ಪತಿಯನ್ನು ದೇವಸ್ಥಾನ ಮರಕ್ಕೆ ಕಟ್ಟಿ, ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ; 7 ಮಂದಿ ಕಾಮುಕರ ಬಂಧನ

Date:

Advertisements

ದೇವಸ್ಥಾನಕ್ಕೆ ತೆರಳಿದ್ದ ದಂಪತಿಗಳ ಮೇಲೆ ಕಾಮುಕರ ಗುಂಪೊಂದು ದಾಳಿ ಮಾಡಿದ್ದು, ಪತಿಯನ್ನು ದೇವಾಲಯದ ಮರಕ್ಕೆ ಕಟ್ಟಿಹಾಕಿ, ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ಏಳು ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಉರ್ಕೊಂಡಪೇಟ ಗ್ರಾಮದಲ್ಲಿ ಮಹಿಳೆ ತನ್ನ ಪತಿಯೊಂದಿಗೆ ದೇವಸ್ಥಾನಕ್ಕೆ ತೆರಳಿದ್ದರು. ದೇವಾಲಯದ ಆವರಣದಲ್ಲಿ ದಂಪತಿಗಳು ಕುಳಿತಿದ್ದಾಗ, ಕಾಮುಕರು ದಾಳಿ ನಡೆಸಿದ್ದಾರೆ. ಪತಿಯ ಮೇಲೆ ಹಲ್ಲೆ ನಡೆಸಿ, ಆತನನ್ನು ಮರಕ್ಕೆ ಕಟ್ಟಿಹಾಕಿದ್ದಾರೆ. ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತ ಮಹಿಳೆಯ ಮತ್ತು ಆಕೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಎಲೆಕ್ಟ್ರಿಷಿಯನ್, ಆಟೋ ಚಾಲಕ ಮತ್ತು ಇಬ್ಬರು ಅಡುಗೆಯವರು ಸೇರಿದ್ದಾರೆ. ಈ ಎಲ್ಲರೂ ಈ ಹಿಂದೆ ಸುಲಿಗೆ ಪ್ರಕರಣಗಳಲ್ಲಿಯೂ ಆರೋಪಿಗಳಾಗಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ಪ್ರಧಾನಿ ಮೋದಿ ನಿವೃತ್ತರಾಗುತ್ತಾರೆಯೇ? RSS ಕೇಂದ್ರ ಕಚೇರಿ ಭೇಟಿಯ ಉದ್ದೇಶವೇನು?

ತೆಲಂಗಾಣದಲ್ಲಿ ಇತ್ತೀಚೆಗೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಿ. ಅನಸೂಯ ಸೀತಕ್ಕ ಚರ್ಚೆ ನಡೆಸಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X