34 ವರ್ಷಗಳಲ್ಲಿ 57 ಬಾರಿ ವರ್ಗಾವಣೆಗೊಂಡಿದ್ದ ಐಎಎಸ್‌ ಅಧಿಕಾರಿ ಅಶೋಕ್ ಖೇಮ್ಕಾ ನಿವೃತ್ತಿ

Date:

Advertisements

ಸುಮಾರು 34 ವರ್ಷಗಳ ಕಾಲ ವೃತ್ತಿಜೀವನ ನಡೆಸಿ, ಈ ಅವಧಿಯಲ್ಲಿ 57 ಬಾರಿ ವರ್ಗಾವಣೆಗೊಂಡು, ವಿವಿಧ ಪ್ರದೇಶಗಳಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾ ಅವರಿಗೆ ಬುಧವಾರ (ಏಪ್ರಿಲ್ 30) ವೃತ್ತಿಯ ಕೊನೆಯ ದಿನ. ಇಂದು ಅವರು ನಿವೃತ್ತಿ ಹೊಂದಲಿದ್ದಾರೆ.

ಪ್ರಮಾಣಿಕ ಅಧಿಕಾರಿ ಎಂದೇ ಖ್ಯಾತಿ ಪಡೆದಿದ್ದ ಅಶೋಕ್ ಖೇಮ್ಕಾ ಅವರು 2014ರ ಡಿಸೆಂಬರ್‌ನಲ್ಲಿಯೂ ಕೊನೆಯ ಬಾರಿಗೆ ವರ್ಗಾವಣೆ ಕೊಂಡಿದ್ದರು. 34 ವರ್ಷಗಳಲ್ಲಿ ಬರೋಬ್ಬರಿ 57 ಬಾರಿ ವರ್ಗಾವಣೆಗೊಂಡಿರುವ ಅವರು ಒಂದೆಡೆ ನಿಂತು ಸೇವೆ ಸಲ್ಲಿಸಿರುವ ಸರಾಸರಿ ಕಾಲಾವಧಿ ಕೇವಲ ಐದಾರು ತಿಂಗಳು ಮಾತ್ರ.

ಅಶೋಕ್ ಅವರು 1965ರ ಏಪ್ರಿಲ್ 30ರಂದು ಕೋಲ್ಕತ್ತಾದಲ್ಲಿ ಜನಿಸಿದರು. 1988ರಲ್ಲಿ ಖರಗ್‌ಪುರ ಐಐಟಿಯಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್‌ನಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ ಪದವಿಯನ್ನು ಪಡೆದರು. ನಂತರ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ (TIFR) ನಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಪಿಎಚ್‌ಡಿ ಮತ್ತು ವ್ಯವಹಾರ ಆಡಳಿತ ಮತ್ತು ಹಣಕಾಸು ವಿಷಯದಲ್ಲಿ ವಿಶೇಷ ಎಂಬಿಎ ಪದವಿಯನ್ನು ಪಡೆದಿದರು. ಅಲ್ಲದೇ, ಸೇವೆಯಲ್ಲಿರುವಾಗಲೇ ಅವರು ಪಂಜಾಬ್ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿಯನ್ನೂ ಪೂರ್ಣಗೊಳಿಸಿದ್ದರು.

Advertisements

ಅಶೋಕ್‌ ಖೇಮ್ಕಾ ಅವರು ಹರಿಯಾಣ ಕೇಡರ್‌ನ 1991ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರು 2012ರಲ್ಲಿ ರಾಬರ್ಟ್ ವಾದ್ರಾ ಅವರಿಗೆ ಸಂಬಂಧಿಸಿದ ಗುರುಗ್ರಾಮ್ ಭೂ ಒಪ್ಪಂದಕ್ಕೆ ಸಂಬಂಧಿಸಿದಂತೆ ಮಾಲಕತ್ವವನ್ನು ವರ್ಗಾಯಿಸುವ ಪ್ರಕ್ರಿಯೆಯನ್ನು ರದ್ದುಗೊಳಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X