ಬಿಜೆಪಿ ಮತ್ತು ಕಾಂಗ್ರೆಸ್ ಹೇಗೆ ಭಿನ್ನ: ರಾಹುಲ್ ಗಾಂಧಿ ಹೇಳಿದ್ದೇನು?

Date:

ಬಿಜೆಪಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಆರ್ಥಿಕ ಪರಿಭಾಷೆಯ ‘ಟ್ರಿಪಲ್-ಡೌನ್’ ಎಂಬುದನ್ನು ನಂಬುತ್ತದೆ. ಆದರೆ, ಸಾಮಾಜಿಕವಾಗಿ ಸಂಘರ್ಷಗಳ ಇಳಿಕೆ ಮತ್ತು ಸಾಮರಸ್ಯದ ಬೆಳವಣಿಗೆಯ ಆಧಾರದ ಮೇಲೆ ದೇಶವು ಉತ್ತಮವಾಗಿದೆ ಎಂಬುದನ್ನು ಕಾಂಗ್ರೆಸ್‌ ನಂಬುತ್ತದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ತಮಿಳುನಾಡಿನ ಐಐಟಿ ಮದ್ರಾಸ್ ವಿದ್ಯಾರ್ಥಿಗಳೊಂದಿಗೆ ರಾಹುಲ್‌ ಗಾಂಧಿ ಸಂವಾದದ ನಡೆಸಿದ್ದಾರೆ. ಈ ವೇಳೆ, ಬಿಜೆಪಿ ಮತ್ತು ಕಾಂಗ್ರೆಸ್‌ ಯಾವ ರೀತಿಯಲ್ಲಿ ಭಿನ್ನ ಎಂದು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ರಾಹುಲ್‌ ಗಾಂಧಿ ಉತ್ತರಿಸಿದ್ದಾರೆ. “ಸಂಪನ್ಮೂಲಗಳ ವಿತರಣೆ ಹೆಚ್ಚು ನ್ಯಾಯಯುತವಾಗಿ ಆಗಬೇಕು. ಅಭಿವೃದ್ಧಿಯು ವಿಶಾಲ ಮತ್ತು ಎಲ್ಲರನ್ನೂ ಒಳಗೊಂಡಿರಬೇಕು. ಇದನ್ನೇ ಕಾಂಗ್ರೆಸ್ ನಂಬಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸರ್ಕಾರಗಳ ಪ್ರಮುಖ ಜವಾಬ್ಧಾರಿಗಳಲ್ಲಿ ದೇಶದ ಜನರಿಗೆ ಗುಣಮಟ್ಟದ ಶಿಕ್ಷಣ ಖಾತರಿಪಡಿಸುವುದು ಕೂಡ ಒಂದು. ಖಾಸಗೀಕರಣ ಮಾಡಿ, ಆರ್ಥಿಕ ಪ್ರೋತ್ಸಾಹ ನೀಡುವುದರಿಂದ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿಲ್ಲ. ಸರ್ಕಾರಗಳು ಶಿಕ್ಷಣಕ್ಕಾಗಿ ಹೆಚ್ಚು ವೆಚ್ಚ ಮಾಡಬೇಕು. ಸಾರ್ವಜನಿಕ ಸಂಸ್ಥೆಗಳನ್ನು ಬಲಪಡಿಸಬೇಕು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಭಾರತ ಜೋಡೋ ಯಾತ್ರೆಯ ಸಮಯದಲ್ಲಿಹಲವಾರು ಮಕ್ಕಳನ್ನು ‘ನೀವು ಮುಂದೆ ಏನಾಗಲು ಬಯಸುತ್ತೀರಿ’ ಎಂದು ಕೇಳಿದ್ದೆ. ಅವರು ವಕೀಲರು, ವೈದ್ಯರು, ಇಂಜಿನಿಯರ್, ಸೈನಿಕರಾಗಲು ಬಯಸಿರುವುದಾಗಿ ಹೇಳಿದರು. ಈ ದೇಶದಲ್ಲಿ ಕಲಿಯಲು ಕೇವಲ ಕೆಲವೇ ವಿಷಯಗಳಿವೆ ಎಂದಾಗಬಾರದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...