ನೂತನ ಸಂಸತ್ ಭವನ, ಪ್ರಧಾನಿ ನಿವಾಸ ಕಟ್ಟಿದಂತೆ, ಹಳ್ಳಿ ಶಾಲೆಗಳನ್ನೇಕೆ ಕಟ್ಟಬಾರದು: ಅಭಿಜೀತ್ ದೀಪ್ಕೆ ಪ್ರಶ್ನೆ

Date:

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ‘ಕಾಕ್‌ರೋಚ್‌ ಜನತಾ ಪಾರ್ಟಿ’ (CJP- ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ದೇಶವ್ಯಾಪಿ ಅಭಿಯಾನವನ್ನು ಘೋಷಿಸಿದ್ದಾರೆ. ಮಕ್ಕಳ ಶೈಕ್ಷಣಿಕ ಸೌಲಭ್ಯಗಳನ್ನು ಹೆಚ್ಚಿಸುವ ಸಾಮಾಜಿಕ ಮತ್ತು ನೈತಿಕ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಮುಖಂಡರು ಹಾಗೂ ಪೋಷಕರು ವಹಿಸಿಕೊಳ್ಳಬೇಕೆಂದು ಅವರು ಕರೆ ನೀಡಿದ್ದಾರೆ.

- Advertisement -

​ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ಅವರು, ಸರ್ಕಾರಿ ಶಾಲೆಗಳ ದುಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. “ದೇಶದಲ್ಲಿ ನೂತನ ಸಂಸತ್ ಭವನ ಹಾಗೂ ಪ್ರಧಾನಿ ನಿವಾಸವನ್ನು ನಿರ್ಮಿಸಲು ಸಾಧ್ಯವಾಗುವುದಾದರೆ, ಹಳ್ಳಿಗಳಲ್ಲಿ ಹೊಸ ಶಾಲೆಗಳನ್ನು ಏಕೆ ಕಟ್ಟಬಾರದು? ರೈತರು ಮತ್ತು ಕಾರ್ಮಿಕರ ಮಕ್ಕಳನ್ನು ನಾವು ದೇಶದ ಭವಿಷ್ಯ ಎಂದು ಪರಿಗಣಿಸುವುದಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

​ಕಳೆದ 80 ವರ್ಷಗಳಿಂದ ಗ್ರಾಮೀಣ ಶಾಲೆಗಳನ್ನು ನಿರ್ಲಕ್ಷಿಸಲಾಗಿದೆ. ಇಂದಿಗೂ ಮಕ್ಕಳು ಕುಡಿಯುವ ನೀರು, ಶೌಚಾಲಯ ಮುಂತಾದ ಕನಿಷ್ಠ ಸೌಲಭ್ಯಗಳಿಲ್ಲದೆ ಶಾಲೆಗೆ ಮೈಲುಗಟ್ಟಲೆ ನಡೆದುಕೊಂಡು ಹೋಗಬೇಕಾದ ದುಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದರ ಬದಲಾವಣೆಗಾಗಿ ಮಹಾರಾಷ್ಟ್ರದ ಮರಾಠವಾಡ ಭಾಗದ ತಮ್ಮ ಸ್ವಗ್ರಾಮ ಹಿಂಗೋಲಿಗೆ ಭೇಟಿ ನೀಡಿ, ಅಲ್ಲಿನ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಗ್ರಾಮದ ಸರಪಂಚರಿಗೆ (ಗ್ರಾಮ ಪಂಚಾಯಿತಿ ಅಧ್ಯಕ್ಷರು) ಮನವಿ ಮಾಡುವುದಾಗಿ ದೀಪ್ಕೆ ತಿಳಿಸಿದ್ದಾರೆ.

​ತಮ್ಮ ಈ ಹೆಜ್ಜೆಯು ಇತರರಿಗೂ ಪ್ರೇರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಅವರು, ದೇಶದ ಎಲ್ಲ ಗ್ರಾಮ ಪಂಚಾಯಿತಿಗಳ ಮುಖ್ಯಸ್ಥರು ತಮ್ಮ ಹಳ್ಳಿಗಳ ಸರ್ಕಾರಿ ಶಾಲೆಗಳ ಸುಧಾರಣೆಗೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ. ಶಾಲೆಗಳ ಅಭಿವೃದ್ಧಿಗೆ ಶ್ರಮಿಸುವವರ ಕಾರ್ಯವನ್ನು ಸಿಜೆಪಿ ಸಾಮಾಜಿಕ ಜಾಲತಾಣಗಳ ಮೂಲಕ ದೇಶದ ಗಮನಕ್ಕೆ ತರಲಿದೆ ಎಂದು ಭರವಸೆ ನೀಡಿದ್ದಾರೆ.

​ಪೋಷಕರು ತಮ್ಮ ಮಕ್ಕಳ ಶಾಲೆಗಳಲ್ಲಿ ವಿದ್ಯುತ್, ನೀರು, ಶೌಚಾಲಯ ಮತ್ತು ಬಿಸಿಯೂಟದಂತಹ ಮೂಲಸೌಕರ್ಯಗಳು ಇವೆಯೇ ಎಂಬುದನ್ನು ಖುದ್ದಾಗಿ ಪರಿಶೀಲಿಸುವ ಮೂಲಕ ‘ಸಾಮಾಜಿಕ ಲೆಕ್ಕಪರಿಶೋಧನೆ’ (ಸೋಷಿಯಲ್ ಆಡಿಟ್) ನಡೆಸಬೇಕು. ಸೌಲಭ್ಯಗಳಿಲ್ಲದಿದ್ದರೆ ವಿಡಿಯೊ ಮಾಡಿ ಹಂಚಿಕೊಳ್ಳಬೇಕು. ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯ ಪಡೆಯುವುದು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕು ಎಂದು ಅವರು ಪ್ರತಿಪಾದಿಸಿದ್ದಾರೆ.

​ಶಾಲೆಗಳ ಮೂಲಸೌಕರ್ಯಗಳ ಮಾಹಿತಿಯನ್ನು ಹಂಚಿಕೊಳ್ಳಲು ಪೋಷಕರಿಗಾಗಿ ಸಿಜೆಪಿ ಶೀಘ್ರದಲ್ಲೇ ಒಂದು ನಮೂನೆಯನ್ನು ಬಿಡುಗಡೆ ಮಾಡಲಿದ್ದು, ಅದನ್ನು ಭರ್ತಿ ಮಾಡಿ ಇಮೇಲ್ ಮೂಲಕ ಕಳುಹಿಸುವಂತೆ ಸೂಚಿಸಿದ್ದಾರೆ. ಇತ್ತೀಚೆಗಷ್ಟೇ ‘ನೀಟ್’ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯನ್ನು ಮುನ್ನಡೆಸಿ ಗಮನ ಸೆಳೆದಿದ್ದ ದೀಪ್ಕೆ, ಇದೀಗ ‘ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನದಡಿ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ ‘ಮಹಾಭಿಯೋಗ’ ನಡೆದಿದೆಯೇ?

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ...

‘ವೀರಮಣಿ ಅತ್ಯಾಚಾರ ಪ್ರಕರಣ ಮುಚ್ಚುವುದರ ಹಿಂದೆ ಯಾವ ಒಪ್ಪಂದವಿತ್ತು’?; ಡಿಎಂಕೆ ವಿರುದ್ಧ ಸಿಎಂ ವಿಜಯ್‌ ವಾಗ್ದಾಳಿ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ತಮಿಳುನಾಡಿನ ಆರ್‌....

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...