ಉಪವಾಸ ಸತ್ಯಾಗ್ರಹ | ಹದಗೆಟ್ಟ ವಾಂಗ್‌ಚುಕ್ ಆರೋಗ್ಯ, 5 ಕೆಜಿ ತೂಕ ನಷ್ಟ: ಸಿಜೆಪಿ

Date:

ಸಾಮಾಜಿಕ ಕಾರ್ಯಕರ್ತ, ಪರಿಸರವಾದಿ ಸೋನಮ್ ವಾಂಗ್‌ಚುಕ್ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದು, ಅವರ ಸತ್ಯಾಗ್ರಹ ಏಳನೇ ದಿನಕ್ಕೆ ಕಾಲಿಟ್ಟಿದೆ. “ಸೋನಮ್ ಅವರ ಆರೋಗ್ಯ ವೇಗವಾಗಿ ಹದಗೆಡುತ್ತಿದೆ. ಅವರು ಉಪವಾಸ ಆರಂಭಿಸಿದಾಗಿನಿಂದ ಈವರೆಗೆ ಐದು ಕೆಜಿ ತೂಕ ಕಳೆದುಕೊಂಡಿದ್ದಾರೆ” ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹೇಳಿಕೊಂಡಿದೆ.

- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಮತೆ ಹಲವು ಶೈಕ್ಷಣಿಕ ಅವಾಂತರದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಳೆದ 15 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದೆ. ಕಳೆದ ಏಳು ದಿನಗಳಿಂದ ಸಿಜೆಪಿ ಬೇಡಿಕೆಗೆ ಬೆಂಬಲ ಸೂಚಿಸಿ ಲಡಾಖ್ ಹೋರಾಟಗಾರರ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನೂ ಓದಿ: ನೀಟ್ ಸೋರಿಕೆ: ಜೂ.6ರಂದು ನಡೆಯಲಿರುವ ಸಿಜೆಪಿ ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಭಾಗಿ

ಈ ಬಗ್ಗೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಸೋನಮ್ ಸರ್ 5 ಕೆಜಿ ತೂಕ ಕಳೆದುಕೊಂಡಿದ್ದಾರೆ. ದಿನ ಕಳೆದಂತೆ ಅವರ ಆರೋಗ್ಯ ಹದಗೆಡುತ್ತಿದೆ. ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಲು ಪ್ರಧಾನಿ ಇನ್ನೂ ಎಷ್ಟು ದಿನ ತೆಗೆದುಕೊಳ್ಳುತ್ತಾರೆ? 20 ವಿದ್ಯಾರ್ಥಿಗಳ ಸಾವಿನ ಹೊರತಾಗಿಯೂ, ಧರ್ಮೇಂದ್ರ ಪ್ರಧಾನ್ ಅವರೇ ಪ್ರಧಾನಿ ಮೋದಿ ಅವರಿಗೆ ಯಾಕೆ ಇಷ್ಟೊಂದು ಮುಖ್ಯ” ಎಂದು ಪ್ರಶ್ನಿಸಿದ್ದಾರೆ.

ಇನ್ನೊಂದು ಪೋಸ್ಟ್‌ನಲ್ಲಿ, ಪ್ರತಿಭಟನೆಯ ಸಮಯದಲ್ಲಿ ವಾಂಗ್‌ಚುಕ್‌ ಅವೆರಿಗೆ ಏನಾದರೂ ಸಂಭವಿಸಿದರೆ ಸರ್ಕಾರವೇ ಹೊಣೆ ಎಂದು ದೀಪ್ಕೆ ಎಚ್ಚರಿಸಿದ್ದಾರೆ.

ಇನ್ನು “ಗೋ ಬ್ಯಾಕ್ ಧರ್ಮೇಂದ್ರ ಪ್ರಧಾನ್‌” ಎಂಬ ಶೀರ್ಷಿಕೆಯೊಂದಿಗೆ ವ್ಯಂಗ್ಯಚಿತ್ರವೊಂದನ್ನೂ ದೀಪ್ಕೆ ಪೋಸ್ಟ್ ಮಾಡಿದ್ದಾರೆ. ಈ ವ್ಯಂಗ್ಯಚಿತ್ರದಲ್ಲಿ ‘ನಾ ಖಾವೂಂಗಾ, ನಾ ಖಾನೆ ದೂಂಗಾ’ (ನಾನು ಲಂಚ ತಿನ್ನುವುದಿಲ್ಲ, ಇತರರಿಗೂ ತಿನ್ನಲು ಬಿಡಲ್ಲ) ಎಂದು ಬರೆದಿದೆ. ಹಾಗೆಯೇ ಧರ್ಮೇಂದ್ರ ಪ್ರಧಾನ್ ಅವರು ಪರೀಕ್ಷಾ ಪತ್ರಿಕೆಯನ್ನು ತಿನ್ನಲು ಹೋಗುವಾಗ ಎರಡು ಜಿರಳೆಗಳು ತಡೆಯುವಂತೆ ವಿಡಂಬನಾತ್ಮಕ ವ್ಯಂಗ್ಯಚಿತ್ರದಲ್ಲಿ ತೋರಿಸಲಾಗಿದೆ.

ಶುಕ್ರವಾರ ತಡರಾತ್ರಿ ಪ್ರತ್ಯೇಕ ಪೋಸ್ಟ್ ಒಂದರಲ್ಲಿ ವಾಂಗ್‌ಚುಕ್ ಲಡಾಖ್ ಹೋರಾಟದ ಬಗ್ಗೆ ತಿಳಿಸಿದ್ದಾರೆ. ಕೇಂದ್ರ ಮತ್ತು ಲಡಾಖ್ ಪ್ರತಿನಿಧಿಗಳ ನಡುವೆ ಮಾತುಕತೆಯಲ್ಲಿ ಪ್ರಗತಿ ಕಾಣುತ್ತಿದೆ ಎಂದು ಹೇಳಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರವು ಶೈಕ್ಷಣಿಕ ವಿಚಾರದಲ್ಲಿ ಹೊಣೆಗಾರಿಕೆ ಹೊರಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಸಿಜೆಪಿ ಧರಣಿಯಲ್ಲಿ ಭಾಗಿ: ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ ಸೋನಮ್ ವಾಂಗ್‌ಚುಕ್

ಲೇಹ್ ಅಪೆಕ್ಸ್ ಬಾಡಿ (LAB) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (KDA) ಪ್ರತಿನಿಧಿಗಳು ಗೃಹ ಸಚಿವಾಲಯದೊಂದಿಗಿನ ಹಿಂದಿನ ಸಭೆಯ ವೇಳೆ ಇದ್ದ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಂಡಿದ್ದೇವೆ ಎಂದು ಹೇಳಿದ ನಂತರ ಸೋನಮ್ ಈ ಹೇಳಿಕೆ ನೀಡಿದ್ದಾರೆ.

LAB ಮತ್ತು KDA ನಾಯಕರೂ ವಾಂಗ್‌ಚುಕ್ ಅವರ ಉಪವಾಸವು ಕೇಂದ್ರದೊಂದಿಗಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡಿದೆ ಎಂದು ಶ್ಲಾಘಿಸಿದ್ದಾರೆ.

ಈ ನಡುವೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಆರು ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಪ್ರತ್ಯೇಕವಾಗಿ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸಿದ್ದಾರೆ. ಅವರ ಉಪವಾಸ ಸತ್ಯಾಗ್ರಹ 15ನೇ ದಿನಕ್ಕೆ ಕಾಲಿಟ್ಟಿದೆ.

ಈ ಪ್ರತಿಭಟನೆಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ ಎ ಬೇಬಿ, ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಸಿಪಿಐ(ಎಂಎಲ್) ಲಿಬರೇಶನ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್, ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್, ಸಿಪಿಐ ನಾಯಕಿ ಆನಿ ರಾಜ, ಸಾಮಾಜಿಕ ಕಾರ್ಯಕರ್ತೆ ಅಂಜಲಿ ಭಾರದ್ವಾಜ್, ಆರ್‌ಟಿಐ ಕಾರ್ಯಕರ್ತ ನಿಖಿಲ್ ಡೇ ಮತ್ತು ಟಿಎಂಸಿ ಸಂಸದರಾದ ಸಾಗರಿಕಾ ಘೋಷ್ ಮತ್ತು ಮಹುವಾ ಮೊಯಿತ್ರಾ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಮತ್ತು ನಾಗರಿಕ ಸಮಾಜದ ವ್ಯಕ್ತಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...