ಚಿಲ್ಲರೆ ಅಂಗಡಿ ಮಾಲೀಕನಿಗೆ 141 ಕೋಟಿ ರೂ. ತೆರಿಗೆ ನೋಟಿಸ್ ಕೊಟ್ಟ ಐಟಿ

Date:

ಚಿಲ್ಲರೆ ದಿನಸಿ ಅಂಗಡಿ ನಡೆಸುತ್ತಿದ್ದ ಮಾಲೀಕನಿಗೆ ಬರೋಬ್ಬರಿ 141 ಕೋಟಿ ರೂ.ಗಳ ತೆರಿಗೆ ನೋಟಿಸ್‌ಅನ್ನು ಆದಾಯ ತೆರಿಗೆ ಇಲಾಖೆ ನೀಡಿದೆ. ನೋಟಿಸ್‌ ನೋಡಿ ಅಂಗಡಿ ಮಾಲೀಗ ದಂಗಾಗಿದ್ದಾರೆ.

- Advertisement -

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ನಯಾಗಂಜ್ ನಿವಾಸಿ ಸುಧೀರ್‌ ಅವರಿಗೆ ಐಟಿ ಇಲಾಖೆ ನೋಟಿಸ್‌ ನೀಡಿದೆ. ಸುಧೀರ್ ಅವರು ತಮ್ಮ ಮನೆಯ ಭಾಗವೇ ಆಗಿರುವ ಸಣ್ಣ ಮಳಿಗೆಯಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದರು. ಆದರೆ, ಅವರು ದೆಹಲಿಯಲ್ಲಿ ಆರು ಸಂಸ್ಥೆಗಳನ್ನು ನಡೆಸುತ್ತಿದ್ದು, 141 ಕೋಟಿ ರೂ. ವಹಿವಾಟು ನಡೆಸಿದ್ದಾರೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನೋಟಿಸ್‌ ಬಗ್ಗೆ ಪ್ರತಿಕ್ರಿಯಿಸಿರುವ ಅಂಗಡಿ ಮಾಲೀಕ ಸುಧೀರ್, “ದೆಹಲಿಯಲ್ಲಿ ಆರು ಸಂಸ್ಥೆಗಳನ್ನು ಸ್ಥಾಪಿಸಲು ನನ್ನ ಪಾನ್ ಕಾರ್ಡ್ಅನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅವುಗಳ ವಹಿವಾಟಿಗೆ ನನ್ನ ಹೆಸರು ತೋರಿಸಲಾಗಿದೆ. ಆದರೆ, ಆ ಯಾವುದೇ ಕಂಪನಿಗಳೊಂದಿಗೆ ನನಗೆ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತ-ಚೀನಾ ‘ಭಾಯಿ ಭಾಯಿ’ ಎನ್ನುತ್ತಿದ್ದಾರೆ ಮೋದಿ; ಇದು ಸಾಧ್ಯವೇ?

ಸುಧೀರ್ ಅವರು ಖುರ್ಜಾ ಪೊಲೀಸ್ ಠಾಣೆ ದೂರು ದಾಖಲಿಸಿದ್ದಾರೆ. ಅವರು ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಠಾಣಾ ಅಧಿಕಾರಿ ಪಂಕಜ್ ರಾಯ್ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯಲು, ಶೆಲ್ ಕಂಪನಿಗಳನ್ನು ಆರಂಭಿಸಲು, ಸಾಲ ಪಡೆಯಲು ಹಾಗೂ ಇತರ ಆರ್ಥಿಕ ವಂಚನೆಗಳಿಗಾಗಿ ಬೇರೆಯವರ ಪಾನ್‌ ಕಾರ್ಟ್‌ಗಳನ್ನು ಬಳಸಿಕೊಂಡು, ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಜನರು ಎಚ್ಚರಿಕೆಯಿಂದ ಇರಬೇಕು. ತಮ್ಮ ಕ್ರೆಡಿಟ್ ವರದಿಗಳನ್ನು ಆಗ್ಗಾಗ್ಗೆ ಪರಿಶೀಲಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...