ಹೊಸೂರು | ಕೋರ್ಟ್ ಆವರಣದಲ್ಲೇ ವಕೀಲನನ್ನು ಕೊಚ್ಚಿ ಕೊಲೆಗೈದ ಸಹಾಯಕ

Date:

ನ್ಯಾಯಾಲಯದ ಆವರಣದಲ್ಲಿಯೇ ವಕೀಲನನ್ನು ವ್ಯಕ್ತಿಯೊಬ್ಬ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ ತಮಿಳುನಾಡಿದ ಹೊಸೂರಿನಲ್ಲಿ ನಡೆದಿದೆ.

- Advertisement -

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹತ್ಯೆಗೆ ಬಲಿಯಾದ ವಕೀಲನನ್ನು ಕಣ್ಣನ್ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿ ಆನಂದ್‌ ಎಂದು ಹೇಳಲಾಗಿದೆ. ಈತ, ಕೋರ್ಟ್‌ ಆರವರಣದಲ್ಲಿ ಸಹಾಯಕ ಕೆಲಸ ಮಾಡುತ್ತಿದ್ದ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೋರ್ಟ್‌ ಆವರಣದಲ್ಲಿಯೇ ಕಣ್ಣನ್ ಮೇಲೆ ಆನಂದ್ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಲೆಗೆ ಮಚ್ಚಿನಿಂದ ಬಲವಾದ ಪೆಟ್ಟು ಬಿದ್ದಿದೆ. ಹಲ್ಲೆ ವೇಳೆ, ಯಾರೊಬ್ಬರೂ ಕಣ್ಣನ್ ರಕ್ಷಣೆಗೆ ಹೋಗಿಲ್ಲ. ಆರೋಪಿ ಸ್ಥಳದಿಂದ ತೆರಳಿದ ಬಳಿಕ, ರಕ್ತದ ಮಡುವಿನಲ್ಲಿ ಬಿದ್ದದ್ದ ವಕೀಲ ಕಣ್ಣನ್‌ರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದರೂ, ಕಣ್ಣನ್ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಹೊಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತ್ನಿ ಮತ್ತು ಕಣ್ಣನ್ ನಡುವೆ ವಿವಾಹೇತರ ಸಂಬಂಧವಿತ್ತು. ಅದೇ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿದ್ದು, ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ವಕೀಲರ ಮೇಲೆ ಹಲ್ಲೆ, ದಾಳಿ ನಡೆಸುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗಷ್ಟೇ ದೆಹಲಿಯ ನ್ಯಾಯಾಲಯವೊಂದರಲ್ಲಿ ವಕೀಲರ ಮೇಲೆ ಗುಂಡು ಹಾರಿಸಲಾಗಿತ್ತು. ಬೀದರ್‌ನಲ್ಲಿ ವಕೀಲನನ್ನು ಕೊಲೆ ಮಾಡಲಾಗಿತ್ತು. ಹಾಸನದಲ್ಲಿ ವಕೀಲರೊಬ್ಬರನ್ನು ಕೋರ್ಟ್ ಕೆಲಸ ಮುಗಿಸಿ ಹೋಗುವಾಗ ಅಪಹರಿಸಿ, ಹತ್ಯೆ ಮಾಡಲಾಗಿತ್ತು. ಇದೀಗ, ಹೊಸೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...