ಮೀನು ತಿಂದರೆ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಆಗುತ್ತದೆ: ಮಹಾರಾಷ್ಟ್ರ ಬಿಜೆಪಿ ಮಂತ್ರಿಯ ವಿವಾದಾತ್ಮಕ ಹೇಳಿಕೆ

Date:

ದಿನವೂ ಮೀನು ತಿನ್ನುವುದರಿಂದ ನಿಮ್ಮ ಕಣ್ಣು ಐಶ್ವರ್ಯ ರೈ ತರಹ ಹೊಳೆಯುತ್ತದೆ ಎಂದು ಮಹಾರಾಷ್ಟ್ರದ ಬುಡಕಟ್ಟು ಸಚಿವ ವಿಜಯ್‌ಕುಮಾರ್ ಗವಿತ್ ಹೇಳಿಕೆ ನೀಡಿದ್ದಾರೆ.  

- Advertisement -

ಉತ್ತರ ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ರಾಜ್ಯ ಬುಡಕಟ್ಟು ಸಚಿವ ವಿಜಯಕುಮಾರ್ ಗವಿತ್ ನೀಡಿದ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

‘ಪ್ರತಿದಿನ ಮೀನು ಸೇವಿಸುವ ಜನರ ಚರ್ಮವು ನಯವಾಗುತ್ತದೆ ಮತ್ತು ಅವರ ಕಣ್ಣುಗಳು ಹೊಳೆಯುತ್ತವೆ. ಯಾರಾದರೂ ನಿಮ್ಮನ್ನು ನೋಡಿದರೆ, ಆ ವ್ಯಕ್ತಿಯು ನಿಮ್ಮತ್ತ ಆಕರ್ಷಿತನಾಗುತ್ತಾನೆ. ಐಶ್ವರ್ಯಾ ರೈ ಬಗ್ಗೆ ನಾನು ನಿಮಗೆ ಹೇಳಿದ್ದೆನಾ? ಅವರು ಮಂಗಳೂರಿನ ಸಮುದ್ರ ತೀರದ ಬಳಿ ವಾಸಿಸುತ್ತಿದ್ದರು. ಅವರು ಪ್ರತಿ ದಿನ ಮೀನು ತಿನ್ನುತ್ತಿದ್ದರು. ನೀವು ಅವರ ಕಣ್ಣು ನೋಡಿದ್ದೀರಾ. ನಿಮ್ಮ ಕಣ್ಣು ಕೂಡ ಅದೇ ಥರ ಆಗುತ್ತದೆ’ ಎಂದು ಸಚಿವರು ಬಾಯಿ ಹರಿಬಿಟ್ಟಿದ್ದಾರೆ.

‘ಮೀನಿನಲ್ಲಿ ಕೆಲವು ಎಣ್ಣೆಗಳಿವೆ, ಅದು ನಿಮ್ಮ ಚರ್ಮವನ್ನು ನಯವಾಗಿಸುತ್ತದೆ’ ಎಂದು 68 ವರ್ಷದ ಸಚಿವ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

ಅವರ ಹೇಳಿಕೆಯು ವಿವಾದಕ್ಕೆ ಈಡಾಗಿದ್ದು, ಹಲವರ ಟೀಕೆಗೆ ಗುರಿಯಾಗುತ್ತಿದೆ.

ಎನ್‌ಸಿಪಿ ಶಾಸಕ ಅಮೋಲ್ ಮಿತ್ಕರಿ ಮಾತನಾಡಿ, ‘ಸಚಿವರು ಇಂಥ ಕ್ಷುಲ್ಲಕ ವಿಚಾರಗಳನ್ನು ಬಿಟ್ಟು ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಬೇಕು’ ಎಂದಿದ್ದಾರೆ. ಬಿಜೆಪಿಯ ಶಾಸಕರಾದ ನಿತೇಶ್ ರಾಣೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ನಾನು ದಿನವೂ ಮೀನು ತಿನ್ನುತ್ತೇನೆ. ನನ್ನ ಕಣ್ಣುಗಳು ಐಶ್ವರ್ಯ ರೈ ಥರ ಆಗಬೇಕಿತ್ತಲ್ಲಾ. ಇದರ ಬಗ್ಗೆ ಏನಾದರೂ ಸಂಶೋಧನೆ ನಡೆದಿದೆಯೇ ಎಂದು ಗವಿತ್ ಸಾಹೇಬರನ್ನು ಕೇಳುತ್ತೇನೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ವಿಜಯ್‌ಕುಮಾರ್ ಗವಿತ್ ಅವರ ಮಗಳು ಹೀನಾ ಗವಿತ್ ಬಿಜೆಪಿಯ ಲೋಕಸಭಾ ಸದಸ್ಯರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...