ನಾನು ಮತ್ತೊಮ್ಮೆ ಹೇಳುತ್ತೇನೆ, ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ: ರಾಹುಲ್‌ ಗಾಂಧಿ

Date:

Advertisements

H-1B ವೀಸಾಗಳ ಮೇಲೆ ವಾರ್ಷಿಕ 100,000 ಡಾಲರ್ ಶುಲ್ಕ ವಿಧಿಸುವ ಅಮೆರಿಕದ ಕ್ರಮಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

H-1B ಕುರಿತು ಸುದ್ದಿ ವರದಿಯನ್ನು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ ಅವರು, ʼನಾನು ಮತ್ತೆ ಹೇಳುತ್ತೇನೆ, ಭಾರತ ದುರ್ಬಲ ಪ್ರಧಾನಿಯನ್ನು ಹೊಂದಿದೆ” ಎಂದು ಬರೆದುಕೊಂಡಿದ್ದಾರೆ.

ವಲಸೆಯನ್ನು ಹತ್ತಿಕ್ಕಲು ಅಮೆರಿಕ ಆಡಳಿತ ನಡೆಸುತ್ತಿರುವ ಪ್ರಯತ್ನಗಳಲ್ಲಿ ಒಂದಾಗಿ H1-B ವೀಸಾಗಳ ಶುಲ್ಕವನ್ನು ವಾರ್ಷಿಕವಾಗಿ 100,000 ಡಾಲರ್ ಗಳಿಗೆ ಹೆಚ್ಚಿಸುವ ಘೋಷಣೆಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಸಹಿ ಹಾಕಿದ್ದಾರೆ. H-1B ವೀಸಾ ಹೊಂದಿರುವವರಲ್ಲಿ ಶೇ. 71 ರಷ್ಟು ಪಾಲನ್ನು ಹೊಂದಿರುವ ಭಾರತಕ್ಕೆ ಈ ಕ್ರಮದಿಂದ ಹೆಚ್ಚು ತೊಂದರೆಯಾಗುವ ನಿರೀಕ್ಷೆಯಿದೆ.

ಡೊನಾಲ್ಡ್‌ ಟ್ರಂಪ್‌ ಅವರ ಈ ನಡೆಗೆ ಪ್ರಧಾನಿ ಮೋದಿ ಅವರನ್ನು ಇತರ ಕಾಂಗ್ರೆಸ್‌ ನಾಯಕರು ಟೀಕೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಿಎಸ್‌ಟಿ ದರ ಇಳಿಕೆ ಲಾಭ ಗ್ರಾಹಕರಿಗೆ ದೊರೆಯಲಿ!

“ಇತ್ತೀಚಿನ H1-B ವೀಸಾಗಳ ನಿರ್ಧಾರದಿಂದ ಅಮೆರಿಕ ಸರ್ಕಾರವು ಭಾರತದ ಅತ್ಯುತ್ತಮ ಮತ್ತು ಉಜ್ವಲ ಮನಸ್ಸಿನವರ ಭವಿಷ್ಯಕ್ಕೆ ಹೊಡೆತ ನೀಡಿದೆ” ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ಉಪ ನಾಯಕ ಗೌರವ್ ಗೊಗೊಯ್ ಎಕ್ಸ್ ನಲ್ಲಿ ಬರೆದಿದ್ದಾರೆ.

“ಐಎಫ್‌ಎಸ್ ಮಹಿಳಾ ರಾಜತಾಂತ್ರಿಕರೊಬ್ಬರನ್ನು ಅಮೆರಿಕದಲ್ಲಿ ಅವಮಾನಿಸಿದಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತೋರಿಸಿದ ಧೈರ್ಯ ನನಗೆ ಇನ್ನೂ ನೆನಪಿದೆ” ಎಂದು ಅವರು ಬರೆದುಕೊಂಡಿದ್ದಾರೆ.

“ಹುಟ್ಟುಹಬ್ಬದ ಕರೆಯ ನಂತರ ಭಾರತೀಯರು ಪಡೆಯುವ ರಿಟರ್ನ್ ಉಡುಗೊರೆಗಳಿಂದ ಹೆಚ್ಚಾಗಿ ನೋವು ಅನುಭವಿಸುತ್ತಾರೆ. ನಿಮ್ಮ ‘ಅಬ್ಕಿ ಬಾರ್, ಟ್ರಂಪ್ ಸರ್ಕಾರ್’ ಸರ್ಕಾರದಿಂದ ಬರ್ತ್‌ಡೇ ರಿಟರ್ನ್ ಉಡುಗೊರೆ H-1B ವೀಸಾಗಳ ಮೇಲೆ 100,000 ಡಾಲರ್ ವಾರ್ಷಿಕ ಶುಲ್ಕ! ಇದು ಭಾರತೀಯ ಟೆಕ್ ನೌಕರರಿಗೆ ಅತ್ಯಂತ ಕಠಿಣ ಪರಿಣಾಮ ಬೀರುತ್ತದೆ, H-1B ವೀಸಾ ಹೊಂದಿರುವವರಲ್ಲಿ ಶೇ 70 ಭಾರತೀಯರು…” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X