ಫಾರ್ಮ್‌-6 ಮೂಲಕ ಮರುನೋಂದಣಿ ಸಾಧ್ಯವಿದ್ದರೆ SIR ಏಕೆ? ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

Date:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೈಬಿಡಲಾದ ಮತದಾರರು ಮತ್ತೆ ಹೆಸರು ನೋಂದಾಯಿಸಿಕೊಳ್ಳಲು ಫಾರ್ಮ್‌-6 ಸಲ್ಲಿಸಿದರೆ ಸಾಕು ಎಂದಾದರೆ, SIR ಏಕೆ ಬೇಕು? ಪಶ್ಚಿಮ ಬಂಗಾಳದ SIR ಪ್ರಕರಣದ ವಿಚಾರಣೆ ವೇಳೆ ಈ ಮಾಹಿತಿಯನ್ನು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಏಕೆ ತಿಳಿಸಲಿಲ್ಲ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಪ್ರಶ್ನಿಸಿದ್ದಾರೆ.

- Advertisement -

SIR ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವ ಕ್ರಮ ಹಾಗೂ ಮರುನೋಂದಣಿಗೆ ತಗಲುವ ವೆಚ್ಚದ ಕುರಿತು ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಶ್ನೆಗಳನ್ನು ಎತ್ತಿದ್ದಾರೆ. ಮತದಾರರ ಪಟ್ಟಿಯಿಂದ ಹೊರಗುಳಿದವರು ಫಾರ್ಮ್‌-6 ಸಲ್ಲಿಸುವ ಮೂಲಕ ಮತ್ತೆ ಹೆಸರು ಸೇರಿಸಿಕೊಳ್ಳಬಹುದಾದರೆ, ಪಶ್ಚಿಮ ಬಂಗಾಳದಲ್ಲಿ ಲಕ್ಷಾಂತರ ಮತದಾರರು ಸಲ್ಲಿಸಿದ್ದ ಮೇಲ್ಮನವಿಗಳು, ನ್ಯಾಯಾಧಿಕರಣಗಳ ರಚನೆ ಹಾಗೂ ವಿಚಾರಣೆಗೆ ವ್ಯಯಿಸಿದ ಸಮಯ ಮತ್ತು ಹಣದ ಅಗತ್ಯವೇನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪಶ್ಚಿಮ ಬಂಗಾಳದಲ್ಲಿ ಸೂಕ್ತ ಪ್ರಕ್ರಿಯೆ ಅನುಸರಿಸದೆ ಲಕ್ಷಾಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳ ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ ನ್ಯಾಯಾಧಿಕರಣಗಳನ್ನು ರಚಿಸಲು ಆದೇಶಿಸಿತ್ತು. ಇದಾದ ಬಳಿಕ ಲಕ್ಷಾಂತರ ಮೇಲ್ಮನವಿಗಳು ಸಲ್ಲಿಕೆಯಾಗಿದ್ದವು. ನ್ಯಾಯಾಧೀಶರು ಆರು ತಿಂಗಳ ಕಾಲ ವಿಚಾರಣೆ ನಡೆಸಿದ್ದರು ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಧಿಕರಣಗಳು ಸುಮಾರು 1.26 ಲಕ್ಷ ಮೇಲ್ಮನವಿಗಳನ್ನು ವಿಲೇವಾರಿ ಮಾಡಿದ್ದು, ಅವುಗಳಲ್ಲಿ ಶೇ.91ರಿಂದ 93ರಷ್ಟು ಮೇಲ್ಮನವಿಗಳಿಗೆ ಪುರಸ್ಕಾರ ದೊರೆತಿದೆ. ಇದರ ಪರಿಣಾಮವಾಗಿ ಹಲವು ಮತದಾರರ ಹೆಸರುಗಳನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.

Advertisements

“ಫಾರ್ಮ್‌-6 ಸಲ್ಲಿಸುವ ಮೂಲಕವೇ ಮರುನೋಂದಣಿ ಸಾಧ್ಯವಿದ್ದರೆ, ಪಶ್ಚಿಮ ಬಂಗಾಳದಲ್ಲಿ ನಡೆಸಿದ ಈ ಸಂಪೂರ್ಣ ಪ್ರಕ್ರಿಯೆಯು ಸಮಯ ಮತ್ತು ಹಣದ ವ್ಯರ್ಥವಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿಯಿಂದ 13.30 ಕೋಟಿ ಹೆಸರುಗಳನ್ನು ಕೈಬಿಡಲು ಈಗಾಗಲೇ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗಿದೆ. ಇದೀಗ ಪಟ್ಟಿಯಿಂದ ಹೊರಗುಳಿದ ಮತದಾರರನ್ನು ಮರುನೋಂದಣಿ ಮಾಡಲು ಮತ್ತಷ್ಟು ಕೋಟ್ಯಂತರ ರೂಪಾಯಿ ಖರ್ಚಾಗುವ ಸಾಧ್ಯತೆಯಿದೆ. ಇದಕ್ಕೆ ಹೊಣೆ ಯಾರು? ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸಲ್ಲಿಕೆಯಾದ ಸುಮಾರು 38 ಲಕ್ಷ ಮೇಲ್ಮನವಿಗಳ ಪೈಕಿ ಸೆಪ್ಟೆಂಬರ್ ಮಧ್ಯಭಾಗದವರೆಗೆ ಸುಮಾರು 1.26 ಲಕ್ಷ ಪ್ರಕರಣಗಳನ್ನಷ್ಟೇ ವಿಲೇವಾರಿ ಮಾಡಲಾಗಿತ್ತು. ವಿಲೇವಾರಿಯಾದ ಪ್ರಕರಣಗಳಲ್ಲಿ ಸುಮಾರು ಶೇ.93ರಷ್ಟು ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸಲು ನ್ಯಾಯಾಧಿಕರಣಗಳು ಅನುಮತಿ ನೀಡಿದ್ದವು ಎಂದು ಚುನಾವಣಾ ಆಯೋಗದ ಅಂಕಿಅಂಶಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಈ ಪ್ರಮಾಣವು ವಿಲೇವಾರಿಯಾದ ಪ್ರಕರಣಗಳಿಗೆ ಮಾತ್ರ ಅನ್ವಯಿಸುತ್ತದೆ. ಒಟ್ಟು ಮೇಲ್ಮನವಿಗಳಿಗೆ ಅಲ್ಲ. ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಕೈಬಿಡುವ ವಿಧಾನ, ಮೇಲ್ಮನವಿ ಸಲ್ಲಿಸುವ ಅವಕಾಶ, ಮರುನೋಂದಣಿಯ ಪ್ರಕ್ರಿಯೆ ಹಾಗೂ ಅದಕ್ಕೆ ತಗಲುವ ವೆಚ್ಚದ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಚಿದಂಬರಂ ಎತ್ತಿರುವ ಪ್ರಶ್ನೆಗಳು ಚುನಾವಣಾ ಆಯೋಗದ ಕಾರ್ಯವಿಧಾನ ಮತ್ತು ಮತದಾರರ ಹಕ್ಕುಗಳ ಕುರಿತ ಚರ್ಚೆಯನ್ನು ಮತ್ತಷ್ಟು ಮುನ್ನೆಲೆಗೆ ತಂದಿವೆ.

ಇದನ್ನೂ ಓದಿ: ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

ಚಿದಂಬರಂ ಅವರ ಹೇಳಿಕೆಗೂ ಮುನ್ನ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡ ಚುನಾವಣಾ ಆಯೋಗದ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ಗಾಂಧಿ ಜಯಂತಿಯಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಅವರು, ಮತಗಳ್ಳತನದ ವಿರುದ್ಧ ಸಾವಿರಾರು ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ ಹಾಗೂ ನೂರಾರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಮಹಾತ್ಮ ಗಾಂಧಿ, ಸತ್ಯವನ್ನು ಮಾತನಾಡುವುದು ಮತ್ತು ಶಾಂತಿಯುತವಾಗಿ ಹೋರಾಡುವುದು ಪ್ರಜಾಪ್ರಭುತ್ವದ ಹಕ್ಕು ಎಂದು ಹೇಳಿದ್ದರು. ಹಾಗೆ ಪ್ರತಿಭಟನೆ ಮಾಡಲು ಮುಂದಾದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದೂ ಅವರು ಆಗ್ರಹಿಸಿದ್ದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಕಾಪಾಡುವಂತೆ ಆಗ್ರಹಿಸಿ ಪ್ರತಿಪಕ್ಷಗಳು, ವಿದ್ಯಾರ್ಥಿ ಸಂಘಟನೆಗಳು ಮತ್ತು ನಾಗರಿಕ ಸಮಾಜದ ಸದಸ್ಯರು ದೆಹಲಿ ಹಾಗೂ ಮುಂಬೈನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ 500ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿಯೂ ಪ್ರತಿಭಟನೆ ನಡೆದಿತ್ತು. ದೆಹಲಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್ ಸೇರಿದಂತೆ ಹಲವು ಪ್ರತಿಪಕ್ಷ ನಾಯಕರನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಸೆಕ್ಷನ್ 163ರ ಅಡಿಯಲ್ಲಿ ವಶಕ್ಕೆ ಪಡೆಯಲಾಗಿತ್ತು. ಈ ಹೋರಾಟವನ್ನು ಮುಂದುವರಿಸಲು ಇಂಡಿಯಾ ಮೈತ್ರಿಕೂಟ ಯೋಜನೆ ರೂಪಿಸಿದ್ದು, ಅಕ್ಟೋಬರ್ 6ರಂದು ಕಾರ್ಯಕ್ರಮ ಹಾಗೂ ನವೆಂಬರ್ 1ರಂದು ದೆಹಲಿಯಲ್ಲಿ ಬೃಹತ್ ರ‍್ಯಾಲಿ ನಡೆಸಲು ಉದ್ದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇರಳ ಸರ್ಕಾರದಲ್ಲಿ ಭಿನ್ನಮತ ಸ್ಫೋಟ; ಮುಖ್ಯಮಂತ್ರಿ ವಿರುದ್ಧವೇ ತಿರುಗಿಬಿದ್ದ ಯುಡಿಎಫ್ ಸಂಚಾಲಕ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಸಾಮಾನ್ಯರಿಗೆ ಮತ್ತೆ ‘ಇಎಂಐ’ ಬರೆ: ರೆಪೊ ದರ ಶೇ. 0.25ರಷ್ಟು ಹೆಚ್ಚಳಕ್ಕೆ ಆರ್‌ಬಿಐ ಒಲವು

ದೇಶದಲ್ಲಿ ಏರಿಕೆಯಾಗುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...