ಹೈದರಾಬಾದ್ | ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಮೇಲೆ ಅತ್ಯಾಚಾರ; ವಿಮಾನ ತರಬೇತುದಾರ ವಿರುದ್ಧ FIR

Date:

ತೆಲಂಗಾಣದ ಬೇಗಂಪೇಟೆಯಲ್ಲಿ ತರಬೇತಿ ಪಡೆಯುತ್ತಿದ್ದ ಮಹಿಳಾ ಪೈಲಟ್ ಒಬ್ಬರ ಮೇಲೆ ಫ್ಲೈಯಿಂಗ್ ಇನ್‌ಸ್ಟ್ರಕ್ಟರ್ (ವಿಮಾನ ತರಬೇತುದಾರ) ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತ ಪೈಲಟ್ ನೀಡಿದ ದೂರಿನ ಆಧಾರದ ಮೇಲೆ ತರಬೇತುದಾರನ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ್ದಾರೆ.

- Advertisement -

ಪೊಲೀಸರ ಮಾಹಿತಿ ಪ್ರಕಾರ, ಸಂತ್ರಸ್ತ ಮಹಿಳೆಯು 2025ರ ಜನವರಿಯಲ್ಲಿ ಬೇಗಂಪೇಟೆಯ ಪೈಲಟ್ ತರಬೇತಿ ಸಂಸ್ಥೆಗೆ ತರಬೇತಿಗಾಗಿ ಸೇರಿದ್ದರು. ತರಬೇತಿ ಸಮಯದಲ್ಲಿ ಅವರಿಗೆ ಇಬ್ಬರು ತರಬೇತುದಾರರ ಪರಿಚಯವಾಗಿತ್ತು. ಅವರು ಪರೀಕ್ಷೆಯ ಸಿದ್ಧತೆಗಾಗಿ ಆಗಾಗ ಬ್ರಾಹ್ಮಣವಾಡಿಯಲ್ಲಿರುವ ‘ಪೇಯಿಂಗ್ ಗೆಸ್ಟ್’ (PG) ವಸತಿ ಗೃಹವೊಂದರಲ್ಲಿ ಭೇಟಿಯಾಗುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“2025ರ ಡಿಸೆಂಬರ್ 27 ರಂದು ಸಂಜೆ 6:30 ರ ಸುಮಾರಿಗೆ ಮಹಿಳೆಯು ಓದಿನ ವಿಷಯವಾಗಿ ಪಿಜಿಗೆ ಹೋಗಿದ್ದರು. ಆ ಸಮಯದಲ್ಲಿ ಆರೋಪಿಯು ತನ್ನ ವೈಯಕ್ತಿಕ ಸಮಸ್ಯೆಗಳನ್ನು ಹೇಳಿಕೊಂಡು, ಆಕೆಯ ವಿಶ್ವಾಸ ಗಳಿಸಿ ಪಿಜಿಯಲ್ಲೇ ಇರುವಂತೆ ಮನವೊಲಿಸಿದ್ದನು. ನಂತರ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿಯೆಂದು ಬೆದರಿಕೆ ಹಾಕಿದ್ದನು” ಎಂದು ದೂರಿನಲ್ಲಿ ವಿವರಿಸಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಕದನ ವಿರಾಮ ಘೋಷಿಸಿದ್ದರೂ, ಹಾರ್ಮುಜ್ ‘ಸುಂಕ’ ಮುಂದುವರಿಯಲಿವೆ!

ಘಟನೆಯ ನಂತರವೂ ಆರೋಪಿಯು ಆಕೆಗೆ ಪ್ರಾಣ ಬೆದರಿಕೆ ಹಾಕುತ್ತಿದ್ದ ಮತ್ತು ಮಾನಹಾನಿ ಮಾಡುವ ಬೆದರಿಕೆ ಒಡ್ಡುತ್ತಿದ್ದ ಕಾರಣ, ಆಕೆ ತಕ್ಷಣವೇ ಪೊಲೀಸರನ್ನು ಸಂಪರ್ಕಿಸಲು ಹೆದರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಘಟನೆಯ ಆಘಾತ ಮತ್ತು ಭಯದಿಂದಾಗಿ ಮಹಿಳೆಯು ಮಾರ್ಚ್‌ನಿಂದ ತರಬೇತಿ ತರಗತಿಗಳಿಗೆ ಹೋಗುವುದನ್ನು ನಿಲ್ಲಿಸಿದ್ದರು. ಅಂತಿಮವಾಗಿ ಧೈರ್ಯ ಮಾಡಿ ಬೇಗಂಪೇಟೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅವರ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಬಿಎನ್ಎಸ್ ಸೆಕ್ಷನ್ 64(2)(f) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...