ರಾಮಮಂದಿರ ಕಾಣಿಕೆ ಕಳವು: ಕುಂಭಮೇಳದ ಅವಧಿಯಲ್ಲೇ ಭಾರೀ ಕಳ್ಳತನ; ಭಾವ-ಬಾಮೈದರೇ ದೊಡ್ಡ ಕಳ್ಳರು!

Date:

ಅಯೋಧ್ಯೆಯ ರಾಮಮಂದಿರದ ಕಾಣಿಕೆ ಹಣದ ಕಳುವು ಪ್ರಕರಣದ ತನಿಖೆಯಲ್ಲಿ ಮಹತ್ವದ ಸ್ಫೋಟಕ ಸತ್ಯಗಳು ಹೊರಬಂದಿವೆ. 2025ರ ಆರಂಭದಲ್ಲಿ ನಡೆದ ಕುಂಭಮೇಳದ ಅವಧಿಯಲ್ಲೇ ರಾಮಮಂದಿರದಲ್ಲಿ ಅತಿ ಹೆಚ್ಚಿನ ಪ್ರಮಾಣದ ಹಣವನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸ್‌ ತನಿಖೆಯಿಂದ ತಿಳಿದುಬಂದಿದೆ.

- Advertisement -

ಎಸ್‌ಐಟಿ ಪೊಲೀಸರ ಮಾಹಿತಿಯ ಪ್ರಕಾರ, “ಪ್ರಕರಣದಲ್ಲಿ ಬಂಧಿತರಾಗಿರುವ ಎಂಟು ಆರೋಪಿಗಳ ಪೈಕಿ ಕೆಲವರು ಕುಂಭಮೇಳಕ್ಕೂ ಮುನ್ನ ಸಣ್ಣಪುಟ್ಟ ಕಳ್ಳತನಗಳಲ್ಲಿ ತೊಡಗಿದ್ದರು. ಆದರೆ, ಕುಂಭಮೇಳದ ಅವಧಿಯಲ್ಲಿ ದೇಶಾದ್ಯಂತ ಲಕ್ಷಾಂತರ ಭಕ್ತರು ಆಗಮಿಸಿದ್ದರಿಂದ ಮಂದಿರಕ್ಕೆ ಹರಿದುಬಂದ ಕಾಣಿಕೆ ಮತ್ತು ದೇಣಿಗೆಯ ಪ್ರಮಾಣ ಭಾರೀ ಮಟ್ಟದಲ್ಲಿ ಹೆಚ್ಚಾಗಿತ್ತು. ಆರೋಪಿಗಳು ಇದರ ಪೂರ್ಣ ಲಾಭವನ್ನು ಪಡೆದುಕೊಂಡು, ಪರಸ್ಪರ ಕೈಜೋಡಿಸಿ ದೊಡ್ಡ ಮಟ್ಟದ ದರೋಡೆಗೆ ಸಂಚು ರೂಪಿಸಿದ್ದರು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಇಡೀ ಕಳ್ಳತನದ ಜಾಲದಲ್ಲಿ ಲವಕುಶ್ ಮಿಶ್ರಾ ಮತ್ತು ಅನುಕಲ್ಪ್ ಮಿಶ್ರಾ ಎಂಬ ಭಾವ-ಬಾಮೈದ ಜೋಡಿಯೇ ಅತಿ ಹೆಚ್ಚಿನ ಹಣವನ್ನು ಲೂಟಿ ಮಾಡಿದೆ ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಅಷ್ಟೇ ಅಲ್ಲದೆ, ಈ ಇಬ್ಬರು ಕದ್ದ ಹಣವನ್ನು ಬಳಸಿ ದೊಡ್ಡ ಪ್ರಮಾಣದ ಆಸ್ತಿಪಾಸ್ತಿಗಳನ್ನು ಖರೀದಿಸಿದ್ದಾರೆ. ಸದ್ಯಕ್ಕೆ ಇವರಿಗೆ ಸಂಬಂಧಿಸಿದ ಹಲವಾರು ಸ್ಥಿರಾಸ್ತಿಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಗಳ ಆಸ್ತಿ ಮತ್ತು ಆರ್ಥಿಕ ವಹಿವಾಟುಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಅಯೋಧ್ಯೆ ಪೊಲೀಸರು ಆದಾಯ ತೆರಿಗೆ ಇಲಾಖೆಯ ನೆರವು ಪಡೆಯುತ್ತಿದ್ದಾರೆ. ಜೊತೆಗೆ, ಈ ಹಣದ ಸಾಗಾಟದ ಜಾಲವನ್ನು ಕೂಲಂಕುಶವಾಗಿ ತನಿಖೆ ಮಾಡಲು ಜಾರಿ ನಿರ್ದೇಶನಾಲಯಕ್ಕೆ (ED) ಪತ್ರ ಬರೆಯಲು ಪೊಲೀಸರು ನಿರ್ಧರಿಸಿದ್ದಾರೆ.

ಮಂದಿರದ ಕಾಣಿಕೆ ಪೆಟ್ಟಿಗೆಯ ಹಣವನ್ನು ಎಣಿಕೆ ಮಾಡಲು ಎಸ್‌ಬಿಐ (SBI) ಬ್ಯಾಂಕ್‌ಗೆ ಅಧಿಕಾರ ನೀಡಲಾಗಿದ್ದು, ಬ್ಯಾಂಕ್ ಈ ಕೆಲಸಕ್ಕಾಗಿ ಖಾಸಗಿ ಏಜೆನ್ಸಿಯೊಂದನ್ನು ನೇಮಿಸಿಕೊಂಡಿದೆ. ಒಟ್ಟು 14 ಜನರ ತಂಡವು (11 ಬ್ಯಾಂಕ್ ಸಿಬ್ಬಂದಿ ಮತ್ತು 3 ಮಂದಿರ ಟ್ರಸ್ಟ್‌ನ ಸದಸ್ಯರು) ನಾಲ್ಕು ಕಾಣಿಕೆ ಹುಂಡಿಗಳ ಹಣವನ್ನು ಎಣಿಕೆ ಮಾಡುತ್ತದೆ. ಈ ಹಗರಣದಲ್ಲಿ ಕೆಲವು ಎಸ್‌ಬಿಐ ಬ್ಯಾಂಕ್ ಉದ್ಯೋಗಿಗಳ ಪಾತ್ರವೂ ಇದೆ ಎಂದು ಶಂಕಿಸಲಾಗಿದೆ.

ಬಂಧಿತರ ಪೈಕಿ ತಿನ್ನು ಯಾದವ್ ಅಲಿಯಾಸ್ ರಾಮಶಂಕರ್ ಯಾದವ್ ಎಂಬಾತ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಕಾರು ಚಾಲಕನಾಗಿದ್ದ. ಕಾಣಿಕೆ ಎಣಿಕೆ ಕೊಠಡಿಯ ಒಂದು ಕೀ ಈ ತಿನ್ನು ಯಾದವ್ ಬಳಿ ಇರುತ್ತಿತ್ತು, ಮತ್ತೊಂದು ಕೀ ಬ್ಯಾಂಕ್ ಸಿಬ್ಬಂದಿ ಬಳಿ ಇರುತ್ತಿತ್ತು. ಬ್ಯಾಂಕ್ ನೌಕರರೊಂದಿಗೆ ಶಾಮೀಲಾಗಿ, ಕೀ ಬಳಸಿ ಹಣವನ್ನು ದೋಚಲಾಗಿದೆ. ಕದ್ದ ಹಣವನ್ನು ಎಲ್ಲರೂ ಹಂಚಿಕೊಳ್ಳುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಲೇಖನ ಓದಿದ್ದೀರಾ?: ದೇಶದ ರಿಯಲ್ ಎಸ್ಟೇಟ್ ಮೇಲೆ ಯುದ್ಧದ ಕಾರ್ಮೋಡ: 7 ನಗರಗಳಲ್ಲಿ ವಸತಿ ಮಾರಾಟ ಕುಸಿತ

ಇತ್ತೀಚೆಗೆ ಪೊಲೀಸರು ಎಲ್ಲ ಬಂಧಿತ ಎಂಟು ಆರೋಪಿಗಳ ಮನೆಗಳ ಮೇಲೆಯೂ ದಾಳಿ ನಡೆಸಿ ಬ್ಯಾಂಕ್ ಖಾತೆಗಳ ವಿವರ ಮತ್ತು ಆಸ್ತಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದಾಗ, ಅವರ ವಾರ್ಷಿಕ ಆದಾಯಕ್ಕಿಂತ ನೂರಾರು ಪಟ್ಟು ಹೆಚ್ಚಿನ ಹಣದ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಪ್ರಕರಣದ ಕುರಿತು ಎಫ್‌ಐಆರ್ ದಾಖಲಾಗುವುದಕ್ಕೂ ಮುನ್ನವೇ ಟ್ರಸ್ಟ್ ತನ್ನದೇ ಮಟ್ಟದಲ್ಲಿ ಕ್ರಮ ಕೈಗೊಂಡು ಆರೋಪಿ ಅವಿನಾಶ್ ಶುಕ್ಲಾ ನೀಡಿದ ಮಾಹಿತಿಯ ಮೇರೆಗೆ 89 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು: ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವ್ ಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮಾಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಾಮಶಂಕರ್ ಯಾದವ್ ಅಲಿಯಾಸ್ ತಿನ್ನು ಯಾದವ್.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...