಸಂಪೂರ್ಣ ಹಾಸ್ಟೆಲ್ ಅನ್ನೇ ತೆರವು ಮಾಡಬೇಕಾಗಿದೆ. ತನಿಖೆ ಪ್ರಾರಂಭಿಸುತ್ತಿದ್ದಂತೆ, ಹಾಸ್ಟೆಲ್ ಕಟ್ಟಡಗಳನ್ನು ಅಸುರಕ್ಷಿತವೆಂದು ಗುರುತಿಸಲಾಗಿದ್ದು, ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಿ ಜೆ ವೈದ್ಯಕೀಯ ಕಾಲೇಜಿನ ಡೀನ್ ಡಾ. ಮೀನಾಕ್ಷಿ ಪರೇಖ್, “ಸುರಕ್ಷತೆಗಾಗಿ ಸ್ಥಳಾಂತರ ಮಾಡುವುದು ಅಗತ್ಯ. ಹಾಸ್ಟೆಲ್ ಖಾಲಿ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ನಾಲ್ಕು ಕಟ್ಟಡಗಳಲ್ಲಿ ಇರುವವರನ್ನು ತೆರವು ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಯುಎನ್ ಮೆಹ್ತಾ ಹಾಸ್ಟೆಲ್, ದಂತ ಕಾಲೇಜು ಮತ್ತು ಮಿಥಿಲಾ ಹಾಸ್ಟೆಲ್‌ಗೆ ಸ್ಥಳಾಂತರಿಸಲಾಗಿದೆ. ಜಿಸಿಆರ್‌ಎಸ್ ವೈದ್ಯರು ಕ್ಯಾಂಪಸ್‌ನಲ್ಲಿಯೇ ಇದ್ದಾರೆ. ವಸತಿ ಸಮಸ್ಯೆ ಆಗದಿರಲಿ ಎಂದು ನಾವು ಒಂದು ವರ್ಷಕ್ಕೆ 50 ಕೊಠಡಿಗಳನ್ನು ಬಾಡಿಗೆಗೆ ಪಡೆದಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...