ಗ್ಯಾಂಗ್‌ಸ್ಟರ್ ಜೊತೆ ಮರಳಿದ ಐಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆ

Date:

ಗ್ಯಾಂಗ್​ಸ್ಟರ್​ನನ್ನು ಪ್ರೀತಿಸಿ ಆತನೊಂದಿಗೆ ಹೋಗಿದ್ದ ಐಎಎಸ್​ ಅಧಿಕಾರಿ ಪತ್ನಿ ಮನೆಗೆ ವಾಪಸಾದ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್​ನ ಗಾಂಧಿನಗರದಲ್ಲಿ ನಡೆದಿದೆ.

- Advertisement -

ಗ್ಯಾಂಗ್​ಸ್ಟರ್​ ಜತೆ ಹೋಗಿದ್ದ ಸೂರ್ಯ ಜೈ ಎಂಬ ಮಹಿಳೆ 9 ತಿಂಗಳ ಬಳಿಕ ವಾಪಸಾಗಿದ್ದಳು. ವಾಪಸ್‌ ಆದ ಹೆಂಡತಿಯನ್ನು ಐಎಎಸ್ ಅಧಿಕಾರಿ ಮನೆಗೆ ಸೇರಿಸಿರಲಿಲ್ಲ. ಗ್ಯಾಂಗ್‌ಸ್ಟಾರ್‌ ಜೊತೆ ಓಡಿ ಹೋಗಿದ್ದಕ್ಕೆ ಐಎಎಸ್ ಅಧಿಕಾರಿ ಮನೆಯೊಳಗೆ ಬಿಟ್ಟುಕೊಂಡಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಹಿಳೆಯ ಪತಿ ರಂಜಿತ್‌ ಕುಮಾರ್ ಗುಜರಾತ್‌ ವಿದ್ಯುತ್‌ ನಿಗಮದಲ್ಲಿ ಕಾರ್ಯದರ್ಶಿಯಾಗಿದ್ದಾರೆ. ಮೂಲಗಳ ಪ್ರಕಾರ ದಂಪತಿ 2023ರಲ್ಲಿ ವಿವಾಹ ವಿಚ್ಚೇದನ ಪಡೆದು ಪ್ರತ್ಯೇಕವಾಗಿದ್ದರು ಎನ್ನಲಾಗಿದೆ.

ಮನೆಗೆ ಬಿಟ್ಟುಕೊಳ್ಳದ ಕಾರಣ ಸೂರ್ಯ ಜೈ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | RSS ನಿಷೇಧ ತೆರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆಯೇ?

ಮಧುರೈನಲ್ಲಿ 14 ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ತಮಿಳುನಾಡು ಪೊಲೀಸರಿಂದ ಬಂಧನವನ್ನು ತಪ್ಪಿಸಲು ಸೂರ್ಯ ಜೈ ತನ್ನ ಗಂಡನ ಮನೆಗೆ ಮರಳಿರಬಹುದು ಎಂದು ಮಾಧ್ಯಮಗಳು ವರದಿ ಮಾಡಿವೆ.

ತಮಿಳಿನಲ್ಲಿ ಬರೆದಿರುವ ಆತ್ಮಹತ್ಯಾ ಪತ್ರವೂ ಪೊಲೀಸರಿಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದ್ದು, ಆದರೆ ಈ ಬಗ್ಗೆ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

ಸೂರ್ಯ ಜೈ ಜುಲೈ 11 ರಂದು ಪ್ರಿಯಕರ ಗ್ಯಾಂಗ್‌ಸ್ಟಾರ್‌ ಜೊತೆ ಸೇರಿ ಮಗುವೊಂದನ್ನು ಅಪಹರಿಸಿ 2 ಕೋಟಿ ರೂ. ಬೇಡಿಕೆ ಇಟ್ಟಿದ್ದಳು. ಆದರೆ ಮಧುರೈ ಪೊಲೀಸರು ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರ ಪೊಲೀಸರು ಸೂರ್ಯ ಸೇರಿದಂತೆ ಭಾಗಿಯಾದವರ ಹುಡುಕಾಟ ಆರಂಭಿಸಿದ್ದರು. ಇದೇ ವೇಳೆ ಮಹಿಳೆಯ ಪತಿ ಶವ ಸ್ವೀಕರಿಸಲು ನಿರಾಕರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...