ಲೈಂಗಿಕ ದೌರ್ಜನ್ಯ, ಆತ್ಮಹತ್ಯೆಗೆ ಪ್ರೇರಣೆ ಆರೋಪ; ಐಎಎಸ್ ಅಧಿಕಾರಿ ಪೊಲೀಸರಿಗೆ ಶರಣು

Date:

ಅರುಣಾಚಲ ಪ್ರದೇಶದ ಐಎಎಸ್ ಅಧಿಕಾರಿ ತಲೋ ಪೊಟಮ್, 19 ವರ್ಷದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಆತ್ಮಹತ್ಯೆಗೆ ಪ್ರೇರೇಪಣೆ ಆರೋಪಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಭಾನುವಾರ ರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ.

- Advertisement -

ಪೊಟೊಮ್ ವಿರುದ್ಧ ರಾಷ್ಟ್ರವ್ಯಾಪಿ ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ. ಈ ಪ್ರಕರಣದಿಂದ ರಾಜ್ಯದಲ್ಲಿ ಜನರ ಆಕ್ರೋಶ ಉಂಟಾಗಿದ್ದು, ಪ್ರತಿಭಟನೆಗಳೂ ನಡೆದಿವೆ. ಪ್ರಕರಣದಲ್ಲಿ ಪೊಟಮ್, ವಿರುದ್ಧ ಎರಡು ಆತ್ಮಹತ್ಯೆ, ಲೈಂಗಿಕ ದೌರ್ಜನ್ಯ ಆರೋಪಗಳು ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

53 ವರ್ಷದ ಪೊಟಮ್, ಈ ಹಿಂದೆ ರಾಜಧಾನಿ ಇಟಾನಗರ್‌ನ ಉಪ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ನವದೆಹಲಿಯಲ್ಲಿ ಸಾರ್ವಜನಿಕ ಕಾರ್ಯಗಳ ಇಲಾಖೆ (PWD)ಯಲ್ಲಿ ಉಪ ಸಚಿವಾಲಯದ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪೊಟಮ್ ಇಟಾನಗರ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ ಎಂದು ಇಟಾನಗರ್ ವ್ಯಾಪ್ತಿಯ ಉಪ ಪೊಲೀಸ್ ಮಹಾನಿರ್ದೇಶಕ ತುಮ್ಮೆ ಅಮೋ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ತಲೆ ಮೇಲೆ ಹೊತ್ತು ಮೆರೆಸಿದವರು ಈಗ ಪಲಾಯನ ಮಾಡುವುದು ತರವೇ?

19 ವರ್ಷದ ಯುವಕನೊಬ್ಬ ಅಕ್ಟೋಬರ್ 23ರಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ PWD ಇಲಾಖೆಯಲ್ಲಿ ಬಹುಮುಖ ಸಿಬ್ಬಂದಿಯಾಗಿ (MTS) ಕೆಲಸ ಮಾಡುತ್ತಿದ್ದ. ಆತ ಬರೆದ ಆತ್ಮಹತ್ಯೆ ಪತ್ರದಲ್ಲಿ ಪೊಟೊಮ್ ಹಾಗೂ ಇನ್ನೊಬ್ಬ ಕಾರ್ಯನಿರ್ವಾಹಕ ಎಂಜಿನಿಯರ್ ತಮ್ಮ ಮೇಲೆ ಲೈಂಗಿಕ ಶೋಷಣೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾನೆ. ಎರಡನೇ ಆರೋಪಿಯ ಲೈಂಗಿಕ ದೌರ್ಜನ್ಯದಿಂದಾಗಿ ತನಗೆ ಎಚ್‌ಐವಿ ಸೋಂಕು ಹರಡಿದೆ ಎಂದು ಸಂತ್ರಸ್ತ ಹೇಳಿದ್ದಾನೆ. ಈ ಆರೋಪದ ನಂತರ ಎರಡನೇ ಆರೋಪಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಕೂಡ ಅದೇ ದಿನ ರಾತ್ರಿ (ಅಕ್ಟೋಬರ್ 23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂತ್ರಸ್ತನ ಪ್ರಕಾರ, ಪೊಟಮ್ 2021ರಿಂದ 2025ರವರೆಗೆ ಇಟಾನಗರ್‌ನ ಉಪ ಜಿಲ್ಲಾಧಿಕಾರಿಯಾಗಿದ್ದಾಗ ಆತನಿಗೆ ಉದ್ಯೋಗ ನೀಡಲಾಗಿತ್ತು. ಇತ್ತೀಚೆಗೆ ಅವನನ್ನು ದೆಹಲಿಗೆ ಕಳುಹಿಸಲಾಗಿತ್ತು. ಪೊಲೀಸರ ಪ್ರಕಾರ, ಇಬ್ಬರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬಾಲಕನ ದೇಹದ ಮೇಲೆ ಎಚ್‌ಐವಿ ಪರೀಕ್ಷೆಯನ್ನು ಮಾಡಲಾಗಿದ್ದು, ವರದಿಗಳಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕನ ಕುಟುಂಬ ಸದಸ್ಯರು ಭಾನುವಾರ ಇಟಾನಗರದಲ್ಲಿ ನಡೆದ ಸಾರ್ವಜನಿಕ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪೊಟೊಮ್ ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದರು.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...