ಕಿಚ್ಚು ಹಚ್ಚಿದ ಮಣಿಪುರದ ವಿಡಿಯೋ : ದೇಶಾದ್ಯಂತ ಪ್ರತಿಭಟನೆ

Date:

  • ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು
  • ಘಟನೆಯನ್ನು ಖಂಡಿಸಿ, ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ ಬಾಲಿವುಡ್

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲೆ ಮಾಡಿ, ಮೆರವಣಿಗೆ ಮಾಡಿದ ವಿಡಿಯೋ ದೇಶಾದ್ಯಂತ ಕಿಚ್ಚು ಹೊತ್ತಿಸಿದ್ದು, ಮಣಿಪುರ ಸೇರಿದಂತೆ ಹಲವೆಡೆ ಬೃಹತ್ ಪ್ರತಿಭಟನೆಗೆ ನಾಂದಿ ಹಾಡಿದೆ.

ವಿಡಿಯೋ ಹೊರಬರುತ್ತಿದಂತೆಯೇ ಮಣಿಪುರದಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗುವ ಸಾಧ್ಯತೆಯ ನಡುವೆಯೇ ಚುರಾಚಂದ್‌ಪುರದ ಬೀದಿಗಳಲ್ಲಿ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಲಾಯಿತು.

ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಾಗಲು ಸರ್ಕಾರವೇ ಎಂದು ಆರೋಪಿಸಿರುವ ಬುಡಕಟ್ಟು ಸಮುದಾಯದ ಜನರು, ನಮಗೆ ಪ್ರತ್ಯೇಕ ಆಡಳಿತ ವ್ಯವಸ್ಥೆ ನೀಡುವಂತೆ ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚುರಾಚಂದ್‌ಪುರದ ಸಾರ್ವಜನಿಕ ಮೈದಾನದಲ್ಲಿ ಕಪ್ಪು ಬಟ್ಟೆ ಧರಿಸಿದ್ದ ಸಾವಿರಕ್ಕೂ ಹೆಚ್ಚು ಜನರು ಮಳೆ ಸುರಿಯುತ್ತಿದ್ದರೂ ಶಾಂತಿಯುತ ರ‌್ಯಾಲಿ ನಡೆಸಿ, ಬಿರೇನ್ ಸರಕಾರ ಕೆಳಗಿಳಿಯಬೇಕೆಂದು ಒತ್ತಾಯಿಸಿದರು.

ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಮಹಿಳಾ ಕಾಂಗ್ರೆಸ್ ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾನಿರತರನ್ನು ಬಂಧಿಸಿ, ಕರೆದೊಯ್ದರು.

ಮಣಿಪುರದ ಘಟನೆಯ ಬಗ್ಗೆ ಹಲವಾರು ಸಂಘಟನೆಗಳು, ನಾಗರಿಕ ಸಮಾಜಗಳು, ರಾಜಕೀಯ ಮುಖಂಡರು ಮತ್ತು ಬಾಲಿವುಡ್ ನಟ-ನಟಿಯರೂ ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. ಇದು ಅತ್ಯಂತ ಅಮಾನವೀಯ ಎಂದು ಆಕ್ರೋಶ ಹೊರಹಾಕಿದ್ದಾರೆ.

‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವೀಡಿಯೋ ನೋಡಿ ಬೆಚ್ಚಿಬಿದ್ದೆ, ಜಿಗುಪ್ಸೆ ಉಂಟಾಯಿತು. ತಪ್ಪಿತಸ್ಥರಿಗೆ ಘೋರ ಶಿಕ್ಷೆ ಸಿಗಬೇಕು. ಆ ಶಿಕ್ಷೆ ಹೇಗಿರಬೇಕು ಎಂದರೆ ಅದನ್ನು ನೋಡಿ ಮುಂದೆ ಯಾರೂ ಇಂಥ ತಪ್ಪು ಮಾಡುವ ಬಗ್ಗೆ ಆಲೋಚನೆಯನ್ನೂ ಮಾಡಬಾರದು’ ಎಂದು ನಟ ಅಕ್ಷಯ್ ಕುಮಾರ್ ಹೇಳಿಕೆ ನೀಡಿದ್ದಾರೆ.

‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ಭಯಾನಕವಾಗಿದೆ. ಇದು ನನ್ನನ್ನು ಬೆಚ್ಚಿಬೀಳಿಸಿದೆ. ಮಹಿಳೆಯರಿಗೆ ಆದಷ್ಟು ಬೇಗ ನ್ಯಾಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಆಗಲಿ’ ಎಂದು ನಟಿ ಕಿಯಾರಾ ಅಡ್ವಾಣಿ ಟ್ವೀಟ್ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರರಿಗೆ ಹೆಂಡ ಕುಡಿಸಿ ಚಟಗಳ ದಾಸರನ್ನಾಗಿಸುತ್ತಿರುವ ಬಿಜೆಪಿ: ಕಾಂಗ್ರೆಸ್‌ ಕಿಡಿ

ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ,...

ಈ ಚುನಾವಣೆ ಪ್ರಜಾಪ್ರಭುತ್ವದ ಭವಿಷ್ಯ ನಿರ್ಧರಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು...

ಆರು ಜನರ ಹತ್ಯೆಯಾದ ಎರಡು ವರ್ಷಗಳ ನಂತರ 2 ಎಫ್‌ಐಆರ್‌ ದಾಖಲಿಸಿದ ಸಿಬಿಐ!

ಅಸ್ಸಾಂ ಪೊಲೀಸರು ಮತ್ತು ಜನಸಮೂಹದ ನಡುವಿನ ಘರ್ಷಣೆಯಲ್ಲಿ ಅಸ್ಸಾಂ ಫಾರೆಸ್ಟ್ ಗಾರ್ಡ್...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು...