ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಹಿಂದಿನ ಹೇಳಿಕೆಗೆ ಆಡಳಿತ ಮಂಡಳಿ ಕ್ಷಮೆ, ಡೀನ್ ಅಮಾನತು

Date:

ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಗೆ ಮಣಿದಿರುವ ಆಡಳಿತ ಮಂಡಳಿಯು, ಆಡಳಿತಾತ್ಮಕ ವ್ಯವಹಾರಗಳ ಡೀನ್ ಪ್ರೊ. ಸೂರ್ಯನಾರಾಯಣ ದೂಲ್ಲಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಿದೆ. ವಿದ್ಯಾರ್ಥಿ ಸಾಹಿಲ್ ವಾಕೋಡೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಇವರ ಮೇಲಿದ್ದು, ವಾಕೋಡೆ ಕುಟುಂಬವು ದೌರ್ಜನ್ಯ ತಡೆ ಕಾಯ್ದೆಯಡಿ ಡೀನ್ ವಿರುದ್ಧ ಕಿರುಕುಳದ ಪ್ರಕರಣವನ್ನೂ ದಾಖಲಿಸಿದೆ.

- Advertisement -

ಸಮಗ್ರ ತನಿಖೆ ನಡೆಸದೆ ವಾಕೋಡೆ ಅವರಿಗೆ ‘ಮಾನನಷ್ಟ’ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಕ್ಕಾಗಿ ಸಂಸ್ಥೆಯು ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಕ್ಷಮೆಯಾಚಿಸಿದೆ. “ಸಾಹಿಲ್ ಅವರ ದುರದೃಷ್ಟಕರ ಸಾವಿನ ಸುತ್ತಲಿನ ಸಂದರ್ಭಗಳ ಕುರಿತು ನಮ್ಮ ಹಿಂದಿನ ಸಂವಹನದಲ್ಲಿದ್ದ ಹೇಳಿಕೆಗಳಿಗಾಗಿ ನಾವು ಕ್ಷಮೆಯಾಚಿಸುತ್ತೇವೆ. ಘಟನೆಯ ಹಿಂದಿನ ನಿಖರ ಕಾರಣಗಳು ಹಾಗೂ ವಿವರಗಳು ಸೂಕ್ತ ಪ್ರಾಧಿಕಾರಗಳ ತನಿಖೆಗೆ ಒಳಪಟ್ಟಿವೆ. ತನಿಖೆ ನಡೆಯುತ್ತಿರುವಾಗಲೇ, ಸೂಕ್ತ ಪ್ರಕ್ರಿಯೆಯ ಮೂಲಕ ದೃಢಪಡುವ ಮುನ್ನವೇ ಘಟನೆಯ ವಿವರಗಳನ್ನು ನಿರೂಪಿಸಿದ್ದು ಅಸಮರ್ಪಕವಾಗಿತ್ತು” ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರತಿಭಟನೆಯ ವಿಡಿಯೊಗಳು ವೈರಲ್ ಆದ ಬೆನ್ನಲ್ಲೇ, ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂಬ ವದಂತಿಗಳನ್ನು ಆಡಳಿತ ಮಂಡಳಿ ತಳ್ಳಿಹಾಕಿದೆ. ಕ್ಯಾಂಪಸ್ ನಿವಾಸಿಗಳಿಗೆ ಇ-ಮೇಲ್ ಕಳುಹಿಸಿರುವ ಸಂಸ್ಥೆಯ ನಿರ್ದೇಶಕ ಪ್ರೊ. ಶಿರೀಶ್ ಕೆದಾರೆ, ‘ಪ್ರೊ. ಸೂರ್ಯನಾರಾಯಣ ದೂಲ್ಲಾ ಅವರ ಡೀನ್ ಹುದ್ದೆಯನ್ನು ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ. ತನಿಖೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ. ಆದರೆ, ಇಂಧನ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಹುದ್ದೆಯಿಂದ ಅವರನ್ನು ಅಮಾನತುಗೊಳಿಸಿಲ್ಲ. ಈ ನಡುವೆ ಸಂಸ್ಥೆಯ ಆಡಳಿತ ಮಂಡಳಿಯ (ಬೋರ್ಡ್ ಆಫ್ ಗವರ್ನರ್ಸ್) ಸಭೆ ನಡೆಯುತ್ತಿದೆ.

ಭಾನುವಾರ ರಾತ್ರಿ ನಿರ್ದೇಶಕರು ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳೊಂದಿಗೆ ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳು 18 ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಸೂಚಿಸುವ ಬಾಹ್ಯ ಸದಸ್ಯರನ್ನೊಳಗೊಂಡ ಸ್ವತಂತ್ರ ತನಿಖಾ ಸಮಿತಿ ರಚನೆ, ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಅಧಿಕಾರಿಗಳ ಅಮಾನತು, ಕುಟುಂಬಕ್ಕೆ ಸೂಕ್ತ ಪರಿಹಾರ, ಮತ್ತು ಪ್ರಾಧ್ಯಾಪಕರಿಗೆ ನೀತಿ ಸಂಹಿತೆ ಹಾಗೂ ಸಂವೇದನಾಶೀಲತೆಯ ತರಬೇತಿ ನೀಡುವುದು ಈ ಪ್ರಮುಖ ಬೇಡಿಕೆಗಳಲ್ಲಿ ಸೇರಿವೆ. ಲೈವ್ ರೆಕಾರ್ಡಿಂಗ್ ನಡೆಯುತ್ತಿರುವಾಗಲೇ ನಿರ್ದೇಶಕರು ಬೇಡಿಕೆಗಳ ಪಟ್ಟಿಗೆ ಸಹಿ ಹಾಕಿದ್ದಾರೆ.

ಇಂಧನ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಸಾಹಿಲ್ ವಾಕೋಡೆ, ಮಿಡ್-ಸೆಮಿಸ್ಟರ್ ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ಸಿಕ್ಕಿಬಿದ್ದ ಕೆಲವೇ ಗಂಟೆಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಉತ್ತರಗಳಿಗಾಗಿ ಎಐ (AI) ಪ್ಲಾಟ್‌ಫಾರ್ಮ್‌ಗೆ ಅಪ್‌ಲೋಡ್ ಮಾಡಿದ್ದ ಎಂಬ ಆರೋಪ ಆತನ ಮೇಲಿತ್ತು. ಇದರ ಬೆನ್ನಲ್ಲೇ ಶುಕ್ರವಾರ ರಾತ್ರಿಯಿಂದ ಪೊವೈ ಕ್ಯಾಂಪಸ್‌ನಲ್ಲಿ ತೀವ್ರ ಪ್ರತಿಭಟನೆ ಭುಗಿಲೆದ್ದಿತ್ತು.

‘ವಿದ್ಯಾರ್ಥಿಯ ವಿರುದ್ಧ ಯಾವುದೇ ಶಿಸ್ತುಕ್ರಮ ಜರುಗಿಸಿರಲಿಲ್ಲ’ ಎಂದು ಸಂಸ್ಥೆ ಹೇಳಿಕೆ ನೀಡಿದ್ದರೂ, ಆತನನ್ನು ಅಮಾನತುಗೊಳಿಸುವ ಬೆದರಿಕೆ ಹಾಕಲಾಗಿತ್ತು ಎಂದು ಅನೇಕ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ವರ್ಷ ಕ್ಯಾಂಪಸ್‌ನಲ್ಲಿ ನಡೆದ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಲ್ಲಿ ಪುತಿನ್ ಪಕ್ಷ ಮತ್ತೊಂದು ಗೆಲುವಿನ ಹೊಸ್ತಿಲಲ್ಲಿ…

ರಷ್ಯಾದಲ್ಲಿ ನಡೆಯುತ್ತಿರುವ 2026ರ 'ಸ್ಟೇಟ್ ಡೂಮಾ' (ಸಂಸತ್) ಚುನಾವಣೆಯಲ್ಲಿ ಅಧ್ಯಕ್ಷ ವ್ಲಾಡಿಮಿರ್...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಕಾಂಗ್ರೆಸ್‌ಗೆ ಸವನಳ್ಳಿ, ಗೊಣಸಗಿ ಗ್ರಾಮದ ಮುಖಂಡರ ಸೇರ್ಪಡೆ; ಗ್ರಾಮಗಳ ಅಭಿವೃದ್ಧಿಗೆ ಎಂ.ಬಿ ಪಾಟೀಲ ಕರೆ

ಹೊಸ ಹಾಗೂ ಹಿರಿಯ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...