ಇದು ಹೋರಾಟದ ಆರಂಭವಷ್ಟೇ: ಸಿಜೆಪಿ ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್

Date:

“ಸಾಮಾನ್ಯವಾಗಿ ಪ್ರತಿಭಟನೆ ನಡೆಸುವುದು ಇಷ್ಟವಿಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಕಂಡು ಸುಮ್ಮನಿರಲು ಸಾಧ್ಯವಾಗದೆ ಇಲ್ಲಿಗೆ ಬಂದಿದ್ದೇನೆ. ನ್ಯಾಯಕ್ಕಾಗಿ ಹೋರಾಡಲೇಬೇಕಾಗುತ್ತದೆ. ಅಷ್ಟಕ್ಕೂ ಇದು ಹೋರಾಟದ ಆರಂಭವಷ್ಟೇ” ಎಂದು ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಹೇಳಿದ್ದಾರೆ.

- Advertisement -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಧ್ವಾನಕ್ಕೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಗೆ ಬೆಂಬಲ ನೀಡಿ ಸೋನಮ್ ವಾಂಗ್‌ಚುಕ್ ಭಾಗಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನು ಓದಿದ್ದೀರಾ? ದೀಪ್ಕೆ, ಇತರ ಸಿಜೆಪಿ ಸದಸ್ಯರ ಬಂಧಿಸಿದರೆ 42 ದಿನ ಉಪವಾಸ ಕೂರುತ್ತೇನೆ: ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸೋನಮ್, “ದೇಶದ ಭವಿಷ್ಯ ಯುವ ಪೀಳಿಗೆಯ ಕೈಯಲ್ಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇಡೀ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲು ಸಮಗ್ರ ಸುಧಾರಣೆಗಳ ಅಗತ್ಯವಿದೆ” ಎಂದು ಕರೆ ನೀಡಿದರು.

“ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಕೇಳುತ್ತಿರುವುದು ನಮ್ಮ ಹೋರಾಟದ ಕೇವಲ ಆರಂಭ ಅಷ್ಟೇ. ಶಿಕ್ಷಣ ವ್ಯವಸ್ಥೆಯನ್ನು ಒಟ್ಟಾರೆಯಾಗಿ ತಳಮಟ್ಟದಿಂದ ಸುಧಾರಿಸುವುದು ಮತ್ತು ದೇಶದ ಕೋಟ್ಯಂತರ ಯುವಕರ ಭವಿಷ್ಯವನ್ನು ಕಾಪಾಡುವುದು ನಮ್ಮ ಪ್ರಮುಖ ಉದ್ದೇಶ” ಎಂದು ಪ್ರತಿಪಾದಿಸಿದ್ದಾರೆ.

“ದೇಶದ ಎಲ್ಲ ರಾಜಕಾರಣಿಗಳ ಮತ್ತು ಸರ್ಕಾರಿ ಉನ್ನತ ಅಧಿಕಾರಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿಯೇ (ಸರ್ಕಾರಿ ಶಾಲೆ ಮತ್ತು ಕಾಲೇಜುಗಳು) ಕಲಿಯುವಂತಾಗಬೇಕು. ಆಡಳಿತ ನಡೆಸುವವರ ಮಕ್ಕಳು ಅಲ್ಲಿ ಓದಿದಾಗ ಮಾತ್ರ ಸಾಮಾನ್ಯ ನಾಗರಿಕರ ಮಕ್ಕಳು ಎದುರಿಸುತ್ತಿರುವ ನೈಜ ಸಮಸ್ಯೆಗಳು ಅವರಿಗೆ ಅರ್ಥವಾಗುತ್ತವೆ ಮತ್ತು ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸುತ್ತದೆ” ಎಂದು ಅಭಿಪ್ರಾಯಿಸಿದರು.

ಸಿಜೆಪಿ ಆರಂಭವಾದಾಗಿನಿಂದ ಸೋನಮ್ ವಾಂಗ್‌ಚುಕ್ ನಿರಂತರವಾಗಿ ಸಿಜೆಪಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಯುವಜನರ ವಿನೂತನ ಪ್ರತಿಭಟನಾ ಶೈಲಿಯನ್ನು ಶ್ಲಾಘಿಸಿದ್ದಾರೆ. ಹಾಗೆಯೇ ತಮ್ಮನ್ನು ತಾವು ‘ಗೌರವಾನ್ವಿತ ಜಿರಳೆ’ ಎಂದು ಕರೆದುಕೊಂಡಿದ್ದಾರೆ. ಇನ್ನು ಈಗಾಗಲೇ ಅಭಿಜೀತ್ ದೀಪ್ಕೆ ಮತ್ತು ಸಿಜೆಪಿ ಬೆಂಬಲಿಗರನ್ನು ಬಂಧಿಸಿದರೆ 42 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.

ಇನ್ನು ಸೋನಮ್ ವಾಂಗ್‌ಚುಕ್ ಮಾತ್ರವಲ್ಲದೆ ಹಲವು ಹೋರಾಟಗಾರರು, ರಾಜಕಾರಣಿಗಳು ಸಿಜೆಪಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಟ ಪ್ರಕಾಶ್ ರಾಜ್, ಆದಿತ್ಯ ಠಾಕ್ರೆ, ಉದ್ಧವ್ ಠಾಕ್ರೆ, ಸಂಜಯ್ ರಾವತ್ ಮೊದಲಾದವರು ಬೆಂಬಲ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...