ಕಾಲೇಜು ಆವರಣದಲ್ಲಿ ಇಫ್ತಾರ್ ಕೂಟ; ಬಜರಂಗದಳ ದಾಂಧಲೆ

Date:

ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಇಫ್ತಾರ್‌ ಕೂಟದ ವೇಳೆ ಬಜರಂಗದಳದ ಕಾರ್ಯಕರ್ತರು ದಾಂಧಲೆ ನಡೆಸಿ, ಕೂಟಕ್ಕೆ ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ.

- Advertisement -

ಹರಿದ್ವಾರದಲ್ಲಿರುವ ರಿಷಿಕುಲ್ ಆಯುರ್ವೇದಿಕ್ ಕಾಲೇಜಿನ ಆವರಣದಲ್ಲಿ ಶುಕ್ರವಾರ ಸಂಜೆ ಮುಸ್ಲಿಂ ವಿದ್ಯಾರ್ಥಿಗಳಿಗಾಗಿ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಕೂಟಕ್ಕೆ ಹೊರಗಿನ ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗಿದೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಕಾಲೇಜಿಗೆ ನುಗ್ಗಿ, ದಾಂಧಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸ್ಥಳಕ್ಕೆ ಪೊಲೀಸರು ಬಂದಿದ್ದು, ಬಜರಂಗದಳದ ಕಾರ್ಯಕರ್ತರನ್ನು ಸ್ಥಳದಿಂದ ಕಳಿಸಿದ್ದಾರೆ. ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಆದಾಗ್ಯೂ, ಇಫ್ತಾರ್ ಕೂಟ ಏರ್ಪಡಿಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮವನ್ನು ಕೈಗೊಳ್ಳಬೇಕೆಂದು ಬಜರಂಗದಳದ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರು ಕಾಲೇಜಿನ ನಿರ್ದೇಶಕ ಡಿಸಿ ಸಿಂಗ್, “ಅನುಮತಿ ಪಡೆಯದೆ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಇಫ್ತಾರ್ ಆಯೋಜಿಸಿರುವ ಬಗ್ಗೆ ದೂರು ಬಂದಿದೆ” ಎಂದು ಹೇಳಿದ್ದಾರೆ.

ಶಾಲಾ-ಕಾಲೇಜುಗಳು ಧರ್ಮಾತೀಯವಾಗಿ ಕಾರ್ಯನಿರ್ವಹಿಸಬೇಕು. ಆದಾಗ್ಯೂ, ಶಾಲಾ-ಕಾಲೇಜುಗಳಲ್ಲಿ ಸರಸ್ವತಿ ಪೂಜೆ ಸೇರಿದಂತೆ ಕೆಲವು ಹಿಂದು ಧಾರ್ಮಿಕ ಕಾರ್ಯಕ್ರಮಗಳು ಮತ್ತು ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬುದು ಗಮನಾರ್ಹ. ಅಂತೆಯೇ ಇಫ್ತಾರ್ ಮತ್ತು ಕ್ರಿಸ್‌ಮಸ್‌ ಆಚರಣೆ ನಡೆಸುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದನ್ನು ಅರಿತುಕೊಳ್ಳುವುದು ಅತ್ಯಗತ್ಯ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...