ಕುಕ್ಕರ್ ಮುಚ್ಚಳದಿಂದ ಹಲ್ಲೆ, ಬಳಿಕ ಕುತ್ತಿಗೆ ಬಿಗಿದು ಪತಿಯ ಕೊಲೆ

Date:

ಸೀರೆ ತಂದುಕೊಡಲಿಲ್ಲ ಎಂಬ ಕಾರಣಕ್ಕೆ ಉಂಟಾದ ಕುಟುಂಬ ಕಲಹದ ವೇಳೆ ಪತಿಗೆ ಕುಕ್ಕರ್ ಮುಚ್ಚಳದಿಂದ ಹಲ್ಲೆ ನಡೆಸಿ, ಬಳಿಕ ಕುತ್ತಿಗೆ ಬಿಗಿದು ಹತ್ಯೆಗೈದ ಆರೋಪದ ಮೇಲೆ 30 ವರ್ಷದ ಮಹಿಳೆಯನ್ನು ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಬದ್ಲಾಪುರ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತೆಯನ್ನು ಸುನೀತಾದೇವಿ ಹರೇರಾಮ್ ಸಿಂಗ್ (30) ಎಂದು ಗುರುತಿಸಲಾಗಿದೆ. ಆಕೆ ಮೂಲತಃ ಬಿಹಾರದ ರೋಹ್ತಾಸ್ ಜಿಲ್ಲೆಯ ನಿವಾಸಿ. ಮೃತ ಪತಿ ಹರೇರಾಮ್ ಕಿಶುಂಜಿ ಸಿಂಗ್ (35) ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಜುಲೈ 19ರಂದು ಬದ್ಲಾಪುರ ಪೂರ್ವದಲ್ಲಿರುವ ತಮ್ಮ ಮನೆಯಲ್ಲಿ ದಂಪತಿ ನಡುವೆ ಪತಿ ಸೀರೆ ತಂದುಕೊಡದ ವಿಚಾರವಾಗಿ ತೀವ್ರ ವಾಗ್ವಾದ ನಡೆದಿದೆ. ಕೋಪಗೊಂಡ ಸುನೀತಾದೇವಿ ಮೊದಲು ಪತಿಗೆ ಪ್ರೆಶರ್ ಕುಕ್ಕರ್‌ನ ಮುಚ್ಚಳದಿಂದ ಹಲ್ಲೆ ನಡೆಸಿ, ಬಳಿಕ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ಪತಿಯ ಸಾವು ಅಪಘಾತದಿಂದ ಸಂಭವಿಸಿದೆ ಎಂದು ಹೇಳಿ ಪತ್ನಿ ಪೊಲೀಸರನ್ನು ದಾರಿ ತಪ್ಪಿಸಲು ಯತ್ನಿಸಿದ್ದಳು. ಆಕೆಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಆರಂಭದಲ್ಲಿ ಅಪಘಾತದ ಸಾವು ಎಂದು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಆಗಮಿಸಿದ ವಿಪಕ್ಷ ಸಂಸದರು; ಕೇಂದ್ರದ ವಿರುದ್ಧ ಆಕ್ರೋಶ

ಆದರೆ, ಸರ್ಕಾರಿ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಕುತ್ತಿಗೆ ಬಿಗಿದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿರುವುದು ದೃಢಪಟ್ಟಿತ್ತು. ಬಳಿಕ ಮೃತನ ಕುಟುಂಬಸ್ಥರು ಹಾಗೂ ಮನೆಯ ಮಾಲೀಕರನ್ನು ವಿಚಾರಣೆ ನಡೆಸಿದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸುನೀತಾದೇವಿಯನ್ನು ಮಂಗಳವಾರ ಬಂಧಿಸಿ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಯನ್ನು ಜುಲೈ 29ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​7 ದಿನಗಳ ಜೈಲುವಾಸ ಅಂತ್ಯ: ಕೊನೆಗೂ ಬಿಡುಗಡೆಯಾದ ಕಾಕ್ರೋಚ್ ಜನತಾ ಪಾರ್ಟಿ ನಾಯಕರು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಕಾಕ್ರೋಚ್...

ಪ್ರತಿಭಟನೆಗಳ ವಿರುದ್ಧ ಅತಿಯಾದ ಬಲಪ್ರಯೋಗ ನಿಲ್ಲಿಸಿ; ಮೋದಿ ಸರ್ಕಾರಕ್ಕೆ ವಿಶ್ವಸಂಸ್ಥೆ ತಜ್ಞರ ಆಗ್ರಹ

ಭಾರತದಲ್ಲಿ ಇತ್ತೀಚಿನ ಪ್ರತಿಭಟನೆಗಳ ಸಂದರ್ಭದಲ್ಲಿ ಅಧಿಕಾರಿಗಳು ನಡೆದುಕೊಂಡ ರೀತಿಯ ಬಗ್ಗೆ ಸ್ವತಂತ್ರ...

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...