ಅಮೆರಿಕ-ಪಾಕ್ ನಡುವೆ ಯುದ್ಧವಾದರೆ ನಾವು ಪಾಕಿಸ್ತಾನದ ಪರ: ರಾಜಸ್ಥಾನ ಬಿಜೆಪಿ ಅಧ್ಯಕ್ಷನ ವಿವಾದಾತ್ಮಕ ಹೇಳಿಕೆ

Date:

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಒಂದು ವೇಳೆ ಯುದ್ಧ ಸಂಭವಿಸಿದರೆ, ಭಾರತವು ತನ್ನ ನೆರೆಹೊರೆಯ ದೇಶವಾದ ಪಾಕಿಸ್ತಾನದ ಪರವಾಗಿ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಮದನ್ ರಾಥೋಡ್ ನೀಡಿರುವ ಹೇಳಿಕೆ ದೇಶಾದ್ಯಂತ ತೀವ್ರ ರಾಜಕೀಯ ಸಂಚಲನ ಮೂಡಿಸಿದೆ.

- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ರಾಥೋಡ್, “ಒಂದು ವೇಳೆ ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನಾವು ಪಾಕಿಸ್ತಾನದ ಪರವಾಗಿ ನಿಲ್ಲುತ್ತೇವೆ, ಏಕೆಂದರೆ ಅದು ನಮ್ಮ ನೆರೆಯ ದೇಶ. ಆದರೆ ನಮ್ಮಿಬ್ಬರ (ಭಾರತ-ಪಾಕ್) ನಡುವೆ ವಿಚಾರ ಬಂದಾಗ, ಅವರು ಭಾರತದೊಂದಿಗೆ ನಿಲ್ಲಬೇಕು” ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ. ಈ ಮಾತಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ವಿವಾದ | ಕೇರಳವನ್ನು ‘ಮಿನಿ ಪಾಕಿಸ್ತಾನ’ ಎಂದ ಬಿಜೆಪಿ ಸಚಿವ

ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ಮತ್ತು ಇತರ ನಾಯಕರು ಈ ಹೇಳಿಕೆಯನ್ನು ಕಟುವಾಗಿ ಖಂಡಿಸಿದ್ದಾರೆ. “ಪಾಕಿಸ್ತಾನವು ಭಯೋತ್ಪಾದನೆಯನ್ನು ಪೋಷಿಸುವ ದೇಶವಾಗಿದೆ. ಬಿಜೆಪಿ ನಾಯಕನ ಈ ಹೇಳಿಕೆಯನ್ನು ಪಕ್ಷ ಬೆಂಬಲಿಸುತ್ತದೆಯೇ? ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದಲ್ಲಿ ಮೌನ ಮುರಿಯಬೇಕು ಮತ್ತು ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಎಎಪಿ ನಾಯಕರು ವೈರಲ್ ವಿಡಿಯೋವನ್ನು ಹಂಚಿಕೊಂಡು, “ಬಿಜೆಪಿಗೆ ಪಾಕಿಸ್ತಾನದ ಮೇಲಿರುವ ಪ್ರೀತಿ ಮತ್ತೊಮ್ಮೆ ಬಹಿರಂಗವಾಗಿದೆ. ಸಾಮಾನ್ಯ ಜನ ಪ್ರಶ್ನೆ ಕೇಳಿದರೆ ದೇಶದ್ರೋಹಿ ಎನ್ನುವ ಬಿಜೆಪಿ, ಈಗ ಪಾಕಿಸ್ತಾನದ ಪರ ನಿಲ್ಲುವುದಾಗಿ ಹೇಳುತ್ತಿದೆ” ಎಂದು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CEC ರಾಜೀನಾಮೆಗೆ ಆಗ್ರಹ; ಅ.23ರಂದು ಸಂಯುಕ್ತ ಕಿಸಾನ್‌ ಮೋರ್ಚಾದಿಂದ ದೆಹಲಿ ಚಲೋ

SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ...