ಮೋಶಾ ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ‘ಎನ್‌ಕೌಂಟರ್’ ಆಗಬಹುದು: ಸೋನಮ್ ವಾಂಗ್‌ಚುಕ್ ಆತಂಕ

Date:

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ತಮ್ಮನ್ನು ‘ಎನ್‌ಕೌಂಟರ್’ ಮಾಡುವ ಅಥವಾ ಜೀವ ತೆಗೆಯುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -

ಲಡಾಖ್‌ನಲ್ಲಿ 2025ರ ಸೆಪ್ಟೆಂಬರ್ 24ರಂದು ನಡೆದ ಪ್ರತಿಭಟನಾ ಹಿಂಸಾಚಾರ ಮತ್ತು ಪೊಲೀಸ್ ಗುಂಡಿನ ಚಕಮಕಿಯ ಮೊದಲ ವರ್ಷದ ನೆನಪಿನ ಸಭೆಯನ್ನು (ಹುತಾತ್ಮರ ದಿನ) ಉದ್ದೇಶಿಸಿ ಮಾತನಾಡಿದ ಸೋನಮ್ ವಾಂಗ್‌ಚುಕ್‌ ಅವರು ಈ ಗಂಭೀರ ಆರೋಪವನ್ನು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಇದನ್ನೂ ಓದಿ: ಸೋನಮ್ ವಾಂಗ್‌ಚುಕ್ ಜೀವ ಅಮೂಲ್ಯ, ರಕ್ಷಣೆಗೆ ಕೇಂದ್ರ, ದೆಹಲಿ ಸರ್ಕಾರಕ್ಕೆ ಹೈಕೋರ್ಟ್ ಆದೇಶ

“ನನ್ನನ್ನು ಈಗಾಗಲೇ ಜೈಲಿಗೆ ಅಟ್ಟಲಾಗಿದೆ. ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುವುದಕ್ಕೆ ನನ್ನನ್ನು ಎಲ್ಲಾದರೂ ‘ಎನ್‌ಕೌಂಟರ್’ ಮಾಡಿ ಮುಗಿಸಿಬಿಡುವ ಸಾಧ್ಯತೆಯಿದೆ ಎಂದು ಹಲವರು ನನ್ನನ್ನು ಎಚ್ಚರಿಸಿದ್ದಾರೆ. ಒಂದು ವೇಳೆ ಅದು ಸಂಭವಿಸಿದರೆ ಸಂಭವಿಸಲಿ, ಅದರಿಂದಾದರೂ ಈ ದೇಶ ಮತ್ತು ಇಲ್ಲಿನ ಜನರು ಎಚ್ಚೆತ್ತುಕೊಂಡರೆ ಸಾಕು” ಎಂದು ವಾಂಗ್‌ಚುಕ್ ಹೇಳಿದ್ದಾರೆ.

ಕಳೆದ ವರ್ಷ ಲಡಾಖ್‌ನ ಲೇಹ್‌ನಲ್ಲಿ ನಡೆದ ಹಿಂಸಾಚಾರದ ವೇಳೆ ಪೊಲೀಸರ ಗುಂಡೇಟಿಗೆ ನಾಲ್ವರು ಸ್ಥಳೀಯ ಯುವಕರು ಬಲಿಯಾಗಿದ್ದರು. ಈ ಘಟನೆಯ ನೈತಿಕ ಮತ್ತು ರಾಜಕೀಯ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಚೌಹಾಣ್ ನೇತೃತ್ವದಲ್ಲಿ ನಡೆದ ನ್ಯಾಯಾಂಗ ತನಿಖೆಯ ವರದಿಯನ್ನು ತಕ್ಷಣ ಸಾರ್ವಜನಿಕಗೊಳಿಸಬೇಕು. ಸರ್ಕಾರ ವರದಿ ನೀಡದಿದ್ದರೆ, ಸ್ವತಂತ್ರ ‘ಜನತಾ ನ್ಯಾಯಮಂಡಳಿ’ ರಚಿಸಿ ತನಿಖೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಪ್ರತಿಭಟನಾಕಾರರ ಮೇಲೆ AK-47 ನಂತಹ ಸ್ವಯಂಚಾಲಿತ ಆಯುಧಗಳಿಂದ ಗುಂಡು ಹಾರಿಸಲಾಗಿದೆ ಮತ್ತು ಸಂವಿಧಾನದ 6ನೇ ಪರಿಚ್ಛೇದ ಜಾರಿಗೆ ತರುವ ವಿಷಯದಲ್ಲಿ ನೀಡಿದ್ದ ಭರವಸೆಗಳನ್ನು ಸರ್ಕಾರ ಮುರಿದಿದೆ ಎಂದು ದೂರಿದ್ದಾರೆ.

ವಾಂಗ್‌ಚುಕ್ ಅವರ ಈ ಹೇಳಿಕೆ ಮತ್ತು ಆರೋಪಗಳನ್ನು ಲಡಾಖ್ ಪೊಲೀಸರು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಇವು “ಸತ್ಯಕ್ಕೆ ದೂರವಾದ ಮತ್ತು ದಾರಿ ತಪ್ಪಿಸುವ ಹೇಳಿಕೆಗಳು” ಎಂದು ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಕ್ಸೊ ಪ್ರಕರಣದಲ್ಲಿ ರಾಜಿಗೆ ಅವಕಾಶವಿಲ್ಲ: ದೆಹಲಿ ಹೈಕೋರ್ಟ್

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ (ಪೋಕ್ಸೊ)ಕ್ಕೆ ಸಂಬಂಧಿಸಿದ, ಪೋಕ್ಸೊ ಕಾಯ್ದೆಯಡಿ ದಾಖಲಾದ...

ಸೌಜನ್ಯ ಪ್ರಕರಣದ ಮರುತನಿಖೆ: ಎಸ್‌ಐಟಿ ಅಧಿಕಾರಿಗಳ ನೇಮಕದ ಸುತ್ತ ಭುಗಿಲೆದ್ದ ಅಸಮಾಧಾನ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ (ಡಿ-ನೋವೊ) ಸುಪ್ರೀಂ ಕೋರ್ಟ್...

ವಿಜಯಪುರ | ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ: ರಾಜ್ಯ, ರಾಷ್ಟ್ರಮಟ್ಟದ ಸಾಧನೆಗೆ ಕರೆ

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ ಆಘಾತಕಾರಿ ಸತ್ಯ: ಬದುಕಿದ್ದರೂ ‘ಮೃತ’ ಎಂದು ಘೋಷಣೆ!

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ...