ನ್ಯಾಯಾಧೀಶೆಯರ ವಜಾ | ಪುರುಷರಿಗೂ ಮುಟ್ಟಾಗುವಂತಿದ್ದರೆ ಅರ್ಥವಾಗುತ್ತಿತ್ತು: ಸುಪ್ರೀಂ ತರಾಟೆ

Date:

ನ್ಯಾಯಾಧೀಶೆಯರನ್ನು ಸೇವೆಯಿಂದ ವಜಾಗೊಳಿಸಿದ್ದಕ್ಕಾಗಿ ಮತ್ತು ಅವರನ್ನು ಮರುನೇಮಕಗೊಳಿಸಲು ನಿರಾಕರಿಸಿದ್ದಕ್ಕಾಗಿ ಮಂಗಳವಾರ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡಿದೆ. “ಪುರುಷರಿಗೂ ಮುಟ್ಟಾಗುವಂತಿದ್ದರೆ (ಋತುಸ್ರಾವ) ಅರ್ಥವಾಗುತ್ತಿತ್ತು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

- Advertisement -

ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠದ ನೇತೃತ್ವದ ವಹಿಸಿದ್ದ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು, “ಪುರುಷರಿಗೂ ಮುಟ್ಟಾಗುವಂತಿದ್ದರೆ ಮಾತ್ರ ಅವರಿಗೆ ಅರ್ಥವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ. ಮಧ್ಯಪ್ರದೇಶದ ಹೈಕೋರ್ಟ್‌ನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಮುಟ್ಟಿನ ರಜೆ | ಮಹಿಳಾ ಸಮಸ್ಯೆಗಳ ಕುರಿತ ವಿ’ಸ್ಮೃತಿ’ಗೆ ಕೊನೆಯೆಲ್ಲಿ?

“ವಿಶೇಷವಾಗಿ ಮಹಿಳೆಯರು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲುತ್ತಿದ್ದರೆ, ಅವರು ನಿಧಾನವಾಗಿ ಕೆಲಸ ಮಾಡುತ್ತಾರೆ ಎಂಬ ಕಾರಣ ನೀಡಿ ಅವರನ್ನು ಮನೆಗೆ ಕಳುಹಿಸಬೇಡಿ. ಪುರುಷ ನ್ಯಾಯಾಧೀಶರಿಗೂ, ನ್ಯಾಯಾಂಗದ ಅಧಿಕಾರಿಗಳಿಗೂ ಇದೇ ಮಾನದಂಡವನ್ನು ವಿಧಿಸಿ. ಆಗ ನೋಡೋಣ ಏನಾಗುತ್ತದೆ ಎಂದು. ಏನಾಗುವುದೆಂದು ನಮಗೆ ತಿಳಿದಿದೆ. ಜಿಲ್ಲಾ ನ್ಯಾಯಾಲಯಕ್ಕೆ ನೀವು ಗುರಿಯನ್ನು ನಿಗದಿಪಡಿಸಲು ಹೇಗೆ ಸಾಧ್ಯ” ಎಂದು ಸುಪ್ರೀಂ ಕೋರ್ಟ್ ಪೀಠ ಪ್ರಶ್ನಿಸಿದೆ.

ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 12ರಂದು ನಡೆಸಲಿದೆ. ಈ ವರ್ಷದ ಜನವರಿಯಲ್ಲಿ ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ‌; ಶಾಲಾ ಶಿಕ್ಷಕ ಹಾಜಿಮಲಂಗ ಗಿಣಿಯಾರ ಬಂಧನ

ಮಧ್ಯಪ್ರದೇಶ ಹೈಕೋರ್ಟ್ ಆದೇಶದಂತೆ 2023ರ ಜೂನ್ ತಿಂಗಳಲ್ಲಿ ಮಧ್ಯಪ್ರದೇಶ ಸರ್ಕಾರವು ಆರು ನ್ಯಾಯಾಧೀಶೆಯರನ್ನು ವಜಾಗೊಳಿಸಿದೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶೆಯರು ಮಾನಸಿಕವಾಗಿ ಮತ್ತು ದೈಹಿಕವಾಗಿ ಬಳಲುತ್ತಿರುವಾಗ ಪ್ರಕರಣದ ವಿಲೇವಾರಿ ದರವು ಅಳತೆಗೋಲು ಆಗುವುದಿಲ್ಲ ಎಂದು ಹೇಳಿದೆ.

2024ರ ಜುಲೈ 23ರಂದು ನ್ಯಾಯಾಧೀಶೆಯರನ್ನು ವಜಾಗೊಳಿಸುವ ತನ್ನ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಪೀಠವು ಮಧ್ಯಪ್ರದೇಶ ಹೈಕೋರ್ಟ್‌ಗೆ ತಿಳಿಸಿದೆ. ಆದರೆ ಹೈಕೋರ್ಟ್ ಆದೇಶವನ್ನು ಮಧ್ಯಪ್ರದೇಶ ಸರ್ಕಾರದ ರಾಜ್ಯ ಕಾನೂನು ಇಲಾಖೆಯು ಅಂಗೀಕರಿಸಿದ್ದು ಆರು ಮಹಿಳಾ ನ್ಯಾಯಾಧೀಶೆಯರನ್ನು ವಜಾಗೊಳಿಸಿದೆ. ಅರ್ಹತಾ ಪರೀಕ್ಷಣೆ ಅವಧಿಯಲ್ಲಿ ನ್ಯಾಯಾಧೀಶೆಯರ ಕಾರ್ಯಕ್ಷಮತೆ ತೃಪ್ತಿಕರವಲ್ಲ ಎಂಬ ಕಾರಣವನ್ನು ನೀಡಿ ವಜಾಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...