ನ್ಯಾಯಯುತ ವಿಚಾರಣೆ ಭರವಸೆ ಸಿಕ್ಕರೆ ಭಾರತಕ್ಕೆ ವಾಪಸ್‌: ವಿಜಯ್‌ ಮಲ್ಯ

Date:

ಭಾರತದ ವಿವಿಧ ಬ್ಯಾಂಕ್‌ಗಳಿಗೆ ಬಹುಕೋಟಿ ವಂಚನೆ ಮಾಡಿರುವ ಆರೋಪಗಳನ್ನು ಎದುರಿಸುತ್ತಿರುವ ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಮಾಜಿ ಮುಖ್ಯಸ್ಥ ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ವಾಪಾಸ್ಸಾಗುವ ಕುರಿತು ತನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

- Advertisement -

ಪಾಡ್‌ಕಾಸ್ಟರ್‌ ರಾಜ್ ಶಮಾನಿ ಅವರೊಂದಿಗೆ ನಡೆದ ಸಂಭಾಷಣೆಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ನ್ಯಾಯಯುತ ವಿಚಾರಣೆ ಮತ್ತು ಗೌರವಾನ್ವಿತ ಅಸ್ತಿತ್ವದ ಭರವಸೆ ನನಗೆ ಇದ್ದರೆ ವಾಪಸ್‌ ಆಗುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಭಾರತಕ್ಕೆ ಹಿಂತಿರುಗದ ಕಾರಣ ಸಮಸ್ಯೆಗಳು ಮತ್ತಷ್ಟು ಬಿಗಡಾಯಿಸುತ್ತಿದೆಯೇ ಎಂದು ಪಾಡ್‌ಕಾಸ್ಟರ್‌ ರಾಜ್ ಶಮಾನಿ ಕೇಳಿದಾಗ, ಭಾರತದಲ್ಲಿ ನ್ಯಾಯಯುತ ವಿಚಾರಣೆ ಮತ್ತು ಗೌರವಾನ್ವಿತ ಅಸ್ತಿತ್ವದ ಭರವಸೆ ನನಗೆ ಇದ್ದರೆ, ನೀವು ಹೇಳಿದ್ದು ಸರಿ ಇರಬಹುದು, ಆದರೆ ನಾನು ಆ ರೀತಿ ಹೇಳುವುದಿಲ್ಲ ಎಂದು ವಿಜಯ್ ಮಲ್ಯ ಪ್ರತಿಕ್ರಿಯಿಸಿದರು.

ನ್ಯಾಯಯುತ ವಿಚಾರಣೆಯ ಭರವಸೆ ಸಿಕ್ಕರೆ ಭಾರತಕ್ಕೆ ಮರಳಲು ಸಿದ್ಧರಿದ್ದೀರಾ ಎಂದು ಕೇಳಿದಾಗ, ʼನನಗೆ ಭರವಸೆ ಸಿಕ್ಕರೆ, ನಾನು ಅದರ ಬಗ್ಗೆ ಗಂಭೀರವಾಗಿ ಯೋಚಿಸುತ್ತೇನೆʼ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಾರ್ಚ್ 1, 2027 ರಿಂದ ಕೇಂದ್ರದಿಂದ ಜಾತಿ, ಜನ ಗಣತಿ; ಕೆಲ ರಾಜ್ಯಗಳಲ್ಲಿ ಮುಂದಿನ ವರ್ಷದಿಂದ ಪ್ರಾರಂಭ

ಗಡೀಪಾರು ಪ್ರಕರಣದಲ್ಲಿ ಯುಕೆ ಹೈಕೋರ್ಟ್ ತೀರ್ಪನ್ನು ಅವರು ಉಲ್ಲೇಖಿಸಿದರು. ಕೆಲವರನ್ನು ಇಂಗ್ಲೆಂಡ್‌ನಿಂದ ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಕೇಳಿಕೊಂಡಿದೆ. ಭಾರತೀಯ ಬಂಧನದ ಷರತ್ತುಗಳು ಇಸಿಎಚ್‌ಆರ್‌ ಆರ್ಟಿಕಲ್ 3 ಅನ್ನು ಉಲ್ಲಂಘಿಸುತ್ತದೆ ಎಂದು ಕಂಡುಬಂದಿದೆ ಎಂದು ಹೇಳಿದರು.

ಭಾರತದಿಂದ ತೆರಳಿದ್ದಕ್ಕೆ ʼಪರಾರಿʼ ಎಂದು ಕರೆದಿರುವುದು ನ್ಯಾಯಯುತವಾದರೂ, ಕಳ್ಳ ಎಂದು ಏಕೆ ಕರೆಯುತ್ತಾರೆ ಮತ್ತು ಕಳ್ಳತನ ಮಾಡಿದ್ದೇನು ಎಂದು ಮಲ್ಯ ಪ್ರಶ್ನಿಸಿದರು.

2016ರ ಮಾರ್ಚ್ ನಂತರ ಭಾರತಕ್ಕೆ ವಾಪಾಸ್ಸಾಗಿಲ್ಲ ಎಂದು ನನ್ನನ್ನು ಪರಾರಿಯಾಗಿದ್ದಾನೆ ಎಂದು ಕರೆಯಿರಿ. ನಾನು ಓಡಿಹೋಗಲಿಲ್ಲ, ಪೂರ್ವನಿಗದಿತ ಭೇಟಿಗಾಗಿ ಭಾರತದಿಂದ ಬಂದಿದ್ದೆ. ಮಾನ್ಯವೆಂದು ಪರಿಗಣಿಸುವ ಕಾರಣಗಳಿಗಾಗಿ ನಾನು ಹಿಂತಿರುಗಲಿಲ್ಲ, ಆದ್ದರಿಂದ ನೀವು ನನ್ನನ್ನು ಪರಾರಿಯಾಗಿದ್ದಾನೆ ಎಂದು ಕರೆಯಲು ಬಯಸಿದರೆ, ಅದರಂತೆ ಮುಂದುವರಿಯಿರಿ, ಆದರೆ ಕಳ್ಳ ಎಂದು ಏಕೆ ಕರೆಯುತ್ತಾರೆ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...