ಒಡಿಶಾ ವಿಧಾನಸಭೆ ಸೋಲಿನ ನಂತರ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ ವಿ ಕೆ ಪಾಂಡಿಯನ್

Date:

ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಕಟ್ಟಾ ಬೆಂಬಲಿಗ ಎಂದೇ ಒಡಿಶಾದಲ್ಲಿ ಪರಿಚಿತರಾಗಿದ್ದ ವಿ ಕೆ ಪಾಂಡಿಯನ್‌ ಅವರು ತಮ್ಮ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಒಡಿಶಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ ಸೋಲು ಕಂಡ ನಂತರ ಪಾಂಡಿಯನ್‌ ಈ ನಿರ್ಧಾರ ಕೈಗೊಂಡಿದ್ದಾರೆ.

- Advertisement -

“ಈಗ ನಾನು ಪ್ರಜ್ಞಾಪೂರ್ವಕವಾಗಿ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಸಲು ನಿರ್ಧರಿಸಿದ್ದೇನೆ. ನನ್ನ ಈ ಹಾದಿಯಲ್ಲಿ ಯಾರಿಗಾದರೂ ನೋವು ಮಾಡಿದ್ದರೆ ನನ್ನನ್ನು ಕ್ಷಮಿಸಿ. ನನ್ನ ಪ್ರಚಾರದ ನಿರೂಪಣೆ ತಪ್ಪಾಗಿ ಬಿಜೆಡಿ ಪಕ್ಷ ಸೋಲು ಕಂಡಿದ್ದರೆ ನನ್ನನ್ನು ಕ್ಷಮಿಸಿ” ಎಂದು ವಿಡಿಯೋ ಸಂದೇಶದಲ್ಲಿ ವಿ ಕೆ ಪಂಡಿಯನ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಬಿಜು ಜನತಾದಳ ಹಾಗೂ ಒಡಿಶಾದ 5ಟಿ ಯೋಜನೆಯ ಅಧ್ಯಕ್ಷರಾದ ವಿ ಕೆ ಪಾಂಡಿಯನ್,” ನಾನು ಒಂದು ಸಣ್ಣ ಹಳ್ಳಿಯ ಅತೀ ವಿನಮ್ರ ಕುಟುಂಬದಿಂದ ಬಂದಿದ್ದೇನೆ. ಚಿಕ್ಕಂದಿನಿಂದಲೂ ನನ್ನ ಕನಸು ಐಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡುವುದಾಗಿತ್ತು. ಜಗನ್ನಾಥ ದೇವನಿಂದ ಇದು ಸಾಧ್ಯವಾಯಿತು. ನಾನು ಒಡಿಶಾ ಮಣ್ಣಿಗೆ ಕಾಲಿಟ್ಟಾಗ ಇಲ್ಲಿನ ಜನ ಅಪಾರ ಪ್ರೀತಿ ಹಾಗೂ ಗೌರವದಿಂದ ನನ್ನನ್ನು ಬರಮಾಡಿಕೊಂಡರು. ಜನರಿಗಾಗಿ ನಾನು ಕಷ್ಟಪಟ್ಟು ಕೆಲಸ ಮಾಡಿದ್ದೇನೆ” ಎಂದು ಸಂದೇಶದಲ್ಲಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ಇದೇ ಸಂದರ್ಭದಲ್ಲಿ ನವೀನ್‌ ಪಟ್ನಾಯಕ್‌ ಬಗ್ಗೆ ಮಾತನಾಡಿರುವ ಪಾಂಡಿಯನ್‌, ನನ್ನ ಜೀವನದುದ್ದಕ್ಕೂ ಅವರಿಂದ ಅನುಭವ ಹಾಗೂ ಪಾಠಗಳನ್ನು ಕಲಿತ್ತಿದ್ದೇನೆ. ಅವರ ಅನುಗ್ರಹ, ನಾಯಕತ್ವ, ನೈತಿಕತೆ ಒಳಗೊಂಡಂತೆ ಒಡಿಶಾದ ಜನರಿಗೆ ಸದಾ ತೋರುತ್ತಿರುವ ಪ್ರೀತಿ ಎಲ್ಲವೂ ನನಗೆ ಸ್ಪೂರ್ತಿಯಾಗಿದೆ. ಅವರ ನಿರೀಕ್ಷೆಯಂತೆ ನಾನು ಕೈಗೊಂಡ ಕೆಲಸಗಳು ಒಡಿಶಾ ಹಲವು ಕ್ಷೇತ್ರಗಳು ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಒಡಿಶಾದ ವಿಧಾನಸಭಾ ಚುನಾವಣೆಯಲ್ಲಿ 147 ಕ್ಷೇತ್ರಗಳ ಪೈಕಿ ಬಿಜೆಪಿ 78 ಸ್ಥಾನಗಳಿಸಿ ಅಭೂತಪೂರ್ವ ಗೆಲುವು ಸಾಧಿಸಿದ್ದರೆ, ಆಡಳಿತರೂಢ ಬಿಜೆಡಿ 51 ಸ್ಥಾನ ಗಳಿಸಲಷ್ಟೆ ಸಾಧ್ಯವಾಗಿತ್ತು.

ತಮಿಳುನಾಡು ಮೂಲದವರಾದ ವಿ ಕೆ ಪಾಂಡಿಯನ್‌ ಐಎಎಸ್‌ ಅಧಿಕಾರಿಯಾಗಿ 1991ರಲ್ಲಿ ಒಡಿಶಾಗೆ ನಿಯೋಜನೆಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...