ಮಸೀದಿಯೊಳಗೆ ಜೈ ಶ್ರೀರಾಮ್ ಕೂಗುವುದು ಹೇಗೆ ಅಪರಾಧವಾಗುತ್ತದೆ?: ಸುಪ್ರೀಂ ಕೋರ್ಟ್ ಪ್ರಶ್ನೆ

Date:

ಮಸೀದಿಯೊಳಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದು ಹೇಗೆ ಅಪರಾಧವಾಗುತ್ತದೆ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ಈ ಕುರಿತು ಕರ್ನಾಟಕ ಪೊಲೀಸರ ನಿಲುವನ್ನು ಕೇಳಿದೆ.

- Advertisement -

ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ್ದಕ್ಕಾಗಿ ಇಬ್ಬರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಯೊಳಗೆ ‘ಜೈ ಶ್ರೀರಾಮ್’ ಎಂದು ಕೂಗುವುದು ಹೇಗೆ ಅಪರಾಧವಾಗುತ್ತದೆ? ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳದ ಬದ್ರಿಯಾ ಜುಮ್ಮಾ ಮಸೀದಿ ಪರ ಹೈದರ್ ಅಲಿ ಎಂಬವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಕಾಂಗ್ರೆಸ್‌ ಒಂದು ಪಕ್ಷವಾಗುವುದು’ ಯಾವಾಗ?

ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ತ್ ಕಾಮತ್ ಅವರು ವಾದಿಸಿದ್ದು, ತನಿಖೆಯ ಪ್ರಾಥಮಿಕ ಹಂತದಲ್ಲಿ ಎಫ್ಐಆರ್ ದಾಖಲಿಸಿದ ಇಪ್ಪತ್ತು ದಿನಗಳಲ್ಲಿ ವಿಚಾರಣೆಗೆ ತಡೆ ನೀಡಲಾಗಿದೆ. ಮತ್ತೊಂದು ಧಾರ್ಮಿಕ ಸ್ಥಳದಲ್ಲಿ ಧಾರ್ಮಿಕ ಘೋಷಣೆ ಕೂಗುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವ ಅಪರಾಧವಾಗುತ್ತದೆ ಎಂದು ಕೋರ್ಟ್ ನಲ್ಲಿ ವಾದಿಸಿದ್ದಾರೆ.

ಮಸೀದಿಯೊಳಗೆ ಬಂದು ಘೋಷಣೆ ಕೂಗಿದ ವ್ಯಕ್ತಿಗಳನ್ನು ಹೇಗೆ ಗುರುತಿಸಲಾಗಿದೆ? ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ಯಾವುದಾದರು ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಇದೇ ವೇಳೆ ಪ್ರಶ್ನಿಸಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...