‘ನಿರ್ಭಯಾಳಂತೆ ನಾನೂ ಸತ್ತಿದ್ದರೆ, ಎಲ್ಲರೂ ನಂಬುತ್ತಿದ್ದರು’: ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ

Date:

ತನ್ನ ತಂದೆಯ ಕಸ್ಟಡಿ ಸಾವಿಗೆ ಸಂಬಂಧಿಸಿದಂತೆ ಉಚ್ಚಾಟಿತ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ತಮಗೆ ನಿರಾಳತೆ ನೀಡಿದೆ ಎಂದು ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಹೇಳಿದ್ದಾರೆ.

- Advertisement -

“ನಾನು ಇಂದು ಸುಪ್ರೀಂ ಕೋರ್ಟ್‌ಗೆ ಹೋಗಿದ್ದೆ. ನ್ಯಾಯಾಧೀಶರು ತೀರ್ಪು ನೀಡಿದಾಗ ನಾನು ನ್ಯಾಯಾಲಯದಲ್ಲಿದ್ದೆ. ಈ ತೀರ್ಪಿನಿಂದ ನನಗೆ ತುಂಬಾ ಸಂತೋಷವಾಗಿದೆ. ನ್ಯಾಯಾಧೀಶರು ಸಾಧ್ಯವಾದಷ್ಟು ಬೇಗ – 3 ತಿಂಗಳೊಳಗೆ – ವಿಚಾರಣೆಯನ್ನು ಪೂರ್ಣಗೊಳಿಸಲು ಆದೇಶಿಸಿದ್ದು ನನಗೆ ತೃಪ್ತಿ ತಂದಿದೆ. ನನ್ನ ತಂದೆಯನ್ನು ಕುಲದೀಪ್ ಸೆಂಗಾರ್‌ನ ಸಹೋದರರಾದ ಅತುಲ್ ಸಿಂಗ್ ಸೆಂಗಾರ್ ಮತ್ತು ಜೈದೀಪ್ ಸಿಂಗ್ ಸೆಂಗಾರ್ ಕೊಂದರು. ಆರೋಪಿಗಳು ವೈದ್ಯಕೀಯ ಚಿಕಿತ್ಸೆ ನೆಪದಲ್ಲಿ ಜೈಲಿನಿಂದ ಹೊರಗಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಎಲ್ಲ ಪೊಲೀಸ್ ಅಧಿಕಾರಿಗಳು ಹೊರಗಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್ ನನ್ನ ಮೇಲೆ ಘೋರ ಕೃತ್ಯ ಎಸಗಿದ್ದಾರೆ. ಅವರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಾನು ಅದನ್ನು ಹೇಗೆ ಸಾಬೀತುಪಡಿಸಬಹುದು? ನಾನು ಜೀವಂತವಾಗಿದ್ದೇನೆ. ದೆಹಲಿಯ ನಿರ್ಭಯಾಳಂತೆ ನಾನೂ ಸತ್ತಿದ್ದರೆ, ನನ್ನ ಮೇಲೆ ಅತ್ಯಾಚಾರವಾಗಿದೆ ಎಂಬುದನ್ನು ಎಲ್ಲರೂ ನಂಬುತ್ತಿದ್ದರು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ನನ್ನ ಮೇಲಾದ ಕೃತ್ಯವನ್ನು ಸಾಬೀತುಪಡಿಸಲು 8 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ನನಗೆ ಏನಾಯಿತು ಎಂಬುದನ್ನು ಸಾಬೀತುಪಡಿಸಲು ವರ್ಷಗಳೇ ಬೇಕಾಯಿತು. ಈಗಲೂ ಸಹ, ನಾನು ಅತ್ಯಾಚಾರಕ್ಕೊಳಗಾಗಿದ್ದೇನೆ ಎಂದು ಸಾಬೀತುಪಡಿಸಬೇಕಾಗಿದೆ. ಒಂದು ವೇಳೆ, ನಾನು ನಿರ್ಭಯಾಳಂತೆ ಸತ್ತಿದ್ದರೆ, ನಾನು ಅತ್ಯಾಚಾರಕ್ಕೊಳಗಾಗಿದ್ದೇನೆ ಎಂದು ಎಲ್ಲರೂ ನಂಬುತ್ತಿದ್ದರು. ಆದರೆ, ನಾನು ಜೀವಂತವಾಗಿದ್ದೇನೆ” ಎಂದಿದ್ದಾರೆ.

“ನನ್ನ ತಂದೆಯ ಸಾವಿಗೆ ನ್ಯಾಯ ಒದಗಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡುತ್ತೇನೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ಮರಣದಂಡನೆ ವಿಧಿಸಬೇಕು. ಅದರಿಂದ, ತನ್ನ ತಂದೆಯ ಆತ್ಮಕ್ಕೆ ಶಾಂತಿ ಸಿಗುತ್ತದೆ” ಎಂದಿದ್ದಾರೆ.

ಜೈಲಿನಲ್ಲಿರುವ ಅತ್ಯಾಚಾರ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದಿಪ್ ಸಿಂಗ್ ಸೆಂಗಾರ್ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಕೋರ್ಟ್‌, ಅರ್ಜಿಯನ್ನು ತಿರಸ್ಕರಿಸಿದೆ. ಪ್ರಕರಣವನ್ನು 3 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ನೀಡುವಂತೆ ದೆಹಲಿ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...