ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ನಟಿ-ರಾಜಕಾರಣಿ ಕಂಗನಾ ರನೌತ್ ವಿವಾದಕ್ಕೆ ನಾಂದಿ ಹಾಡಿದ್ದಾರೆ.
‘ದೇಶಕ್ಕೆ ತಂದೆ ಇಲ್ಲ. ಅದಕ್ಕೆ ಮಕ್ಕಳಿದ್ದಾರೆ. ಭಾರತ ಮಾತೆಯ ಈ ಮಕ್ಕಳು ಧನ್ಯರು ಎಂದು ಕಂಗನಾ ರನೌತ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದರು. ಶಾಸ್ತ್ರಿ ಅವರ 120ನೇ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪೋಸ್ಟ್‌ನಲ್ಲಿ, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸ್ಥಾನಮಾನವನ್ನು ಕಾಂಗ್ರೆಸ್ ಕಡಿಮೆ ಮಾಡಿದೆ ಎಂದು ಹೇಳಿದ್ದಾರೆ.
ಮತ್ತೊಂದು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ದೇಶದಲ್ಲಿ ಗಾಂಧಿಯವರ ಸ್ವಚ್ಛತೆಯ ಪರಂಪರೆಯನ್ನು ಮಂದುವರಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. ಬಿಜೆಪಿ ಸಂಸದೆ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ
ಬಾಲಿವುಡ್‌ನಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡಿರುವ ಸಂಸದೆ ಕಂಗನಾ ರನೌತ್ ತಮ್ಮ ವಿವಾದಿತ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದಾರೆ. 2020ರಲ್ಲಿ ರೈತರ ಆಂದೋಲನದ ನಂತರ ಹಿಂತೆಗೆದುಕೊಂಡ 3 ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರುವುದಾಗಿ ಹೇಳಿದ್ದರು. ಅಲ್ಲದೆ ಪ್ರತಿಭಟನೆಯ ಸ್ಥಳದಲ್ಲಿ ಮೃತದೇಹಗಳನ್ನು ನೇತುಹಾಕಲಾಗುತ್ತಿದೆ. ಅತ್ಯಾಚಾರದ ಘಟನೆಗಳು ನಡೆಯುತ್ತಿವೆ ಎಂದು ವಿವಾದಿತ ಹೇಳಿಕೆಗಳನ್ನು ಕಂಗನಾ ಹೇಳಿದ್ದರು.
ಬಿಜೆಪಿ ಸಂಸದೆ ಕಂಗನಾ ಅವರು ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಅಶ್ಲೀಲವಾಗಿ ವ್ಯಂಗ್ಯಮಾಡಿದ್ದಾರೆ. ಗೋಡ್ಸೆ ಆರಾಧಕರು ಬಾಪು ಮತ್ತು ಶಾಸ್ತ್ರಿ ಅವರ ನಡುವೆ ವ್ಯತ್ಯಾಸವನ್ನು ತೋರಿಸುತ್ತಾರೆ. ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಭಕ್ತರನ್ನು ಮನಪೂರ್ವಕವಾಗಿ ಕ್ಷಮಿಸುವರೇ? ಪ್ರತಿಯೊಬ್ಬ ಹುತಾತ್ಮರು ಗೌರವಕ್ಕೆ ಅರ್ಹರು ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
