‘ನಿಮಗೆಷ್ಟು ಧೈರ್ಯ’: ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ದೆಹಲಿ ವಿವಿ ಎಚ್ಚರಿಕೆಗೆ ರಾಹುಲ್ ಆಕ್ರೋಶ

Date:

“ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸುವ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲು ನಿಮಗೆಷ್ಟು ಧೈರ್ಯ?” ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿ ವಿಶ್ವವಿದ್ಯಾಲಯವನ್ನು (DU) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ವಿದ್ಯಾರ್ಥಿಗಳನ್ನು ದೂರವಿಡುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಹೊರಡಿಸಿದ ಎಚ್ಚರಿಕೆಯ ಸುತ್ತೋಲೆಗೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ವಿವಿಯ ಈ ನಡೆಯನ್ನು ‘ಎಕ್ಸ್’ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಿರುವ ರಾಹುಲ್ ಗಾಂಧಿ, “ಕಾಲ ಬಂದಾಗ ಇದಕ್ಕೆಲ್ಲ ನೀವೇ ಹೊಣೆಗಾರರಾಗಬೇಕಾಗುತ್ತದೆ ಎಂಬುದನ್ನು ದಯವಿಟ್ಟು ನೆನಪಿಡಿ” ಎಂದು ಎಚ್ಚರಿಸಿದ್ದಾರೆ. ಪ್ರಮುಖ ವಿಶ್ವವಿದ್ಯಾಲಯವೊಂದು ಸಂವಿಧಾನಬದ್ಧ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ ಬದಲು, ಶಾಂತಿಯುತ ಪ್ರತಿಭಟನೆಯಿಂದ ದೂರವಿರುವಂತೆ ವಿದ್ಯಾರ್ಥಿಗಳನ್ನು ಬೆದರಿಸುತ್ತಿರುವುದಕ್ಕೆ ಹಳೆ ವಿದ್ಯಾರ್ಥಿಗಳು ಹಾಗೂ ನೆಟ್ಟಿಗರಿಂದಲೂ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ದೆಹಲಿ ವಿವಿಯು ತನ್ನ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಗುರುವಾರ ಎಚ್ಚರಿಕೆ ನೀಡಿ, ಸುಪ್ರೀಂ ಕೋರ್ಟ್ ನಿರ್ದೇಶನಗಳನ್ವಯ ನಿಯಂತ್ರಿಸಲ್ಪಡುವ ಜಂತರ್ ಮಂತರ್‌ನಲ್ಲಿ ನಡೆಯುವ ಕಾನೂನುಬಾಹಿರ ಜಮಾವಣೆಯಲ್ಲಿ ಪಾಲ್ಗೊಳ್ಳಬಾರದು ಎಂದು ಸೂಚಿಸಿತ್ತು. ಧರಣಿಯಲ್ಲಿ ಭಾಗವಹಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಮತ್ತು ಇದು ವಿದ್ಯಾರ್ಥಿಗಳ ವೈಯಕ್ತಿಕ ಸುರಕ್ಷತೆ ಹಾಗೂ ಶೈಕ್ಷಣಿಕ ಪ್ರಗತಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅದು ತನ್ನ ಸುತ್ತೋಲೆಯಲ್ಲಿ ಹೇಳಿತ್ತು.

ಮೇ 3ರಂದು ನಡೆದಿದ್ದ 2026ರ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಬೆಳಕಿಗೆ ಬಂದ ನಂತರ ಪರೀಕ್ಷಾ ವ್ಯವಸ್ಥೆ ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (NTA) ಕಾರ್ಯವೈಖರಿಯ ಬಗ್ಗೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಜೂನ್ 21ರಂದು ಮರುಪರೀಕ್ಷೆ ನಡೆಸಿದ್ದರೂ, ಸೋರಿಕೆ ಹಗರಣದ ಬಳಿಕ ಕೇವಲ ಎರಡು ತಿಂಗಳಲ್ಲಿ ದೇಶದ ವಿವಿಧೆಡೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಸಾರ್ವಜನಿಕರ ಆತಂಕ ಮತ್ತು ಕೋಪವನ್ನು ಇನ್ನಷ್ಟು ಹೆಚ್ಚಿಸಿದೆ.

ಕಳೆದ ಒಂದು ತಿಂಗಳಿಂದ ‘ಕಾಕ್‌ರೋಚ್ ಜನತಾ ಪಾರ್ಟಿ’ ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದ್ದು, ಪರೀಕ್ಷಾ ಸುಧಾರಣೆ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಲಾಗುತ್ತಿದೆ. ಇದೇ ವಾರ ಸಾವಿರಾರು ವಿದ್ಯಾರ್ಥಿಗಳು ಸಂಸತ್ ಭವನದತ್ತ ನಡೆಸಿದ ‘ಸಂಸದ್ ಚಲೋ’ ಮಾರ್ಚ್ ವೇಳೆ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಹಲವರು ಗಾಯಗೊಂಡಿದ್ದರು. ಕಠಿಣ ಪೊಲೀಸ್ ಕ್ರಮದ ನಡುವೆಯೂ ಸಾವಿರಾರು ವಿದ್ಯಾರ್ಥಿಗಳು ಅಲ್ಲಿ ಜಮಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...