ರಸ್ತೆಯಲ್ಲಿ ನಮಾಜ್‌ ವಿವಾದ; ಬೀದಿಯಲ್ಲಿ ನಡೆಯುವ ಇತರೆ ಧಾರ್ಮಿಕ ಆಚರಣೆಗಳನ್ನೂ ವಿರೋಧಿಸಲಿ: ಓವೈಸಿ

Date:

ರಸ್ತೆಗಳಲ್ಲಿ ನಮಾಜ್ ಮಾಡುವುದು ತಪ್ಪಾದರೆ ಬೀದಿಯಲ್ಲಿ ನಡೆಯುವ ಇತರೆ ಧಾರ್ಮಿಕ ಆಚರಣೆಗಳನ್ನೂ ವಿರೋಧಿಸಲಿ ಎಂದು AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾದಿಸಿದ್ದಾರೆ. ದೇಶಾದ್ಯಂತ ಮುಸ್ಲಿಮರ ವಿರುದ್ಧ ದಾಳಿಯನ್ನು ಖಂಡಿಸುತ್ತಾ ಈ ಹೇಳಿಕೆ ನೀಡಿದ್ದಾರೆ.

- Advertisement -

ಹೈದಾರಾಬಾದ್‌ನ AIMIM ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, “ಮುಸ್ಲಿಮರನ್ನು ಮೂಲೆಗುಂಪು ಮಾಡಲು ಮತ್ತು ಅವರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿಸುವ ಪ್ರಯತ್ನ ನಡೆಯುತ್ತಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಕೋಮುದ್ವೇಷ | ನಮಾಜ್ ಭಾಷಣದಲ್ಲಿ ಯೋಗಿ ಅಡಗಿಸಿಟ್ಟ ಗೂಢಾರ್ಥವೇನು?

“ದೇಶದ ರಸ್ತೆಗಳಲ್ಲಿ ಪ್ರತಿಯೊಂದು ಧರ್ಮದ ಹಬ್ಬಗಳು ನಡೆಯುತ್ತವೆ. ಉತ್ತರಾಖಂಡದಿಂದ ದೆಹಲಿಯವರೆಗೆ ರಸ್ತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಲಾದ ಧಾರ್ಮಿಕ ಯಾತ್ರೆಗಳಿಗೆ ಏಕೆ ಆಕ್ಷೇಪಣೆಗಳಿಲ್ಲ. ರಸ್ತೆಗಳಲ್ಲಿ ನಮಾಜ್ ನಡೆದಾಗ ಎಷ್ಟು ಸಮಯ ತೆಗೆದುಕೊಳ್ಳುತ್ತದೆ” ಎಂದು ಪ್ರಶ್ನಿಸಿದರು.

“ಹಿಂದೂ ಹಬ್ಬಗಳ ಸಮಯದಲ್ಲಿ ಮೊಟ್ಟೆ, ಮಾಂಸ ಮತ್ತು ಕೋಳಿ ಮಾರಾಟದ ಮೇಲೆ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಇತರೆ ಹಬ್ಬದ ಸಮಯದಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಬೇಕು ಎಂದು ನೀವು ಹೇಳಿದರೆ, ರಂಜಾನ್ ಹಬ್ಬದ ಸಮಯದಲ್ಲಿ ಎಲ್ಲ ಮದ್ಯದ ಅಂಗಡಿಗಳನ್ನು 30 ದಿನಗಳವರೆಗೆ ಮುಚ್ಚಬೇಕು” ಎಂದು ವಾದಿಸಿದರು.

“ನೀಟ್ ಪತ್ರಿಕೆ ಸೋರಿಕೆಯಿಂದ ಆಗುತ್ತಿರುವ ಅನಾಹುತಗಳನ್ನು ನಿರ್ಲಕ್ಷಿಸಿ, ಟಿವಿ ಚಾನೆಲ್‌ಗಳು ಮುಸ್ಲಿಮರು ರಸ್ತೆಗಳಲ್ಲಿ ನಮಾಜ್ ಮಾಡುವಂತಹ ವಿಷಯಗಳನ್ನು ಹೈಲೈಟ್ ಮಾಡುತ್ತವೆ. ಭಾರತವು ಮುಸ್ಲಿಮರಿಗೂ ಸೇರಿದೆ. ಮುಸ್ಲಿಮರು ತಮ್ಮ ಸಮಸ್ಯೆಗಳ ವಿರುದ್ಧ ಪ್ರಜಾಪ್ರಭುತ್ವ ರೀತಿಯಲ್ಲಿ ಹೋರಾಡುವುದನ್ನು ಮುಂದುವರಿಸುತ್ತಾರೆ” ಎಂದು ಹೇಳಿದರು.

“ನನ್ನ ಧಾರ್ಮಿಕ ಸ್ವಾತಂತ್ರ್ಯವನ್ನು ನೀವು ಹೇಗೆ ಕಸಿದುಕೊಳ್ಳಬಹುದು? ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮಾಡಲಾಗಿದೆ. ಹಿಂದೂ ವಿವಾಹದ ತತ್ವಗಳನ್ನು ಮುಸ್ಲಿಮರ ಮೇಲೆ ಏಕೆ ಹೇರಲಾಗುತ್ತಿದೆ” ಎಂದು ಪ್ರಶ್ನಿಸಿದರು.

“ಮುಸ್ಲಿಮರು ಮಾಂಸಾಹಾರ ಸೇವಿಸುವುದನ್ನು ಕೆಟ್ಟದಾಗಿ ಚಿತ್ರಿಸಲಾಗುತ್ತಿದೆ. ಸಂಘ ಪರಿವಾರವು ದೇಶದಲ್ಲಿರುವ ಪ್ರತಿಯೊಬ್ಬರನ್ನು ಸಸ್ಯಾಹಾರಿಗಳನ್ನಾಗಿ ಮಾಡಲು ಯತ್ನಿಸುತ್ತಿದೆ. ಕೌಟಿಲ್ಯನ ‘ಅರ್ಥಶಾಸ್ತ್ರ’ದಲ್ಲಿ ಮಾಂಸ ಸೇವನೆಯ ಬಗ್ಗೆ ಉಲ್ಲೇಖಿಸಲಾಗಿದೆ. ಸ್ವಾಮಿ ವಿವೇಕಾನಂದರು ಪ್ರಾಚೀನ ಹಿಂದೂ ಸಮಾರಂಭಗಳಲ್ಲಿ ಗೋಮಾಂಸ ಸೇವನೆಯ ಬಗ್ಗೆ ಉಲ್ಲೇಖಿಸಿದ್ದಾರೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...