ಬಂಧನ ಇಲ್ಲವೇ ಹತ್ಯೆಯಾಗಬಹುದು, ಆದರೂ ಡಿಸೆಂಬರ್‌ಗೆ ಬಾಂಗ್ಲಾಕ್ಕೆ ಮರಳುವೆ: ಶೇಖ್ ಹಸೀನಾ

Date:

ತಮ್ಮನ್ನು ಬಂಧಿಸುವ ಅಥವಾ ಹತ್ಯೆ ಮಾಡುವ ಬೆದರಿಕೆಗಳಿದ್ದರೂ, ತಾನು ಹಾಗೂ ಅವಾಮಿ ಲೀಗ್‌ನ ಇತರ ಗಡೀಪಾರಾದ ನಾಯಕರು ಡಿಸೆಂಬರ್ ವೇಳೆಗೆ ಸ್ವಯಂಪ್ರೇರಿತವಾಗಿ ಬಾಂಗ್ಲಾದೇಶಕ್ಕೆ ಮರಳಲು ಉದ್ದೇಶಿಸಿದ್ದೇವೆ ಎಂದು ಮಾಜಿ ಪ್ರಧಾನಿ ಶೇಖ್ ಹಸೀನಾ ಘೋಷಿಸಿದ್ದಾರೆ. 2024ರ ಆಗಸ್ಟ್‌ನಲ್ಲಿ ನಡೆದ ವಿದ್ಯಾರ್ಥಿಗಳ ನೇತೃತ್ವದ ಬೃಹತ್ ಪ್ರತಿಭಟನೆಯ ಬಳಿಕ ಅಧಿಕಾರ ಕಳೆದುಕೊಂಡು ಭಾರತದಲ್ಲಿ ಆಶ್ರಯ ಪಡೆದಿರುವ 78 ವರ್ಷದ ಹಸೀನಾ, ತಾಯ್ನಾಡಿಗೆ ಮರಳಿ ನ್ಯಾಯಾಲಯದ ಮುಂದೆ ಶರಣಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

- Advertisement -

ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ನಾನು ಮರಳಿದ ತಕ್ಷಣವೇ ಅವರು ನನ್ನನ್ನು ಬಂಧಿಸಬಹುದು, ಅಥವಾ ನನ್ನನ್ನು ಕೊಲ್ಲಲೂಬಹುದು. ಆದರೂ, ನಾನು ನನ್ನ ದೇಶಕ್ಕೆ ಹಿಂದಿರುಗಿ ಹೋಗಲೇಬೇಕಿದೆ,” ಎಂದು ದೃಢವಾಗಿ ಹೇಳಿದ್ದಾರೆ. ಅಲ್ಲದೆ, ತಮ್ಮ ಈ ನಿಗದಿತ ವಾಪಸಾತಿ ಕುರಿತಂತೆ ಢಾಕಾದಲ್ಲಿರುವ ಹಾಲಿ ಅಧಿಕಾರಿಗಳೊಂದಿಗೆ ಯಾವುದೇ ರೀತಿಯ ಸಂಪರ್ಕ ಅಥವಾ ಅಧಿಕೃತ ಮಾತುಕತೆ ಇದುವರೆಗೆ ನಡೆದಿಲ್ಲ ಎಂಬುದನ್ನೂ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬಾಂಗ್ಲಾದೇಶದಲ್ಲಿನ ಪ್ರಸ್ತುತ ಪರಿಸ್ಥಿತಿ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಮಾಜಿ ಪ್ರಧಾನಿ, “ನನ್ನ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ತೀವ್ರ ದಮನಕ್ಕೆ ಗುರಿಪಡಿಸಲಾಗುತ್ತಿದೆ. ಒಂದು ವೇಳೆ ನನಗೆ ಸಾವು ಬರುವುದೇ ಆದರೆ, ಅದು ನನ್ನ ಸ್ವಂತ ಮಣ್ಣಿನಲ್ಲಿಯೇ ಬರಲಿ ಎಂದು ನಾನು ಬಯಸುತ್ತೇನೆ. ಅದೇ ಮಣ್ಣಿನಲ್ಲಿಯೇ ನನ್ನ ಪೋಷಕರನ್ನು ಹೂಳಲಾಗಿದೆ ಮತ್ತು ಅಲ್ಲಿಯೇ ಅವರ ರಕ್ತವೂ ಹರಿದಿದೆ” ಎಂದು ನುಡಿದರು.

ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯು (ಐಸಿಟಿ) ಶೇಖ್ ಹಸೀನಾ ಅವರಿಗೆ ಇತ್ತೀಚೆಗಷ್ಟೇ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2024ರ ವಿದ್ಯಾರ್ಥಿ ಪ್ರತಿಭಟನೆಗಳ ಮೇಲೆ ನಡೆದ ದೌರ್ಜನ್ಯ ಮತ್ತು ಸಾವುನೋವುಗಳನ್ನು ತಡೆಯಲು ವಿಫಲವಾದ, ಹಾಗೂ ಹಿಂಸಾಚಾರಕ್ಕೆ ಆದೇಶಿಸಿದ ಆರೋಪದ ಮೇಲೆ ಟ್ರಿಬ್ಯೂನಲ್ ಈ ತೀರ್ಪು ನೀಡಿತ್ತು. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಗಡೀಪಾರಾಗಿರುವ ಹಸೀನಾ ಅವರ ಈ ಹೇಳಿಕೆ ಹೊರಬಿದ್ದಿದೆ.

ನ್ಯಾಯಮಂಡಳಿಯು ಇದೇ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಅವರಿಗೂ ಮರಣದಂಡನೆ ವಿಧಿಸಿದ್ದು, ಮಾಜಿ ಐಜಿಪಿ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ, ಹಸೀನಾ ಮತ್ತು ಕಮಲ್ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ಅದು ಸರ್ಕಾರಕ್ಕೆ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...