ವಿವಾದಿತ ಹೇಳಿಕೆಯ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಕ್ಷಮೆಯಾಚನೆ

Date:

ಜನಸಂಖ್ಯಾ ನಿಯಂತ್ರಣದಲ್ಲಿ ಮಹಿಳಾ ಶಿಕ್ಷಣದ ಪಾತ್ರದ ಕುರಿತು ರಾಜ್ಯ ವಿಧಾನಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಹೇಳಿಕೆ ಬಗ್ಗೆ  ಕ್ಷಮೆಯಾಚಿಸಿದ್ದಾರೆ.

- Advertisement -

”ನಾನು ನನ್ನ ಮಾತುಗಳನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ಪ್ರತಿಕ್ರಿಯೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಮಹಿಳಾ ಶಿಕ್ಷಣದ ಬಗ್ಗೆ ಮಾತನಾಡಿದ್ದೇನೆ. ನನ್ನ ಹೇಳಿಕೆಗಳು ಯಾರಿಗಾದರೂ ನೋವುಂಟುಮಾಡಿದ್ದರೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

”ನಾನು ಇದನ್ನು ಸ್ಪಷ್ಟಪಡಿಸುತ್ತೇನೆ. ನಾನು ಮಾತನಾಡಿರುವುದು ಲೈಂಗಿಕ ಶಿಕ್ಷಣದ ಕುರಿತು. ಈ ವಿಚಾರವಾಗಿ ಜನರಲ್ಲಿ ಹಿಂಜರಿಕೆ ಇದೆ. ಆದರೆ ಇದನ್ನು ಶಾಲೆಗಳಲ್ಲಿ ಕಲಿಸಲಾಗುತ್ತದೆ. ಜನಸಂಖ್ಯೆ ನಿಯಂತ್ರಿಸಲು ಕಾರ್ಯತಃ ಏನು ಮಾಡುವ ಅಗತ್ಯವಿದೆ ಎಂಬುದರ ಬಗ್ಗೆ ಹೇಳಿದ್ದೇನೆ. ಇದನ್ನು ತಪ್ಪಾದ ರೀತಿಯಲ್ಲಿ ತೆಗೆದುಕೊಳ್ಳಬಾರದು” ಎಂದು ನಿತೀಶ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನೆನಪು | ಡಿ.ಬಿ ಚಂದ್ರೇಗೌಡ ಎಂಬ ದಾರದಹಳ್ಳಿಯ ಧೀಮಂತ

ಬಿಹಾರದ ಜನಸಂಖ್ಯಾ ಫಲವತ್ತತೆ ದರವು ಹೇಗೆ 4.2 ರಿಂದ 2.9 ಕ್ಕೆ ಇಳಿದಿದೆ ಎಂಬುದನ್ನು ಒತ್ತಿಹೇಳುವಾಗ ಮಹಿಳೆಯರ ಶಿಕ್ಷಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ವಿವಾದಾತ್ಮಕ ಹೇಳಿಕೆ  ನಂತರ ಬುಧವಾರ ಬಿಜೆಪಿ ಶಾಸಕರ ಪ್ರತಿಭಟನೆಯ ನಡುವೆಯೇ ನಿತೀಶ್ ಕುಮಾರ್ ಅವರಿಗೆ ವಿಧಾನಸಭೆ ಪ್ರವೇಶ ನಿರಾಕರಿಸಲಾಗಿತ್ತು. ನಂತರ ಪ್ರವೇಶಿಸಲು ಯಶಸ್ವಿಯಾದರು.

‘ಜನಸಂಖ್ಯೆ ನಿಯಂತ್ರಣದಲ್ಲಿ ಮಹಿಳೆಯರು ಶಿಕ್ಷಣ ಹೊಂದಿರುವುದು ಮಹತ್ವದ ಪಾತ್ರವಹಿಸುತ್ತದೆ. ಒಬ್ಬ ಸುಶಿಕ್ಷಿತ ಮಹಿಳೆಯು ಪತಿ ಲೈಂಗಿಕ ಕ್ರಿಯೆಯಲ್ಲಿ ತೊಡಗದಂತೆ ನಿರ್ಬಂಧ ಹೇರಬಲ್ಲವಳಾಗಿರುತ್ತಾಳೆ. ಜನನ ಪ್ರಮಾಣ ಹೆಚ್ಚಳಕ್ಕೆ ಪತಿಯ ಕೃತ್ಯವೇ ಕಾರಣವಾಗುತ್ತದೆ. ಶಿಕ್ಷಣ ಪಡೆದ ಮಹಿಳೆಯು ಪತಿಯನ್ನು ನಿರ್ಬಂಧಿಸುವ ಕುರಿತು ತಿಳಿದುಕೊಂಡಿರುತ್ತಾಳೆ. ಜನನ ಪ್ರಮಾಣದಲ್ಲಿ ಇಳಿಕೆಯಾಗಿರುವುದಕ್ಕೆ ಮಹಿಳೆಯರು ಶಿಕ್ಷಣ ಪಡೆದಿರುವುದೇ ಕಾರಣ’ ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...