‘ನಿಮ್ಮ ಪೊಲೀಸ್ ವ್ಯವಸ್ಥೆ ಇಷ್ಟೊಂದು ಸಂವೇದನಾಶೂನ್ಯವೇ?’ ಪೊಲೀಸರ ವಿರುದ್ಧ ಸಿಜೆಐ ಆಕ್ರೋಶ

Date:

ಮೂರು ವರ್ಷದ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಆರೋಪಿಗಳ ಎದುರಿಗೇ ನಿಲ್ಲಿಸಿ, ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡ ಗುರುಗ್ರಾಮ್ ಮ್ಯಾಜಿಸ್ಟ್ರೇಟ್ ನಡವಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ‘ಇದು ಅತ್ಯಂತ ಆತಂಕಕಾರಿ ವಿಷಯ. ಪೊಲೀಸ್‌ ವ್ಯವಸ್ಥೆ ಇಷ್ಟೊಂದು ಸಂವೇದನಾಶೂನ್ಯವಾಗಿದೆಯೇ’ ಎಂದು ಪ್ರಶ್ನಿಸಿದೆ.

- Advertisement -

ಮ್ಯಾಜಿಸ್ಟ್ರೇಟ್ ನಡವಳಿಕೆ ಕುರಿತು ಬಾಲಕಿಯ ತಂದೆ ಸಲ್ಲಿಸಿದ ಅಫಿಡವಿಟ್ಅನ್ನು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿದೆ. ಮ್ಯಾಜಿಸ್ಟ್ರೇಟ್ ಅವರಿಂದ ವಿವರಣೆ ಪಡೆದು ವರದಿ ಸಲ್ಲಿಸುವಂತೆ ಗುರುಗ್ರಾಮ್ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, “ಎಫ್‌ಐಆರ್ ದಾಖಲಾಗಿ ನಾಲ್ಕು ವಾರಗಳಾದರೂ ಯಾವುದೇ ಬಂಧನವಾಗಿಲ್ಲ, ಪೋಷಕರು ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾರೆ. ತನಿಖೆಯನ್ನು ಸಿಬಿಐ ಅಥವಾ ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ಎಸ್‌ಐಟಿಗೆ ವಹಿಸಬೇಕು” ಎಂದು ಮನವಿ ಮಾಡಿದರು.

“ಕಳೆದ ಒಂದೂವರೆ ತಿಂಗಳಿನಿಂದ ಈ ಮೂರು ವರ್ಷದ ಮಗುವನ್ನು ಹೇಳಿಕೆ ದಾಖಲಿಸಲು ಪೊಲೀಸ್ ಠಾಣೆ ಮತ್ತು ಮಕ್ಕಳ ಕಲ್ಯಾಣ ಸಮಿತಿ (CWC) ಕಚೇರಿಗೆ ಅಲೆದಾಡಿಸಲಾಗುತ್ತಿದೆ. ನಿಯಮದ ಪ್ರಕಾರ ಸಿಡಬ್ಲ್ಯೂಸಿಯೇ ಬಾಲಕಿಯ ಮನೆಗೆ ಬರಬೇಕಿತ್ತು. ಇನ್ನು, ಮ್ಯಾಜಿಸ್ಟ್ರೇಟ್ ಅವರು ಮಗುವಿಗೆ ‘ನಿನಗೆ ಪ್ರಮಾಣ ವಚನ ಅರ್ಥವಾಗುವುದಿಲ್ಲ, ನಿಜ ಹೇಳು’ ಎಂದು ಕೇಳುತ್ತಿದ್ದಾರೆ. ಹೇಳಿಕೆ ದಾಖಲಿಸುವ ಅದೇ ಕೊಠಡಿಯಲ್ಲಿ ಮೂವರು ಆರೋಪಿಗಳೂ ಇದ್ದರು. ಮಗು ಈಗಾಗಲೇ ಆಘಾತದಲ್ಲಿದೆ. ಮಗುವಿನ ಪೋಷಕರಿಲ್ಲದೆ ಸಿಡಬ್ಲ್ಯೂಸಿ 30 ನಿಮಿಷಗಳ ಕಾಲ ಮಗುವನ್ನು ಮುಚ್ಚಿದ ಕೋಣೆಯಲ್ಲಿ ಅಪರಿಚಿತ ಮಹಿಳೆಯರೊಂದಿಗೆ ಇರಿಸಿತ್ತು. ಈ ಪ್ರಕರಣದ ಮೊದಲ ತನಿಖಾಧಿಕಾರಿ (IO) ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಲಂಚ ಪಡೆದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ” ಎಂದು ವಿವರಿಸಿದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿಜೆಐ ಸೂರ್ಯಕಾಂತ್, “ನಿಮ್ಮ ಪೊಲೀಸರು ಎಷ್ಟೊಂದು ಸಂವೇದನಾಶೂನ್ಯರಾಗಿದ್ದಾರೆ? ಈ ಹಿಂದೆ ಕೂಡ ನೀವು ಅಂತಹ ದೊಡ್ಡ ಸಾಧನೆಯನ್ನೇನೂ ಮಾಡಿಲ್ಲ. ಇಂತಹ ಘಟನೆಯನ್ನು ನಾವು ನಿರೀಕ್ಷಿಸಿರಲಿಲ್ಲ. ಅದು ಕೂಡ ಮೆಟ್ರೋಪಾಲಿಟನ್ ನಗರವೆಂದು ಕರೆಸಿಕೊಳ್ಳುವ ಕಡೆ ಈ ರೀತಿಯಲ್ಲಿ ನಡೆಯುತ್ತಿದೆ” ಎಂದು ಕಿಡಿಕಾರಿದರು.

ಅಫಿಡವಿಟ್‌ನಲ್ಲಿರುವ ಮಾಹಿತಿಯನ್ನು ಉಲ್ಲೇಖಿಸಿದ ಸಿಜೆಐ, “ಪೊಲೀಸ್ ಅಧಿಕಾರಿ ಮಗುವಿನ ಪೋಷಕರಿಗೆ ‘ನಿಮಗೇನು ಬೇಕು?’ ಎಂದು ಕೇಳುತ್ತಿದ್ದಾರೆ. ಇಂತಹ ಗಂಭೀರ ಪ್ರಕರಣಗಳಲ್ಲಿ ಪೋಷಕರು ದೂರು ನೀಡದಿದ್ದರೂ ಎಫ್‌ಐಆರ್ ದಾಖಲಿಸುವುದು ಪೊಲೀಸರ ಕರ್ತವ್ಯವಲ್ಲವೇ? ಅವರಿಗೆ ಕನಿಷ್ಠ ಕಾನೂನಿನ ಅರಿವಿದೆಯೇ” ಎಂದು ಖಾರವಾಗಿ ಪ್ರಶ್ನಿಸಿದರು.

ನ್ಯಾಯಮೂರ್ತಿ ಬಾಗ್ಚಿ, “ಇಂತಹ ಸಂದರ್ಭಗಳಲ್ಲಿ ಛಾಯಾಚಿತ್ರಗಳ ಮೂಲಕ ಆರೋಪಿಗಳನ್ನು ಗುರುತಿಸಬೇಕೇ ಹೊರತು ಮಗುವನ್ನು ಆರೋಪಿಗಳ ಮುಂದೆ ತರಬಾರದು” ಎಂದರು.

ಪೀಠವು ಮಾರ್ಚ್ 25ರಂದು ಸಂಪೂರ್ಣ ತನಿಖಾ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗುವಂತೆ ಗುರುಗ್ರಾಮ್ ಪೊಲೀಸ್ ಕಮಿಷನರ್ ಮತ್ತು ತನಿಖಾಧಿಕಾರಿಗೆ (IO) ಆದೇಶಿಸಿದೆ.

ಈ ಲೇಖನ ಓದಿದ್ದೀರಾ?: ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಪೊಲೀಸರ ಪರವಾಗಿ ವಾದ ಮಂಡಿಸಿದ ವಕೀಲರು, ”ಕಳೆದ ಶನಿವಾರವಷ್ಟೇ ಗುರುಗ್ರಾಮ್ ಪೊಲೀಸರು ಇಬ್ಬರು ಮಹಿಳಾ ಮನೆಗೆಲಸದವರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ” ಎಂದು ತಿಳಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ, “ಆರೋಪಿಗಳನ್ನು ನಿನ್ನೆಯಷ್ಟೇ ಬಂಧಿಸಲಾಗಿದೆ ಎಂದು ಪತ್ರಿಕೆಗಳಲ್ಲಿ ಓದಿದೆವು. ಇಲ್ಲಿಯವರೆಗೆ ಪೊಲೀಸರು ಏನು ಮಾಡುತ್ತಿದ್ದರು” ಎಂದು ಪ್ರಶ್ನಿಸಿದರು.

ಆರೋಪಿಗಳನ್ನು ಮತ್ತೆ ಗುರುತಿಸಲು ಮಗುವಿನೊಂದಿಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುವಂತೆ ಸೋಮವಾರ ಬೆಳಿಗ್ಗೆ ಪೋಷಕರಿಗೆ ಕರೆ ಬಂದಿದೆ ಎಂದು ರೋಹಟಗಿ ತಿಳಿಸಿದಾಗ, “ಹಾಜರಾಗಬೇಡಿ. ತಂದೆಗೆ ಇಷ್ಟವಿಲ್ಲದಿದ್ದರೆ ಹೋಗುವ ಅಗತ್ಯವಿಲ್ಲ” ಎಂದು ಸಿಜೆಐ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...