IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ಆತ್ಮಹತ್ಯೆ ಪ್ರಕರಣ | ಪೋಷಕರ ಬೆಂಬಲಕ್ಕೆ ನಿಂತ ರಾಹುಲ್‌ ಗಾಂಧಿ

Date:

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ವಕೋಡೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಾಹಿಲ್‌ ಪೋಷಕರೊಂದಿಗೆ ಗುರುವಾರ ದೂರವಾಣಿ ಮೂಲಕ ಮಾತುಕತೆ ನಡೆಸಿ, ನ್ಯಾಯಕ್ಕಾಗಿ ಅವರ ಹೋರಾಟಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

- Advertisement -

ವಾಶಿಮ್‌ ಜಿಲ್ಲೆಯಿಂದ ಮುಂಬೈಗೆ ತೆರಳುತ್ತಿದ್ದ ಸಾಹಿಲ್‌ ಅವರ ತಂದೆ ರವೀಂದ್ರ ವಕೋಡೆ ಹಾಗೂ ತಾಯಿ ಸೋನಾಲಿ ವಕೋಡೆ ಅವರೊಂದಿಗೆ ರಾಹುಲ್‌ ಗಾಂಧಿ ಸುಮಾರು 17 ನಿಮಿಷಗಳ ಕಾಲ ವಿಡಿಯೊ ಕರೆ ಮೂಲಕ ಮಾತನಾಡಿದ್ದಾರೆ. ಈ ವೇಳೆ ಭಾರತೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಉದಯ್‌ ಭಾನು ಚಿಬ್‌ ಹಾಗೂ ಮಹಾರಾಷ್ಟ್ರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಶಿವರಾಜ್‌ ಮೋರೆ ಕೂಡ ಪೋಷಕರ ಜತೆಗಿದ್ದರು ಎಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಏನಿದು ಪ್ರಕರಣ?

ಸಾಹಿಲ್‌ ವಕೋಡೆ IIT ಬಾಂಬೆಯಲ್ಲಿ 2ನೇ ವರ್ಷದ ವಿದ್ಯಾರ್ಥಿಯಾಗಿದ್ದರು. ಸೆಪ್ಟೆಂಬರ್‌ 18ರಂದು ಮಿಡ್‌ಸೆಮಿಸ್ಟರ್‌ ಪರೀಕ್ಷೆ ನಡೆಯುತ್ತಿದ್ದ ವೇಳೆ ಮೊಬೈಲ್‌ನಲ್ಲಿ ChatGpt ಬಳಸುತ್ತಿದ್ದರೆಂಬ ಆರೋಪ ಕೇಳಿಬಂದಿತ್ತು. ಬಳಿಕ ಕೆಲವೇ ಗಂಟೆಗಳಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.

ಸಾಹಿಲ್‌ ಅವರ ಪೋಷಕರು ಮಗನ ಸಾವಿಗೆ ಕ್ಯಾಂಪಸ್‌ನಲ್ಲಿ ನಡೆದ ಜಾತಿ ಆಧಾರಿತ ತಾರತಮ್ಯ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಸಾಹಿಲ್‌ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಪರೀಕ್ಷಾ ಕೊಠಡಿಯಲ್ಲಿ ಮೇಲ್ವಿಚಾರಕರಾಗಿದ್ದ ಪ್ರೊಫೆಸರ್‌ ಸೂರ್ಯನಾರಾಯಣ ದೂಲಾ ಅವರ ಹೆಸರನ್ನೂ FIRನಲ್ಲಿ ಉಲ್ಲೇಖಿಸಲಾಗಿದೆ.

ಮಗನ ಸಾವಿನ ಪ್ರಕರಣದಲ್ಲಿ ಯಾರನ್ನೂ ಬಂಧಿಸದಿರುವುದನ್ನು ಪ್ರಶ್ನಿಸಿರುವ ಸಾಹಿಲ್‌ ಪೋಷಕರು, ಗುರುವಾರ ಬೆಳಗ್ಗೆ 11 ಗಂಟೆಯಿಂದ IIT ಬಾಂಬೆ ಮುಖ್ಯ ಗೇಟ್‌ ಮುಂದೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದಾರೆ.

ಈ ನಡುವೆ ಸಾಹಿಲ್‌ ಸಾವಿನ ಪ್ರಕರಣವನ್ನು ಮುಂಬೈ ಪೊಲೀಸ್‌ ಅಪರಾಧ ವಿಭಾಗ ತನಿಖೆ ನಡೆಸುತ್ತಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಪ್ರೊಫೆಸರ್‌ ಸೂರ್ಯನಾರಾಯಣ ದೂಲಾ ಅವರನ್ನು ಕರ್ತವ್ಯದಿಂದ ರಜೆ ಮೇಲೆ ಕಳುಹಿಸಲಾಗಿದೆ.

ಮಗನ ಸಾವಿನ ಪ್ರಕರಣದಲ್ಲಿ ಆರೋಪಿಗಳ ಬಂಧನವಾಗದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಹಿಲ್‌ ತಂದೆ ಘೋಷಿಸಿದ ಬೆನ್ನಲ್ಲೇ, ಪೋಷಕರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಮುಂಬೈನಿಂದ ಹೊರಗೆ ಕರೆದೊಯ್ಯಲು ಪೊಲೀಸರು ಯತ್ನಿಸಿದ್ದಾರೆ ಎಂದು ಕುಟುಂಬದ ವಕೀಲ ನಿಖಿಲ್‌ ಕಾಂಬ್ಳೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ರವೀಂದ್ರ ಹಾಗೂ ಸೋನಾಲಿ ವಕೋಡೆ ಅವರು ಮುಂಬೈನಲ್ಲೇ ಉಳಿಯಲು ನಿರ್ಧರಿಸಿದ್ದರು. ಆದರೆ ಬುಧವಾರ ಬೆಳಗ್ಗೆ ಅವರನ್ನು ಖಾಸಗಿ ವಾಹನದಲ್ಲಿ ಕರೆದೊಯ್ಯಲಾಗಿದೆ ಎಂದು ವಕೀಲರು ಹೇಳಿದ್ದಾರೆ. ಆದರೆ ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ. ಪೋಷಕರೇ ಯವತ್ಮಾಳ್‌ಗೆ ಕರೆದೊಯ್ಯುವಂತೆ ಮನವಿ ಮಾಡಿದ್ದರು, ಹೀಗಾಗಿ ಅದಕ್ಕೆ ವ್ಯವಸ್ಥೆ ಮಾಡಲಾಗಿತ್ತು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. ಸಾಹಿಲ್‌ ತಂದೆ ಉಪವಾಸ ಸತ್ಯಾಗ್ರಹದ ಬೆದರಿಕೆ ನೀಡಿದ್ದರಿಂದ ಅವರನ್ನು ಮುಂಬೈನಿಂದ ಹೊರಗೆ ಕರೆದೊಯ್ಯಲಾಗಿದೆ ಎಂಬ ಆರೋಪವನ್ನೂ ಪೊಲೀಸರು ತಳ್ಳಿಹಾಕಿದ್ದಾರೆ. ಸಾಹಿಲ್‌ ಅವರ ಸಾವಿನ ಕುರಿತು ತನಿಖೆ ಮುಂದುವರಿದಿದ್ದು, ಮಗನ ಸಾವಿಗೆ ನ್ಯಾಯ ದೊರೆಯಬೇಕು ಎಂದು ಪೋಷಕರು ಹೋರಾಟ ಮುಂದುವರಿಸಿದ್ದಾರೆ. ರಾಹುಲ್‌ ಗಾಂಧಿ ಬೆಂಬಲಕ್ಕೆ ನಿಂತಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5 4
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

800 ಉರ್ದು, 200 ಮರಾಠಿ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಸಭಾಪತಿ ಸಲೀಂ ಅಹ್ಮದ್‌ಗೆ ಮನವಿ

ಸರ್ಕಾರವು 800 ಉರ್ದು ಮತ್ತು 200 ಮರಾಠಿ ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು...

ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ; ಸಚಿವೆಯ ಪುತ್ರಿ ಸೇರಿ ನಾಲ್ವರ ಸಾವು

ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ...

​’ನಿಮ್ಮ ಕಷ್ಟದ ಸಮಯದಲ್ಲಿ ನಾವಿದ್ದೇವೆ’: ಐಐಟಿ ವಿದ್ಯಾರ್ಥಿ ಸಾಹಿಲ್ ಕುಟುಂಬಕ್ಕೆ ರಾಹುಲ್ ಸಾಂತ್ವನ

ಇತ್ತೀಚೆಗೆ ದುರಂತ ಅಂತ್ಯಕಂಡ ಐಐಟಿ-ಬಾಂಬೆ (IIT-B) ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ...

ಬಂಗಾಳ ಗೆಲ್ಲಲು ಬಿಜೆಪಿ ಸುರಿದಿದ್ದು ₹286 ಕೋಟಿ; 4 ಚುನಾವಣೆಗಳ ಒಟ್ಟು ವೆಚ್ಚಕ್ಕಿಂತಲೂ ಹೆಚ್ಚು!

ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ ಬಿಜೆಪಿ ಒಟ್ಟು ₹529.38...