ಭಾರತದಲ್ಲಿ ಬದುಕಬೇಕಾದರೆ ಭಾರತ್ ಮಾತಾ ಕಿ ಜೈ ಎಂದು ಹೇಳಬೇಕು: ಕೇಂದ್ರ ಸಚಿವ ಕೈಲಾಶ್ ಚೌಧರಿ

0
176
ಕೈಲಾಶ್ ಚೌಧರಿ
Kailash Choudhary

ಭಾರತದಲ್ಲಿ ವಾಸಿಸಲು ಬಯಸುವವರು ‘ಭಾರತ್ ಮಾತಾ ಕಿ ಜೈ’ ಎಂದು ಹೇಳಬೇಕು ಎಂದು ಕೇಂದ್ರ ಸಚಿವ ಕೈಲಾಶ್ ಚೌಧರಿ ಶನಿವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹೈದರಾಬಾದಿನಲ್ಲಿ ಬಿಜೆಪಿ ಆಯೋಜಿಸಿದ್ದ ರೈತರ ಸಮಾವೇಶದಲ್ಲಿ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವ ಕೈಲಾಶ್ ಚೌಧರಿ ಮಾತನಾಡಿದರು. ತೆಲಂಗಾಣದ ಜನಪ್ರತಿನಿಧಿಗಳು ಬಳಸುತ್ತಿರುವ ಭಾಷೆಯ ಬಗ್ಗೆ ಉಲ್ಲೇಖಿಸಿದ ಅವರು, ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕು ಮತ್ತು ರಾಜ್ಯದಲ್ಲಿ ರಾಷ್ಟ್ರೀಯ ಚಿಂತನೆಯ ಸರ್ಕಾರ ರಚನೆಯಾಗಬೇಕು ಎಂದು ಹೇಳಿದರು.

‘ಭಾರತದಲ್ಲಿ ಯಾರು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುವುದಿಲ್ಲ ಎಂದು ಹೇಳುತ್ತಾರೋ ಅವರು ನರಕಕ್ಕೆ ಹೋಗುತ್ತಾರೆ. ನೀವು ಭಾರತದಲ್ಲಿ ವಾಸಿಸಬೇಕಾದರೆ ‘ಭಾರತ್ ಮಾತಾ ಕಿ ಜೈ’ ಎಂದು ಹೇಳಬೇಕು’ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಭಾರತದಲ್ಲಿ ವಾಸಿಸುತ್ತಿರುವ ನೀವು ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳುತ್ತೀರಾ’ ಎಂದು ಕೇಳಿದರು.  ”ಭಾರತ್ ಮಾತಾ ಕಿ ಜೈ’ ಎಂದು ಹೇಳುವವರಿಗೆ ಮಾತ್ರ ದೇಶದಲ್ಲಿ ಸ್ಥಾನವಿದೆ’ ಎಂದು ಕೈಲಾಶ್ ಚೌಧರಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಜಾಗತಿಕ ಹಸಿವು ಸೂಚ್ಯಂಕ | ಹಸಿದವರ ದೇಶವಾದ ಭಾರತ; ಪಾಕಿಸ್ತಾನಕ್ಕಿಂತ ಕೆಳಕ್ಕೆ ಕುಸಿತ

“ಈ ಉದ್ದೇಶಕ್ಕಾಗಿಯೇ ನಾನು ಹೇಳಲು ಬಯಸುತ್ತೇನೆ, ‘ಭಾರತ್ ಮಾತಾ ಕಿ ಜೈ’ ಎಂದು ಹೇಳದ ಮತ್ತು ಹಿಂದೂಸ್ತಾನ್ ಮತ್ತು ಭಾರತದಲ್ಲಿ ನಂಬಿಕೆಯಿಲ್ಲದ ಮತ್ತು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ನಂಬುವ ಯಾರಾದರೂ ಇದ್ದರೆ ಅವರು ಪಾಕಿಸ್ತಾನಕ್ಕೆ ಹೋಗಲಿ. ಇಲ್ಲಿ ಇರುವುದು ಅವಶ್ಯಕತೆ ಇಲ್ಲ. ಈ ದೇಶದಲ್ಲಿ ರಾಷ್ಟ್ರೀಯತೆಯ ಸಿದ್ಧಾಂತ ಹೊಂದುವುದು ಅಗತ್ಯ. ಸಾಮೂಹಿಕ ಪ್ರಯತ್ನದಿಂದ ದೇಶವನ್ನು ಬಲಪಡಿಸಬೇಕು” ಎಂದಿದ್ದಾರೆ.

ತೆಲಂಗಾಣ ರಾಜ್ಯದಲ್ಲಿ ನವೆಂಬರ್ 3ರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಬಿಜೆಪಿ ನಾಯಕರು ಪದೇ ಪದೇ ಪ್ರಚೋದನಾತ್ಮಕ ಭಾಷಣ ಮಾಡಿ ಜನರ ಮನಸ್ಸಿನಲ್ಲಿ ಕೋಮು ವಿಷಬೀಜವನ್ನು ಬಿತ್ತುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.

LEAVE A REPLY

Please enter your comment!
Please enter your name here