ಮುಂಬೈನಲ್ಲಿ ಅಪ್ರಾಪ್ತನ ಹಿಟ್‌ ಅಂಡ್‌ ರನ್‌ ಪ್ರಕರಣ: 24 ವರ್ಷದ ವ್ಯಕ್ತಿ ಸಾವು

Date:

ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ಗುರುವಾರ ಮುಂಜಾನೆ 17 ವರ್ಷದ ಅಪ್ರಾಪ್ತ ಚಲಾಯಿಸುತ್ತಿದ್ದ ಎಸ್‌ಯುವಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ಯುವಕರೊಬ್ಬರು ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಆತನ ಹಾಗೂ ಎಸ್‌ಯುವಿ ಮಾಲೀಕ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

- Advertisement -

ಬೆಳಗಿನ ಜಾವ 4 ಗಂಟೆ ಸುಮಾರಿಗೆ ವಿರುದ್ಧ ದಿಕ್ಕಿನಿಂದ ಬಂದ ವಾಹನ ಹಾಲು ಮಾರುತ್ತಿದ್ದ ನವೀನ್ ವೈಷ್ಣವ್ ಅವರಿಗೆ ಡಿಕ್ಕಿಯೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪ್ರಾಪ್ತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ನಂತರ ಆತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ತೀವ್ರವಾಗಿ ಗಾಯಗೊಂಡ ವೈಷ್ಣವ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೇಕೆದಾಟು ಮಧ್ಯಸ್ಥಿಕೆ ವಹಿಸದ ಕೇಂದ್ರ, ದಕ್ಷಿಣದ ರಾಜ್ಯಗಳಿಗಿದು ಸಕಾಲ

ಎಸ್‌ಯುವಿ ಮಾಲೀಕ ಇಕ್ಬಾಲ್ ಜಿವಾನಿ (48) ಮತ್ತು ಅವರ ಮಗ 17 ವರ್ಷದ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದಾರೆ.

ಘಟನೆಯ ಸಮಯದಲ್ಲಿ ಅಪ್ರಾಪ್ತ ಮದ್ಯ ಸೇವಿಸಿದ್ದನೆ ಎಂದು ನಿರ್ಧರಿಸಲು ಆತನ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮೇ 19 ರಂದು ಇದೇ ರೀತಿಯ ಘಟನೆ ಪುಣೆಯಲ್ಲಿ ನಡೆದಿದ್ದು ಪೋರ್ಷೆ ಕಾರು ಚಲಾಯಿಸುತ್ತಿದ್ದ 17 ವರ್ಷದ ಚಾಲಕ ಬೈಕ್‌ಗೆ ಡಿಕ್ಕಿಯೊಡೆದ ಪರಿಣಾಮ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...