ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

Date:

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ ಎಂದು ಸುಪ್ರೀಂ ಕೋರ್ಟ್ ಭಾವಿಸಿದರೆ, ಕ್ಷಮೆಯಾಚಿಸಲು ಯಾವುದೇ ಹಿಂಜರಿಕೆಯಿಲ್ಲ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಬಣದ ರಾಜ್ಯಸಭಾ ಸಂಸದ ಸಂಜಯ್ ರಾವತ್ ಶುಕ್ರವಾರ ಹೇಳಿದ್ದಾರೆ.

- Advertisement -

ಸಂಸದ ಸಂಜಯ್ ರಾವತ್ ಅವರು ನ್ಯಾಯಾಲಯದ ಹೊರಗೆ ನೀಡುತ್ತಿರುವ ಹೇಳಿಕೆಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಪ್ರತಿಕ್ರಿಯೆ ಬಂದಿದೆ. “ನಾವು ಕೋರ್ಟ್‌ ಒಳಗೆ ಏನು ಹೇಳಲಾಗುತ್ತದೆ ಮತ್ತು ಹೊರಗೆ ನಾಯಕರು ಏನು ಹೇಳಿಕೆ ನೀಡುತ್ತಾರೆ ಎಂಬುದನ್ನು ಗಮನಿಸುತ್ತಿದ್ದೇವೆ” ಎಂದು ನ್ಯಾಯಪೀಠವು ಇತ್ತೀಚಿನ ವಿಚಾರಣೆ ವೇಳೆ ಆಕ್ಷೇಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಇದನ್ನೂ ಓದಿ: ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ: ಬಿಜೆಪಿ, ಟೀಮ್ ಇಂಡಿಯಾವನ್ನು ಟೀಕಿಸಿದ ಸಂಜಯ್ ರಾವತ್

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಜಯ್ ರಾವತ್, “ನಮಗೆ ನ್ಯಾಯಾಂಗ ಅಥವಾ ಸುಪ್ರೀಂ ಕೋರ್ಟ್ ಮೇಲೆ ಯಾವುದೇ ನಿಂದನೆ ಮಾಡುವ ಅಥವಾ ನಿಂದಿಸುವ ಉದ್ದೇಶವಿಲ್ಲ. ಶಿವಸೇನಾ ಪಕ್ಷದ ಹೆಸರು ಮತ್ತು ಗುರುತಿನ ವ್ಯಾಜ್ಯ ಕಳೆದ ನಾಲ್ಕೂವರೆ ವರ್ಷಗಳಿಂದ ನಡೆಯುತ್ತಿದೆ. ನಾಲ್ಕು ಮುಖ್ಯ ನ್ಯಾಯಮೂರ್ತಿಗಳು ಬದಲಾಗಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿದರು.

ಹಾಗೆಯೇ, “ನಮ್ಮ ಈ ಆವೇಗವನ್ನು ಕೋರ್ಟ್ ಅರ್ಥಮಾಡಿಕೊಳ್ಳಬೇಕು. ನಮಗೆ ಬೇಕಾಗಿರುವುದು ನ್ಯಾಯ. ಈ ಬೇಡಿಕೆಯನ್ನು ಇಡುವುದು ತಪ್ಪಾಗಿದ್ದರೆ ಮತ್ತು ಸುಪ್ರೀಂ ಕೋರ್ಟ್‌ಗೆ ನಮ್ಮ ಹೇಳಿಕೆಗಳಿಂದ ಅಸಮಾಧಾನವಾಗಿದ್ದರೆ, ಕ್ಷಮೆ ಕೇಳಲು ನನಗೆ ಯಾವುದೇ ಸಂಕೋಚವಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದರ ಜತೆಗೆ, ವೋಟರ್ ಪಟ್ಟಿ ಪರಿಷ್ಕರಣೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗೆ ಸಂಬಂಧಿಸಿದಂತೆ ದೇಶದ ಜನರಿಗೆ ಉನ್ನತ ನ್ಯಾಯಾಲಯದ ಮೇಲೆಯೇ ಅಂತಿಮ ಭರವಸೆಯಿದೆ ಎಂದು ರಾವತ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಅಂಟಾರ್ಕ್ಟಿಕದಲ್ಲಿ ಪೆಂಗ್ವಿನ್ ಎಣಿಸುವ ಅಪರೂಪದ ಉದ್ಯೋಗ: ಲಕ್ಷಗಳ ಸಂಭಾವನೆ, ಹೇಗಿರುತ್ತದೆ ಹಿಮದ ನಾಡಿನ ಬದುಕು?

ಜನಜಂಗುಳಿ, ಟ್ರಾಫಿಕ್ ಕಿರಿಕಿರಿ ಹಾಗೂ ದೈನಂದಿನ ಯಾಂತ್ರಿಕ ಬದುಕಿನಿಂದ ದೂರ ಸರಿದು,...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...