ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ದುರುಳ ಪತಿ

Date:

Advertisements

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು ದುರುಳ ಪತಿಯೊಬ್ಬ ಇರಿದು ಕೊಂದಿರುವ ಅಮಾನುಷ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.

ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈನಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಮೃತರನ್ನು ವಿ ಶೃತಿ (27) ಎಂದು ಗುರುತಿಸಲಾಗಿದೆ. ಆಕೆಯನನ್ನು ಆಕೆಯ ಪತಿ ಆರ್‌ ವಿಶ್ರುತ್ (28) ಆಸ್ಪತ್ರೆಯಲ್ಲೇ ಇರಿದು ಕೊಂದಿದ್ದಾನೆ ಎಂದು ವರದಿಯಾಗಿದೆ.

ಆರೋಪಿ ವಿಶ್ರುತ್ ಮತ್ತು ಮೃತ ಶೃತಿ – ಇಬ್ಬರೂ 7 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಕುಳಿತಲೈ ಬಳಿಯ ಮರುಧೂರ್ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದರು. ಆರೋಪಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ದಂಪತಿ ನಡುವೆ ಜಗಳ ನಡೆದಿತ್ತು. ಶೃತಿ ಮೇಲೆ ವಿಶ್ರುತ್ ದಾಳಿ ನಡೆಸಿದ್ದು, ಆಕೆಗೆ ಗಂಭೀರ ಗಾಯಗಳಾಗಿದ್ದವು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ಬಂದ ವಿಶ್ರುತ್ ಆಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದ್ದಿದ್ದಾನೆ. ಕ್ಷಣಾರ್ಧದಲ್ಲೇ ಶೃತಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾಗಿ ವರದಿಯಾಗಿದೆ.

ಘಟನಾ ಸ್ಥಳಕ್ಕೆ ಕುಳಿತಲೈ ಡಿಎಸ್‌ಪಿ ಸೆಂಥಿಲ್‌ ಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶೃತಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕರೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X